ಸಿರಡಿ ಸಾಯಿ ಬಾಬಾರ ವಿಗ್ರಹ ಪ್ರತಿಷ್ಠಾನ ಮಹೋತ್ಸವ

KannadaprabhaNewsNetwork | Published : Mar 7, 2025 12:51 AM

ಸಾರಾಂಶ

ಗ್ರಾಮೀಣ ಪ್ರದೇಶದ ಜನರಿಗೆ ಅಳಿಲು ಸೇವೆ ಮಾಡಬೇಕೆಂಬ ಉದ್ದೇಶದಿಂದ ಅತ್ಯುನ್ನತ ಶಾಲೆಯನ್ನು ಆರಂಭಿಸಲಾಗುತ್ತಿದೆ. ಮಹದೇಶ್ವರ ಹಾಗೂ ಬಾಬಾ ಅವರು ನಾನು ನಂಬಿದ ದೇವರುಗಳಾಗಿವೆ. ವಿದ್ಯಾರ್ಥಿಗಳಿಗೆ ಭಕ್ತಿಯ ವಾತವರಣ ನಿರ್ಮಿಸಬೇಕೆಂದು ನಾನು ಇಷ್ಟಪಡುವ ಶಿರಡಿ ಸಾಯಿ ಬಾಬಾರ ದೇವಾಲಯವನ್ನು ನಿರ್ಮಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಪಟ್ಟಣದ ಶೆಟ್ಟಹಳ್ಳಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಾಯಿ ಮಂದಿರದಲ್ಲಿ ಸಿರಡಿ ಸಾಯಿ ಬಾಬಾರ ವಿಗ್ರಹ ಪ್ರತಿಷ್ಠಾನ ಮಹೋತ್ಸವವು ಭಕ್ತಿ ಪ್ರಧಾನವಾಗಿ ಜರುಗಿತು.

ಪಟ್ಟಣದ ಮಹದೇಶ್ವರ ದೇವಾಲಯ ಆವರಣದಲ್ಲಿ ಸಿರಡಿ ಸಾಯಿ ಬಾಬಾರ ವಿಗ್ರಹಕ್ಕೆ ಪೂಜೆ ಸಲ್ಲಿಸಿ ಜಾನಪದ ಕಲಾ ತಂಡಗಳೊಂದಿಗೆ ಮೆರವಣಿಗೆ ಮೂಲಕ ಸಾಯಿ ಮಂದಿರಕ್ಕೆ ಕರೆತರಲಾಯಿತು.

ಗುರುವಾರ ಮುಂಜಾನೆಯಿಂದಲೇ ಸಾಯಿ ಮಂದಿರದಲ್ಲಿ ವಿವಿಧ ಹೋಮ ಹವನ ಪೂಜಾ ಕೈಂಕರ್ಯಗಳು ಭಕ್ತಿ ಪ್ರಧಾನವಾಗಿ ಜರುಗಿತು. ಬಿ.ಎಂ.ಎಜುಕೇಷನಲ್ ಟ್ರಸ್ಟ್ ಕಾರ್ಯದರ್ಶಿ ಎಂ.ರಾಮಕೃಷ್ಣ ಕುಟುಂಬ ಪೂಜೆಯಲ್ಲಿ ಪಾಲ್ಗೊಂಡು ಧನ್ಯತೆ ಮರೆದರು.

ವಿವಿಧ ಗ್ರಾಮಗಳಿಂದ ಸಾವಿರಾರು ಭಕ್ತರಿಗೆ ದೇವಾಲಯಕ್ಕೆ ಆಗಮಿಸಿ ಸಿರಡಿ ಸಾಯಿ ಬಾಬಾರ ದರ್ಶನ ಪಡೆದರು. ಪ್ರಸಾದ ವಿನಿಯೋಗ ನಡೆಯಿತು.

ಟ್ರಸ್ಟ್ ಕಾರ್ಯದರ್ಶಿ ಎಂ.ರಾಮಕೃಷ್ಣ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಅಳಿಲು ಸೇವೆ ಮಾಡಬೇಕೆಂಬ ಉದ್ದೇಶದಿಂದ ಅತ್ಯುನ್ನತ ಶಾಲೆಯನ್ನು ಆರಂಭಿಸಲಾಗುತ್ತಿದೆ. ಮಹದೇಶ್ವರ ಹಾಗೂ ಬಾಬಾ ಅವರು ನಾನು ನಂಬಿದ ದೇವರುಗಳಾಗಿವೆ. ವಿದ್ಯಾರ್ಥಿಗಳಿಗೆ ಭಕ್ತಿಯ ವಾತವರಣ ನಿರ್ಮಿಸಬೇಕೆಂದು ನಾನು ಇಷ್ಟಪಡುವ ಶಿರಡಿ ಸಾಯಿ ಬಾಬಾರ ದೇವಾಲಯವನ್ನು ನಿರ್ಮಿಸಲಾಗಿದೆ ಎಂದರು.

ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಉದ್ದೇಶದಿಂದ ವಾಸಕ್ಕಾಗಿ ಮನೆ ನಿರ್ಮಿಸಿಕೊಂಡಿದ್ದು, ಒಟ್ಟಾರೆ ಉತ್ತಮ ಪರಿಸರದೊಂದಿಗೆ ದೇಗುಲ ಹಾಗೂ ಶಿಕ್ಷಣ ಸಂಸ್ಥೆ ನಿರ್ಮಾಣಗೊಂಡಿದೆ ಎಂದು ಹೇಳಿದರು. ವಿವಿಧ ಗಣ್ಯರು ಆಗಮಿಸಿ ಸಿರಡಿ ಸಾಯಿ ಬಾಬಾ ದರ್ಶನ ಪಡೆದರು. ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.

ನಾಳೆ ನಗರ, ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ನಿಲುಗಡೆ

ಮಂಡ್ಯ: 66/11 ಕೆ.ವಿ. ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಮಾರ್ಚ್ 8 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಗೊಳಿಸಲಾಗುತ್ತಿದೆ.

ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದ ನಗರ ಪ್ರದೇಶ ವ್ಯಾಪ್ತಿಯ ಸುಭಾಷ್‌ನಗರ, ಆಶೋಕನಗರ, ವಿ.ವಿ. ರೋಡ್, ಹೊಸಹಳ್ಳಿ, ವಿನಾಯಕ ಬಡಾವಣೆ, ನೂರು ಅಡಿ ರೋಡ್, ನೆಹರು ನಗರ, ಹೊಸಹಳ್ಳಿ, ದ್ವಾರಕನಗರ, ಗಾಂಧಿನಗರ, NGO’S layout, , ಶ್ರೀ ರಾಮ ನಗರ, ಕಾವೇರಿ ನಗರ 1 & 2 ನೇ ಹಂತ, ಚಂದ್ರ ದರ್ಶನ, ಚಾಮುಂಡೇಶ್ವರಿ ನಗರ, ಅನ್ನಪೂರ್ಣೇಶ್ವರಿ ನಗರ, ಶಂಕರನಗರ, ಇಂಡುವಾಳು, ಕಿರಗಂದೂರು, ಕಲ್ಲಹಳ್ಳಿ. ಕ್ಯಾತುಂಗೆರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು

ಗ್ರಾಮಾಂತರ ಪ್ರದೇಶಗಳಾದ ಕಾರಸವಾಡಿ, ಮಂಗಲ, ಹನಿಯಂಬಾಡಿ, ಚೀರನಹಳ್ಳಿ, ಹೆಬ್ಬಕವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ, ಎ. ಹುಲಿಕೆರೆ, ಬಿ.ಹುಲಿಕೆರೆ. ಮತ್ತು ಐ.ಪಿ ಮಾರ್ಗಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಸಾರ್ವಜನಿಕರ ಮತ್ತು ಗ್ರಾಹಕರ ಕಂಪನಿಯೊಂದಿಗೆ ಸಹಕರಿಸಬೇಕೆಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಜಿಲ್ಲಾ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

Share this article