ಇಂದಿನಿಂದ ಹೋರಾಟ, ರಜೆ ಮಂಜೂರಿಗೆ ಕೋರಿಕೆ

KannadaprabhaNewsNetwork |  
Published : Oct 04, 2024, 01:02 AM IST
 ಗಜೇಂದ್ರಗಡ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಬಡಿಗೇರ ಅವರಿಗೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ನೌಕರರ ಸಂಘದ ಮುಖಂಡರು ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ವಿವಿಧ ಬೇಡಿಕೆ ಈಡೇರಿಕೆಗಾಗಿ ಅ. 4ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ವತಿಯಿಂದ ಅನಿರ್ದಿಷ್ಟಾವಧಿ ಧರಣಿ ನಡೆಯಲಿದ್ದು, ರಜೆ ಮಂಜೂರು ಮಾಡುವಂತೆ ನೌಕರರು ಕೋರಿದ್ದಾರೆ.

ಗಜೇಂದ್ರಗಡ: ವಿವಿಧ ಬೇಡಿಕೆ ಈಡೇರಿಕೆಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ನೌಕರರ ಎಲ್ಲ ವೃಂದ ಸಂಘಗಳು, ನರೇಗಾ ನೌಕರರು, ಗ್ರಾಪಂ ಹೊರಗುತ್ತಿಗೆ ನೌಕರರ ಸಂಘಗಳ ಹಾಗೂ ಗ್ರಾಪಂ ಸದಸ್ಯರ ಒಕ್ಕೂಟ ಸಹಯೋಗದಲ್ಲಿ ಅ. ೪ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಯಲಿದ್ದು, ರಜೆ ಮಂಜೂರು ಮಾಡುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಬಡಿಗೇರ ಅವರಿಗೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ನೌಕರರ ಸಂಘದ ಮುಖಂಡರು ಮನವಿ ಸಲ್ಲಿಸಿದರು.

ನೌಕರರ ಸಂಘದ ಮುಖಂಡರು ಮಾತನಾಡಿ, ಗಜೇಂದ್ರಗಡ ತಾಲೂಕಿನ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಗ್ರಾಪಂ ಕರ ವಸೂಲಿಗಾರರು, ಜಲಗಾರರು, ಕಚೇರಿ ಸಹಾಯಕರು, ಸ್ವಚ್ಛತಾಗಾರರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಪ್ರಯೋಜನವಾಗಿಲ್ಲ. ಎಲ್ಲ ಸಮಸ್ಯೆಗಳಿಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು, ನೌಕರರನ್ನು ಹಾಗೂ ಸಿಬ್ಬಂದಿಯನ್ನು ನೇರ ಹೊಣೆಗಾರ ಮಾಡುತ್ತಿರುವ ಸರ್ಕಾರ ಮತ್ತು ಇಲಾಖೆಯ ಧೋರಣೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ಒತ್ತಾಯಿಸಿ ಅ. ೪ರಿಂದ ರಾಜ್ಯಾದ್ಯಂತ ಗ್ರಾಪಂ ಸೇವೆಗಳಾದ ಬಾಪೂಜಿ ಸೇವೆ ಹಾಗೂ ಕಚೇರಿಯ ಎಲ್ಲ ಕರ್ತವ್ಯ (ಕುಡಿಯುವ ನೀರು, ಬೀದಿದೀಪ ಹಾಗೂ ಸ್ವಚ್ಛತೆ ಹೊರತುಪಡಿಸಿ) ನಿರ್ವಹಿಸುವುದನ್ನು ನಿಲ್ಲಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭವಾಗಲಿದೆ.

ಹೋರಾಟದಲ್ಲಿ ಪಾಲ್ಗೊಳ್ಳುವ ಸಲುವಾಗಿ ಅ. ೪ರಿಂದ ರಜೆ ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು.

ಪಿಡಿಒ ಮಹಾಂತೇಶ ತಳವಾರ, ಹುಲ್ಲಪ್ಪ ಹಳಲ್ಳಿಕೇರಿ, ಬಿ.ಎನ್. ಇಟಗಿಮಠ, ತನವೀರ್ ದೊಡ್ಡಮನಿ, ಪ್ರಕಾಶ ನರೇಗಲ್, ಮರಿಲಿಂಗಪ್ಪ ಮುತಾರಿ, ಎಸ್.ಆರ್. ಸಂಕನೂರು, ಮುದಕಪ್ಪ ದೊಣ್ಣೆಗುಡ್ಡ, ಮಲ್ಲಪ್ಪ ಉಪ್ಪಾರ, ಮಹೇಶ ಭಗವತಿ, ಪರಶುರಾಮ ಮ್ಯಾಗಲಮನಿ, ಮಲ್ಲಪ್ಪ ಹೂಗಾರ, ಸಕ್ರಪ್ಪ ಬಿಳೇಕಲ್ ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ