- ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪೊಲೀಸರ ವಿರುದ್ಧ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ । ಧರ್ಮೇಂದ್ರ ಪ್ರಧಾನ್ ವಿರುದ್ಧ ಆಕ್ರೋಶ - - -
ನಗರದ ಶ್ರೀ ಜಯದೇವ ವೃತ್ತದಲ್ಲಿ ಆಮ್ ಆದ್ಮಿ ಪಕ್ಷದ ಜಿಲ್ಲಾ ಪದಾಧಿಕಾರಿಗಳ ನೇತೃತ್ವದಲ್ಲಿ ಪ್ರತಿಭಟಿಸಿದ ಮುಖಂಡರು, ಕಾರ್ಯಕರ್ತರು, ದೆಹಲಿಯಲ್ಲಿ ಹೋರಾಟ ನಿರದ ಮೇಲೆ ನಡೆಸಿದ ದೌರ್ಜನ್ಯ ಖಂಡಿಸಿ ಘೋಷಣೆ ಕೂಗಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಘೋಷಣೆಗಳ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಎಎಪಿ ಜಿಲ್ಲಾಧ್ಯಕ್ಷ ಕೆ.ಎಸ್.ಶಿವಕುಮಾರಪ್ಪ ಈ ವೇಳೆ ಮಾತನಾಡಿ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ 20ಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರ ಸಾವಿಗೆ ನ್ಯಾಯ ಸಿಗಬೇಕು. ಮೃತ ವಿದ್ಯಾರ್ಥಿಗಳ ಪ್ರತಿ ಕುಟುಂಬಕ್ಕೂ ಕನಿಷ್ಠ ₹1 ಕೋಟಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.ಸತತ ಶ್ರಮ ವಹಿಸಿ, ಶ್ರದ್ಧೆಯಿಂದ ಪರೀಕ್ಷೆಗೆ ತಯಾರಾಗುವ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಪ್ರಶ್ನೆಪತ್ರಿಕೆ ಸೋರಿಕೆ ಮಾಡುವ ಮೂಲಕ ಚೆಲ್ಲಾಟವಾಡಲಾಗುತ್ತಿದೆ. ಇಂತಹ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮಕ್ಕೆ ಕಾರಣರಾದ ವ್ಯಕ್ತಿಗಳು ಯಾರೇ ಆಗಿದ್ದರೂ, ಎಂತಹದ್ದೇ ಪ್ರಭಾವಿಯಾಗಿದ್ದರೂ, ಯಾವುದೇ ಸ್ಥಾನಮಾನದಲ್ಲಿ ಇದ್ದರೂ ಅಂತಹವರನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ನೀಟ್ ಪರೀಕ್ಷೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ತಾಕೀತು ಮಾಡಿದರು.
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಆದಿಲ್ ಖಾನ್, ಸಂಘಟನಾ ಕಾರ್ಯದರ್ಶಿ ಕೆ.ರವೀಂದ್ರ, ಯುವ ಅಧ್ಯಕ್ಷ ವಿರೂಪಾಕ್ಷ ಜಕಣಾಚಾರಿ, ಮುಖಂಡರಾದ ಎಂ.ವೆಂಕಟೇಶ, ಪಿ.ಜೆ.ಮಲ್ಲಿಕಾರ್ಜುನ, ಫಯಾಜ್, ಮೊಹಮ್ಮದ್ ಯೂಸೂಫ್ ಇತರರು ಇದ್ದರು.
-25ಕೆಡಿವಿಜಿ1, 2: