
ಕನ್ನಡಪ್ರಭ ವಾರ್ತೆ ಮಡಿಕೇರಿ
ಎಸ್‌ಡಿಪಿಐ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ನಡೆದ ಜನಾಗ್ರಹ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಎನ್‌ಆರ್‌ಸಿ ವಿಚಾರ ಕೋರ್ಟ್ನಲ್ಲಿ ಕಾರಣ ಚುನಾವಣಾ ಆಯೋಗದ ಮೂಲಕ ಹಿಂಬಾಗಲಿನಿಂದ ಎಸ್‌ಐಆರ್ ಪರೀಕ್ಷೆಯನ್ನು ಒಡ್ಡಲಾಗಿದೆ. ಇದರಿಂದ ಬಡವರು, ಕೂಲಿ ಕಾರ್ಮಿಕರು ಮತದಾನದ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ ಎಂದು ಆರೋಪಿಸಿದರು.ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಮಾತನಾಡಿ, ದೇಶದಲ್ಲಿ ಬಿಜೆಪಿಯನ್ನು ಬಲವಾಗಿ ಎದುರಿಸಬಲ್ಲ ಶಕ್ತಿ ಇರುವುದು ಎಸ್‌ಡಿಪಿಐಗೆ ಮಾತ್ರ, ದೇಶ ಕಾಂಗ್ರೆಸ್ ಮುಕ್ತವಾಗುತ್ತಿದೆ, ಆ ಪಕ್ಷಕ್ಕೆ ಇನ್ನು ಉಳಿಗಾವಿಲ್ಲ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರು ಎಸ್‌ಐಅರ್ ಎನ್ನುವುದು ನುಸುಳುಕೋರರನ್ನು ಪತ್ತೆ ಹಚ್ಚುವ ಪ್ರಕ್ರಿಯೆಯಲ್ಲ, ದೇಶದ ಪೌರತ್ವವನ್ನು ಕಸಿದುಕೊಳ್ಳುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.
ಎಸ್‌ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯ ಅಶ್ರಫ್ ಮೌಲವಿ ಮೂವಾಟ್ಟುಪುಝ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯ ಹಿಂದೆ ದುರುದ್ದೇಶವಿದ್ದು, ಜನರು ಜಾಗೃತರಾಗಿ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದರು.ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟ ನಂಜಯ್ಯ, ಪತ್ರಕರ್ತ ರಾ.ಚಿಂತನ್, ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷೆ ಶಾಹಿದಾ ತಸ್ನೀಮ್, ಎಸ್‌ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್ ಅಡ್ಕಾರ್ ಮಾತನಾಡಿದರು.
ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಎಂ.ಕೆ.ಮನ್ಸೂರ್ ಆಲಿ, ಕಾರ್ಯದರ್ಶಿ ಮೇರಿ ವೇಗಸ್, ಸದಸ್ಯ ಅಬ್ದುಲ್ ಅಡ್ಕಾರ್, ನಗರಾಧ್ಯಕ್ಷ ಮೊಹಮ್ಮದ್ ಅಲಿ, ನಗರಸಭಾ ಸದಸ್ಯೆ ನೀಮಾ ಅರ್ಷದ್, ಕಾರ್ಯದರ್ಶಿ ಬಶೀರ್ ಅಹಮ್ಮದ್, ಕೆ.ಸಿ.ಬಷೀರ್, ಅಬ್ದುಲ್ ಜಮೀರ್, ಫಾರುಕ್ ಖಾನ್, ಷರೀಫ್, ಭಾಷಾ, ಹನೀಫ್ ವಿರಾಜಪೇಟೆ, ಜಕ್ರಿಯ ಕುಶಾಲನಗರ, ಹಫೀಜ್ ಮತ್ತಿತರರು ಉಪಸ್ಥಿತರಿದ್ದರು. ಸಮಾವೇಶಕ್ಕೂ ಮೊದಲು ಎಸ್‌ಡಿಪಿಐ ಮುಖಂಡರು ಹಾಗೂ ಕಾರ್ಯಕರ್ತರು ಎವಿ ಶಾಲೆ ಬಳಿಯಿಂದ ಗಾಂಧಿ ಮೈದಾನದವರೆಗೆ ಘೋಷಣೆಗಳೊಂದಿಗೆ ರ‍್ಯಾಲಿ ನಡೆಸಿದರು.