ಸರ್ ಎಂ ವಿಶ್ವೇಶ್ವರಯ್ಯ ಜನ್ಮದಿನೋತ್ಸವ

KannadaprabhaNewsNetwork |  
Published : Sep 24, 2025, 01:01 AM IST

ಸಾರಾಂಶ

ಕನ್ನಡ ಸಾಹಿತ್ಯ ಪರಿಷತ್‌ ಸಂಸ್ಥಾಪಕರಲ್ಲಿ ಒಬ್ಬರಾದ ಸರ್‌ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಜನ್ಮದಿನೋತ್ಸವ ಇತ್ತೀಚೆಗೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲಿ ಒಬ್ಬರಾದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರ ಜನ್ಮದಿನೋತ್ಸವ ಇತ್ತೀಚೆಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಎಂ ಪಿ ಕೇಶವ ಕಾಮತ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ನೂರು ವರ್ಷಗಳ ಹಿಂದೆ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗಾರಿಕಾ ಕ್ರಾಂತಿ ನಡೆಸಿ ಕೃಷ್ಣರಾಜಸಾಗರ ಕೆ ಆರ್ ಎಸ್ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು ಸರ್ ಎಂ ವಿಶ್ವೇಶ್ವರಯ್ಯನವರು 1861 ರ 15 ಸೆಪ್ಟೆಂಬರ್ ರಲ್ಲಿ ಜನಿಸಿದರು. ಭಾರತೀಯ ಇಂಜಿನಿಯರ್, ವಿದ್ವಾಂಸ, ರಾಜಕಾರಣಿ ಮತ್ತು 1912 ರಿಂದ 1918 ರವರೆಗೆ ಮೈಸೂರಿನ ದಿವಾನ್. ಅವರು 1955 ರಲ್ಲಿ ಭಾರತ ಗಣರಾಜ್ಯದ ಅತ್ಯುನ್ನತ ಗೌರವವಾದ ಭಾರತ ರತ್ನವನ್ನು ಪಡೆದರು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ಮಾತನಾಡುತ್ತಾ ಸರ್ ಎಂ. ವಿಶ್ವೇಶ್ವರಯ್ಯ ಅವರ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ''''''''ಭಾರತರತ್ನ'''''''' ಪಡೆದವರು. ಅವರು ತಮ್ಮ ಎಂಜಿನಿಯರಿಂಗ್ ಕೌಶಲ್ಯಗಳ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ, ಅಲ್ಲದೆ ಕೃಷ್ಣರಾಜಸಾಗರ ಅಣೆಕಟ್ಟು, ಬ್ಲಾಕ್ ನೀರಾವರಿ ವ್ಯವಸ್ಥೆ, ಶಾಲಾ-ಕಾಲೇಜುಗಳು ಮತ್ತು ಕೈಗಾರಿಕೆಗಳನ್ನು ಸ್ಥಾಪಿಸಿ, ಆರ್ಥಿಕ ಮತ್ತು ಸಾಮಾಜಿಕ ಕ್ರಾಂತಿಗೆ ಕಾರಣರಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್ಐ ಮುನೀರ್ ಅಹ್ಮದ್ ರವರು ಮಾತನಾಡುತ್ತಾ ಸರ್ ಎಂ ವಿಶ್ವೇಶ್ವರಯ್ಯ ರವರು ಪ್ರಾಮಾಣಿಕ, ನಿಸ್ವಾರ್ಥ ಮತ್ತು ದೂರದೃಷ್ಟಿಯ ಕೆಲಸವು ಇಂದಿನ ಸಮಾಜಕ್ಕೆ ಒಂದು ಆದರ್ಶಪ್ರಾಯ ಉದಾಹರಣೆಯಾಗಿದೆ.

ಅವರ ಜನ್ಮ ದಿನವಾದ ಸೆಪ್ಟೆಂಬರ್ 15ರಂದು "ಇಂಜಿನಿಯರ್ಸ್ ಡೇ " ಆಚರಿಸಲಾಗುತ್ತದೆ.

ಅವರ ನೆನಪಿಗಾಗಿ ಬೆಂಗಳೂರಿನಲ್ಲಿ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಗೌರವಕೋಶ ಅಧಿಕಾರಿ ಎಸ್ ಎಸ್ ಸಂಪತ್ ಕುಮಾರ್, ಸಂಘಟನಾ ಕಾರ್ಯದರ್ಶಿ ವಾಸು ರೈ, ಕೊಡಗು ಜಿಲ್ಲಾ ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ ಕುಶಾಲಪ್ಪ, ಸದಸ್ಯರಾದ ಪ್ರಭು ರೈ, ತೆನ್ನಿರ ಮಹಿನಾ, ಕಚೇರಿ ಸಿಬ್ಬಂದಿ ರೇಣುಕಾ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ