ಹಾನಗಲ್ಲ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದಿಂದ ಎಸ್‌ಐಆರ್ ವಾರ್ ರೂಂ

KannadaprabhaNewsNetwork |  
Published : Jul 13, 2026, 01:15 AM IST
ಹಾನಗಲ್ ನಗರದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ತೆರೆಯಲಾಗಿರುವ ವಾರ್ ರೂಂ ಕಾರ್ಯ ಚಟುವಟಿಕೆಗಳಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ ನೀಡಿದರು. | Kannada Prabha

ಸಾರಾಂಶ

ಹಾನಗಲ್ ನಗರದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ತೆರೆಯಲಾಗಿರುವ ವಾರ್ ರೂಂ ಕಾರ್ಯ ಚಟುವಟಿಕೆಗಳಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ ನೀಡಿದರು.

ಹಾನಗಲ್ಲ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಹಿನ್ನೆಲೆಯಲ್ಲಿ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದಿಂದ ತೆರೆಯಲಾಗಿರುವ ವಾರ್ ರೂಂ ಕಾರ್ಯ ಚಟುವಟಿಕೆಗಳಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹ ಮತದಾರರೂ ಸಹ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಮತ ಹಕ್ಕು ಉಳಿಸಿಕೊಳ್ಳಲು ಮುಂದಾಗಬೇಕಿದೆ. ಈ ಪ್ರಕ್ರಿಯೆ ಕುರಿತಾಗಿ ಏನೇ ಗೊಂದಲ, ಸಮಸ್ಯೆ ಇದ್ದರೂ ಸಹ ವಾರ್ ರೂಂ ಸಂಪರ್ಕಿಸಿ ಪರಿಹರಿಸಿಕೊಳ್ಳಬೇಕಿದೆ. ಕೇರಳ ರಾಜ್ಯದಲ್ಲಿ ಈ ಪ್ರಕ್ರಿಯೆ ನಡೆದ ಸಂದರ್ಭದಲ್ಲಿ ಅಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಅರ್ಹರ ಹೆಸರು ಪಟ್ಟಿಯಲ್ಲಿ ಕೈಬಿಟ್ಟು ಹೋಗದಂತೆ ಗಮನ ಹರಿಸಿದ ಪರಿಣಾಮ ಪರಿಷ್ಕರಣೆ ಅಲ್ಲಿ ಯಶಸ್ವಿಯಾಗಿ ನಡೆದಿದೆ. ನಮ್ಮಲ್ಲಿಯೂ ಸಹ ಕಾರ್ಯಕರ್ತರು ಎಚ್ಚರಿಕೆ ವಹಿಸಬೇಕಿದೆ ಎಂದರು.

ಪ್ರಕ್ರಿಯೆ ಕುರಿತು ಮಾಹಿತಿಗೆ ಹಾನಗಲ್ ಬ್ಲಾಕ್ ಮೊ. ೮೮೮೪೨೫೬೮೪೭, ಅಕ್ಕಿಆಲೂರು ಬ್ಲಾಕ್ ಮೊ. ೯೯೦೧೯೯೫೬೪೩, ಹಾನಗಲ್ ನಗರ ಮೊ. ೯೯೧೬೨೬೧೫೮೨, ತಮ್ಮ ಜನಸಂಪರ್ಕ ಕಚೇರಿ ಸಹಾಯವಾಗಿ ೮೧೨೦೭೮೧೨೧೭ ಸಂಪರ್ಕಿಸುವಂತೆ ಶಾಸಕ ಮಾನೆ ಮನವಿ ಮಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಸನಗೌಡ ಪಾಟೀಲ, ಮಂಜು ಗೊರಣ್ಣನವರ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ವೀರಪ್ಪ ಬೈಲವಾಳ, ಕರ್ನಾಟಕ ಹಾಲು ಉತ್ಪಾದಕ ಸಹಕಾರಿ ಮಹಾಮಂಡಳದ ನಿರ್ದೇಶಕ ಚಂದ್ರಪ್ಪ ಜಾಲಗಾರ, ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಅಧ್ಯಕ್ಷ ಪುಟ್ಟಪ್ಪ ನರೇಗಲ್, ತಾಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಪಾಟೀಲ, ಮಾಜಿ ಸದಸ್ಯ ಮೆಹಬೂಬಅಲಿ ಬ್ಯಾಡಗಿ, ಮುಖಂಡರಾದ ರವಿ ದೇಶಪಾಂಡೆ, ಆದರ್ಶ ಶೆಟ್ಟಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಾನಗರ ಪಾಲಿಕೆಯ ಆರಂಭ ಶೂರತ್ವ; ಮತ್ತೆ ಫುಟ್‌ಪಾತ್ ಅತಿಕ್ರಮಣ ಮಾಡಿದ ವ್ಯಾಪಾರಿಗಳು
ವರ್ತಮಾನದ ಅರಿವಿನಿಂದ ವ್ಯಕ್ತಿತ್ವ ವಿಕಸನ: ಯಮುನಾ ಶ್ರೀನಿಧಿ