ಸಿರವಾರದಲ್ಲಿ ಮಂಗಳವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.
ಸಿರವಾರ: ಪಟ್ಟಣದಲ್ಲಿ ತಾಲೂಕು ಆಡಳಿತ ಸೇರಿದಂತೆ ವಿವಿಧೆಡೆ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು.
ತಹಸೀಲ್ದಾರ್ ರವಿ ಎಸ್.ಅಂಗಡಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಪ್ರತಿಯೊಬ್ಬರು ಈ ದಿನವನ್ನು ಸಂಭ್ರಮದಿಂದ ಆಚರಣೆ ಮಾಡಬೇಕು ಎಂದು ಹೇಳಿದರು.
ದೇವದುರ್ಗದ ಸರ್ಕಾರಿ ಕಾಲೇಜು ಉಪನ್ಯಾಸಕ ಸುಭಾಸ ಪಾಟೀಲ ಕಲ್ಯಾಣ ಕರ್ನಾಟಕದ ಇತಿಹಾಸದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಕೆಲಸ ನಿರ್ವಹಿಸಿದ ಹಾಗೂ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಅಂಗಡಿಗಳಿಗೆ ಅಲಂಕಾರ ಮಾಡಿದವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪಪಂ ಅಧ್ಯಕ್ಷ ವೈ.ಭೂಪನಗೌಡ, ಉಪಾಧ್ಯಕ್ಷೆ ಲಕ್ಷ್ಮಿಆದೆಪ್ಪ, ಪಪಂ ಮುಖ್ಯಾಧಿಕಾರಿ ತಿಮ್ಮಪ್ಪ ಜಗಲಿ, ತಾಪಂ ಇಒ ಶಶಿಧರ ಸ್ವಾಮಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳು, ಶಾಲಾ ಮಕ್ಕಳು ಇದ್ದರು.
*ವಿವಿಧಡೆ ಧ್ವಜಾರೋಹಣೆ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಪಪಂ ಕಚೇರಿಯಲ್ಲಿ ಮುಖ್ಯಾಧಿಕಾರಿ ತಿಮ್ಮಪ್ಪ ಜಗಲಿ, ಪೊಲೀಸ್ ಠಾಣೆಯಲ್ಲಿ ಸಿಪಿಐ ಎಂ.ಶಶಿಕಾಂತ, ನೀರಾವರಿ ಇಲಾಖೆಯಲ್ಲಿ ಎಇಇ ವಿಜಯಲಕ್ಷ್ಮೀ ಪಾಟೀಲ, ತಾಪಂ ಕಚೇರಿಯಲ್ಲಿ ಇಒ ಶಶಿಧರ ಸ್ವಾಮಿ, ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಮುಖ್ಯಶಿಕ್ಷಕ ಕೇಶಪ್ಪ ಕಮ್ಮಾರ, ಬಾಲಕಿಯರ ಪ್ರೌಢಶಾಲೆಯಲ್ಲಿ ದೇವೇಂದ್ರ ನಾಯ್ಕ್ ಅವರು ಧ್ವಜಾರೋಹಣ ನೆರವೇರಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.