ಶಾಸಕರು, ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

KannadaprabhaNewsNetwork |  
Published : Mar 09, 2024, 01:36 AM IST
8ಸಿಎಚ್‌ಎನ್‌56ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇದೇ ಮಾ. 12 ರಂದು ನಗರದಲ್ಲಿ ಆಯೋಜನೆಯಾಗಿರುವ ಹಿನ್ನೆಲೆಯಲ್ಲಿ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. | Kannada Prabha

ಸಾರಾಂಶ

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾ.12 ರಂದು ಚಾಮರಾಜನಗರದಲ್ಲಿ ಆಯೋಜನೆಯಾಗಿರುವ ಹಿನ್ನೆಲೆಯಲ್ಲಿ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ಕನ್ನಡಪ್ರಭವಾರ್ತೆ ಚಾಮರಾಜನಗರ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾ.12 ರಂದು ಚಾಮರಾಜನಗರದಲ್ಲಿ ಆಯೋಜನೆಯಾಗಿರುವ ಹಿನ್ನೆಲೆಯಲ್ಲಿ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿ, ಶಾಸಕ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಡೀಸಿ ಶಿಲ್ಪಾನಾಗ್, ಎಸ್ಪಿ ಪದ್ಮಿನಿ ಸಾಹು, ಉಪವಿಭಾಗಾಧಿಕಾರಿ ಎಂ. ಶಿವಮೂರ್ತಿ, ತಹಸೀಲ್ದಾರ್ ಐ.ಈ. ಬಸವರಾಜು, ಇನ್ನಿತರ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯಲಿರುವ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕೈಗೊಳ್ಳಬೇಕಿರುವ ಸಿದ್ದತೆಗಳ ಕುರಿತು ಸೂಚನೆ ನೀಡಿದರು.

ಸಿಎಂ ನೇತೃತ್ವದಲ್ಲಿ ನಡೆಯಲಿರುವ ಫಲಾನುಭವಿಗಳ ಸಮಾವೇಶಕ್ಕೆ ಅಳವಡಿಸಬೇಕಿರುವ ಬೃಹತ್ ವೇದಿಕೆ, ಶಾಮಿಯಾನ, ಕುಡಿಯುವ ನೀರು, ಆಸನಗಳ ವ್ಯವಸ್ಥೆ ಬಗ್ಗೆ ಅಗತ್ಯ ಸೂಚನೆ ನೀಡಿದರು. ವಾಹನಗಳ ನಿಲುಗಡೆ, ಇನ್ನಿತರ ವ್ಯವಸ್ಥೆಗಳ ಸಂಬಂಧ ಪರಿಶೀಲಿಸಿದರು. ವಾಹನಗಳ ಸಂಚಾರಕ್ಕೆ ಸೂಕ್ತ ವ್ಯವಸ್ಥೆ, ಹೆಚ್ಚು ಜನರು ಸಮಾವೇಶಕ್ಕೆ ಬರಲಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣದಲ್ಲಿ ಕಲ್ಪಿಸಬೇಕಿರುವ ಇತರೆ ಸೌಲಭ್ಯಗಳನ್ನು ಒದಗಿಸುವ ಕುರಿತು ಶಾಸಕರು ವೀಕ್ಷಿಸಿದರು.ಡಿವೈಎಸ್‌ಪಿ ಲಕ್ಷ್ಮಯ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಮಹೇಶ್, ಜಿಲ್ಲಾ ನಗರಾಭಿವೃದ್ದಿ ಕೋಶದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ, ನಗರಸಭೆ ಎಂಜಿನಿಯರ್ ನಟರಾಜು, ಆಹಾರ ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾದ ಸವಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಇನ್ನಿತರ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿಗಳ ಜತೆಗೆ ಹಲವು ಹೊಸ ಯೋಜನೆಗಳೂ ಉಂಟು
ಕೇರಳ ರೀತಿ ಮನೆಯಲ್ಲೇ ರೋಗಿಗಳಿಗೆ ಆರೈಕೆ