ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆಯಂತೆ 25,26ರಂದು ರಾಜ್ಯಾದ್ಯಂತ ನಡೆಯಲಿರುವ ಎಸ್ಐಆರ್ ಮಹಾ ಸಂಪರ್ಕ ಅಭಿಯಾನವನ್ನು ಜಿಲ್ಲೆಯಾದ್ಯಂತ ಸಂಘಟಿತ ಪ್ರಯತ್ನದ ಮೂಲಕ ಯಶಸ್ವಿಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ದ ಕರಾವಳಿಯಾದ್ಯಂತ ಬೃಹತ್ ಹೋರಾಟದ ರೂಪುರೇಷೆಗಳನ್ನು ಸಿದ್ದಪಡಿಸಲಾಗುವುದು ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪಕ್ಷದ ಸಂಘಟನಾತ್ಮಕ ವಿಚಾರಗಳ ಕುರಿತು ಮಾಹಿತಿ ನೀಡಿದರು. ಮಂಡಲಗಳ ಹಾಗೂ ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಚಟುವಟಿಕೆಗಳ ವಿಸ್ತೃತ ವರದಿಯನ್ನು ಮಂಡಿಸಿದರು.ಜಿಲ್ಲಾ ಪ್ರಮುಖರು, ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಮತ್ತು ಸಂಚಾಲಕರು ಇದ್ದರು.ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್ ಗೀತೆ ಹಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ ಸ್ವಾಗತಿಸಿ, ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿದರು.