ಮುಕ್ತ, ಪಾರದರ್ಶಕ, ದಕ್ಷತೆಯಿಂದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣ: ಜಿಲ್ಲಾಧಿಕಾರಿ

KannadaprabhaNewsNetwork |  
Published : Oct 14, 2026, 01:45 AM IST
ಕ್ಯಾಪ್ಷನ12ಕೆಡಿವಿಜಿ36 ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು | Kannada Prabha

ಸಾರಾಂಶ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕ, ದಕ್ಷತೆ ಮತ್ತು ಪ್ರಾಮಾಣಿಕವಾಗಿ ಪೂರ್ಣಗೊಳಿಸಲು ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಉತ್ತಮ ಕೆಲಸ ನಿರ್ವಹಿಸಿದ್ದಾರೆ. ಯಾವುದೇ ದೂರುಗಳಿಗೆ ಆಸ್ಪದ ನೀಡಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.

- ಅ.27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿ.ಎಂ.ಗಂಗಾಧರ ಸ್ವಾಮಿ - - -

ದಾವಣಗೆರೆ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕ, ದಕ್ಷತೆ ಮತ್ತು ಪ್ರಾಮಾಣಿಕವಾಗಿ ಪೂರ್ಣಗೊಳಿಸಲು ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಉತ್ತಮ ಕೆಲಸ ನಿರ್ವಹಿಸಿದ್ದಾರೆ. ಯಾವುದೇ ದೂರುಗಳಿಗೆ ಆಸ್ಪದ ನೀಡಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪದವೀಧರ ಕ್ಷೇತ್ರದ ಚುನಾವಣೆ ಕುರಿತು ಹಾಗೂ ಚುನಾವಣೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಶೇ.100ರಷ್ಟು ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಒಟ್ಟು 7,086 ನೋಟಿಸ್‌ ನೀಡಲಾಗಿದೆ. ಇದರಲ್ಲಿ 180 ಮತದಾರರು ಮೃತಪಟ್ಟವರು ಮತ್ತು ಎರಡು ಕಡೆ ಇರುವವರು, ನೇಪಾಳಿ 5 ಪ್ರಜೆಗಳು, ವಿದೇಶದಲ್ಲಿರುವ ಒಬ್ಬರು ಮಾತ್ರ ಪಟ್ಟಿಯಿಂದ ತಿರಸ್ಕರಿಸಲಾಗಿದೆ. ಇದಕ್ಕೆ ದಾಖಲೆ ಸಮೇತ ಕಾರಣ ತಿಳಿಸಿ, ಈ ಎಲ್ಲ ಪಟ್ಟಿಗಳನ್ನು ಎಲ್ಲ ರಾಜಕೀಯ ಪಕ್ಷಗಳಿಗಳ ಜೊತೆ ಹಂಚಿಕೊಳ್ಳಲಾಗಿದೆ. ಯಾವ ಪಕ್ಷ ಮತ್ತು ಯಾವ ಕ್ಷೇತ್ರವೆಂಬ ಸಂಪೂರ್ಣ ಮಾಹಿತಿ ನೀಡಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲಾಗುವುದು ಎಂದರು.

ನಮೂನೆ 6, 6A, 7 ಮತ್ತು 8ರ ಮತದಾರರ ಪಟ್ಟಿಗೆ ಸೇರ್ಪಡೆ, ಪಟ್ಟಿಯಲ್ಲಿನ ಹೆಸರು ತಿದ್ದುಪಡಿ, ಮತಪಟ್ಟಿಯಿಂದ ವರ್ಗಾವಣೆ ಮಾಹಿತಿಯನ್ನು ಕೂಡ ಜಿಲ್ಲೆಯ ಎಲ್ಲ ರಾಜಕೀಯ ಪಕ್ಷಗಳಿಗೆ ಒದಗಿಸಲಾಗಿದೆ. ಮತದಾರರ ಪಟ್ಟಿಗೆ ಸೇರ್ಪಡೆ, ಪಟ್ಟಿಯಲ್ಲಿನ ಹೆಸರು ತಿದ್ದುಪಡಿ, ಮತಪಟ್ಟಿಯಿಂದ ವರ್ಗಾವಣೆ ನಿರಂತರ ಪ್ರಕ್ರಿಯೆಯಾಗಿದೆ. ಮತದಾರರು ಯಾವಾಗ ಬೇಕಾದರೂ ಈ ಪ್ರಕ್ರಿಯೆಗಳನ್ನು ಕೈಗೊಳ್ಳಬಹುದು ಎಂದು ತಿಳಿಸಿದರು.

ಚುನಾವಣಾ ಆಯೋಗದ ನಿರ್ದೇಶನಗಳು ಮತ್ತು ಸುತ್ತೋಲೆಗಳಂತೆ ಎಲ್ಲ ಸಿಬ್ಬಂದಿ ಅಧಿಕಾರಿಗಳು ತಮ್ಮನ್ನು ತಾವು ತೊಡಗಿಸಿಕೊಂಡು ಎಸ್.ಐ.ಆರ್. ಕೆಲಸವನ್ನು ಪರಿಪೂರ್ಣವಾಗಿ ಮುಗಿಸಿಕೊಟ್ಟಿದ್ದಾರೆ ಎಂದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

- - -

-12ಕೆಡಿವಿಜಿ36: ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಸಮಾಧಾನ ಬದಿಗಿಟ್ಟು ಲಿಂಬಿಕಾಯಿ ಪರ ಪ್ರಚಾರ: ಕುಬೇರಪ್ಪ
ಗೊಂಬೆಗಳ ಪ್ರದರ್ಶನ ಸಂಸ್ಕೃತಿ, ಸಂಸ್ಕಾರಗಳ ಭಾವನಾತ್ಮಕ ಬೆಸುಗೆ: ಶಕುಂತಲಾ ಆನಂದ್