ವಿದ್ಯಾರ್ಥಿಗಳು ಜೀವನದಲ್ಲಿ ಸೂಕ್ತ ಮಾರ್ಗ ಆಯ್ಕೆ ಮಾಡಲಿ: ಸಿಸ್ಟರ್‌ ಉಷಾ ಸಲಹೆ

KannadaprabhaNewsNetwork |  
Published : Feb 08, 2025, 12:32 AM IST
ನರಸಿಂಹರಾಜಪುರ ತಾಲೂಕಿನ ಮೆಣಸೂರು ಮೌಂಟ್‌ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಬೀಳ್ಕೊಡಿಗೆ ಸಮಾರಂಭವನ್ನು ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಉಷಾ ಉದ್ಘಾಟಿಸಿದರು | Kannada Prabha

ಸಾರಾಂಶ

ನರಸಿಂಹರಾಜಪುರ, ವಿದ್ಯಾರ್ಥಿಗಳು ಜೀವನದಲ್ಲಿ ಸರಿಯಾದ ಮಾರ್ಗ ಆಯ್ಕೆ ಮಾಡಿಕೊಂಡರೆ ಗುರಿ ತಲಪಲು ಸಾಧ್ಯವಾಗುತ್ತದೆ ಎಂದು ಮೌಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಉಷಾ ಹೇಳಿದರು.

ಮೌಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡಿಗೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ವಿದ್ಯಾರ್ಥಿಗಳು ಜೀವನದಲ್ಲಿ ಸರಿಯಾದ ಮಾರ್ಗ ಆಯ್ಕೆ ಮಾಡಿಕೊಂಡರೆ ಗುರಿ ತಲಪಲು ಸಾಧ್ಯವಾಗುತ್ತದೆ ಎಂದು ಮೌಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಉಷಾ ಹೇಳಿದರು.ಗುರುವಾರ ತಾಲೂಕಿನ ಮೆಣಸೂರು ಗ್ರಾಮದಲ್ಲಿರುವ ಮೌಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು. ಉತ್ತಮ ಸ್ನೇಹಿತರ ಸಂಘ ಮಾಡಬೇಕು. ಜೀವನದಲ್ಲಿ ಒಂದು ಗುರಿ ಇಟ್ಟುಕೊಂಡು ಅದನ್ನು ಸಾಕಾರಗೊಳಿಸಲು ಪ್ರಯತ್ನ ನಡೆಸಬೇಕು ಎಂದು ಸಲಹೆ ನೀಡಿದರು.

ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಸ್ವಪ್ನಹೆಗ್ಡೆ ಮಾತನಾಡಿ, ವಿದ್ಯಾರ್ಥಿಗಳು ಸಮಯ ಸದುಪಯೋಗಪಡಿಸಿಕೊಳ್ಳಬೇಕು. ಮಾನಸಿಕವಾಗಿ ಸ್ಥಿರತೆ ಸಾಧಿಸಿದರೆ ಸಾಧನೆ ಸಾಧ್ಯವಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸಾಮರ್ಥ್ಯವಿದ್ದು ಅದನ್ನು ಸಮರ್ಪಕವಾಗಿ ಬಳಸಿಕೊಂಡರೆ ಮಾತ್ರ ಯಶಸ್ಸು ಸಾಧಿಸಬಹುದು. ತಪ್ಪುಗಳನ್ನು ಸರಿಪಡಿಸಿಕೊಂಡು ಸಮಾಜಕ್ಕೆ ಉತ್ತಮ ಆಸ್ತಿಯಾಗಬೇಕು ಎಂದರು.

ಇತಿಹಾಸ ಉಪನ್ಯಾಸಕಿ ಅನುಷಾ, ಸಮಾಜಶಾಸ್ತ್ರ ಉಪನ್ಯಾಸಕ ಐ.ಎಂ.ರಾಜೀವ, ಕನ್ನಡ ಉಪನ್ಯಾಸಕಿ ನಂದಿನಿ ಆಲಂದೂರು, ಅರ್ಥಶಾಸ್ತ್ರ ಉನ್ಯಾಸಕ ನಾಗರಾಜ್, ವ್ಯವಹಾರ ಅಧ್ಯಯನ ವಿಭಾಗದ ಉಪನ್ಯಾಸಕ ಅರವಿಂದ್ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಳೆದ ಬಾರಿಯ ದ್ವಿತೀಯ ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ರಿತಿನ್ ಕೆ ಅಲೆಕ್ಸ್ ಅವರಿಗೆ ಕಾಲೇಜಿನ ಹಳೇ ವಿದ್ಯಾರ್ಥಿನಿ ಟಿನೂ ಸ್ಮಾರಕ ನಗದು ಬಹುಮಾನ ನೀಡಿ ಗೌರವಿಸಲಾಯಿತು.ವಿದ್ಯಾರ್ಥಿಗಳಾದ ದರ್ಶನ, ಬಿಬಿ ಆಯಿಷಾ, ಸುಲೆಮಾನ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ