ಒಂದೇ ಕಡೆ ಪ್ರಜಾಸೌಧ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

KannadaprabhaNewsNetwork |  
Published : Aug 27, 2025, 01:00 AM IST
ಹನೂರು ಹೊಸ ತಾಲೂಕಿನ ಆಡಳಿತ ಸುಧಾರಣೆ ಮಾಡಲು ಒಂದೇ ಕಡೆ ಪ್ರಜಾಸೌಧ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ | Kannada Prabha

ಸಾರಾಂಶ

ಹನೂರು ಹೊಸ ತಾಲೂಕು ಆಡಳಿತ ಸುಧಾರಣೆ ಮಾಡಲು ಒಂದೇ ಕಡೆ ಪ್ರಜಾಸೌಧ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಹನೂರು ಹೊಸ ತಾಲೂಕು ಆಡಳಿತ ಸುಧಾರಣೆ ಮಾಡಲು ಒಂದೇ ಕಡೆ ಪ್ರಜಾಸೌಧ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.

ಹನೂರು ಕಸಬಾ ಹೋಬಳಿಯ ಹುಲಸುಗುಡ್ಡೆ ಬಳಿ ಪ್ರಜಾಸೌಧ ನಿರ್ಮಾಣ ಮಾಡುವ ಸ್ಥಳವನ್ನು ಶಾಸಕ ಎಂ.ಆರ್. ಮಂಜುನಾಥ್ ಅವರೊಂದಿಗೆ ಪರಿಶೀಲಿಸಿದ ನಂತರ ಮಾತನಾಡಿದರು.

ಕೊಳ್ಳೇಗಾಲ ತಾಲೂಕಿನ ಮುಡಿಗುಂಡಮ್ ಸೇತುವೆ ಹಳೆಯದಾಗಿರುವುದರಿಂದ ಕ್ಯಾಬಿನೆಟ್ ನಲ್ಲಿ ₹15 ಕೋಟಿ ಹಣ ಬಿಡುಗಡೆಯಾಗಿದೆ. ಕಾಮಗಾರಿ ನಡೆಸಲು ಸ್ಥಳ ಪರಿಶೀಲಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಉತ್ತಂಬಳಿ ಗ್ರಾಮದ ಬಳಿ ಮೇಲ್ ಸೇತುವೆ ತಡೆಗೋಡೆ ಕಳಪೆ ಕಾಮಗಾರಿಯಿಂದ ಕುಸಿತ ಆಗಿರುವುದನ್ನು ಪರಿಗಣಿಸಿ ಗುತ್ತಿಗೆದಾರರ ಮೇಲೆ ಸಹ ಪ್ರಕರಣ ದಾಖಲಾಗಿದೆ. ಜೊತೆಗೆ ಈ ಬಗ್ಗೆ ಕೇಂದ್ರ ತಂಡ ಸಹ ಸ್ಥಳ ಪರಿಶೀಲನೆ ನಡೆಸಿ ಡಿಪಿಆರ್ ಪ್ರಕಾರ ಕ್ರಮ ಕೈಗೊಳ್ಳಲು ಪತ್ರ ಬರೆಯಲಾಗಿದೆ ಎಂದರು.

ಆಡಳಿತ ಸುಧಾರಣೆಗೆ ಪ್ರಜಾಸೌಧ:

ಹನೂರು ತಾಲೂಕಿನ ಕಸಬಾ ಹೋಬಳಿಯ ಹುಲ್ಲೇಪುರ ಹುಲುಸುಗುಡ್ಡೆ ಬಳಿ ಪ್ರಜಾಸೌಧ ನಿರ್ಮಾಣ ಮಾಡಲು ₹8.5 ಕೋಟಿ ವೆಚ್ಚದಲ್ಲಿ ಹೊಸ ತಾಲೂಕಿಗೆ ಆಡಳಿತ ಸುಧಾರಣೆ ಮಾಡಲು ಒಂದೇ ಸೂರಿನಡಿ ಎಲ್ಲಾ ಇಲಾಖೆಗಳ ಕರ್ತವ್ಯ ನಿರ್ವಹಿಸಲು ಪ್ರಜಾಸೌಧ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಬೈನತ್ತ ಗ್ರಾಮದ ಬಳಿ ಸೇತುವೆ ನಿರ್ಮಾಣಕ್ಕೆ ಎಸ್‌ಟಿಆರ್ ಎಪ್‌ ಯೋಜನೆ ಅಡಿ ಸೇತುವೆ ನಿರ್ಮಾಣ ಮಾಡಲು ಪರಿಶೀಲನೆ ನಡೆಸಲಾಗಿದೆ ಎಂದರು.

ಪಟ್ಟಣದಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಸಾರ್ವಜನಿಕರ ಸಾಕಷ್ಟು ದೂರಗಳಿಂದ ನ್ಯಾಯಾಲಯ ಸೇರಿದಂತೆ ಸರ್ಕಾರಿ ಕಚೇರಿಗಳಿಗೆ ನಿವೇಶನವನ್ನು ಮಂಜೂರು ಮಾಡಲಾಗಿದೆ. ಶಾಸಕರು ಸಹ ಇದಕ್ಕೆ ಪೂರಕವಾಗಿ ಸರ್ಕಾರಿ ಕಚೇರಿಗಳಿಗೆ ಬೇಕಾಗಿರುವ ಸ್ಥಳವನ್ನು ಮೀಸಲಿಡುವಂತೆ ತಿಳಿಸಿದ್ದಾರೆ. ನ್ಯಾಯಾಲಯಕ್ಕೂ ಸಹ ಸ್ಥಳ ಪರಿಶೀಲಿಸಿ ಸೂಕ್ತ ಸ್ಥಳದಲ್ಲಿ ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಕೆಸಿಎಫ್ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಹನೂರು ತಟ್ಟೆ ಹಳ್ಳಕ್ಕೆ ನಿರ್ಮಾಣ ಮಾಡಲಾಗುತ್ತಿರುವ ಸೇತುವೆ ಅರ್ಧದಷ್ಟು ಕಾಮಗಾರಿಯನ್ನು ಮುಗಿಸಿದ್ದಾರೆ. ಉಳಿದಂತೆ ಕಳೆದ ಎರಡು ತಿಂಗಳಿನಿಂದ ಇನ್ನು ಅರ್ಧದಷ್ಟು ಸೇತುವೆ ಕಾಮಗಾರಿ ಸ್ಥಗಿತಗೊಂಡಿದೆ. ಈ ಬಗ್ಗೆ ಸಹ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಉಳಿದಿರುವ ಕಾಮಗಾರಿಗಳ ಬಗ್ಗೆ ಪರಿಶೀಲಿಸಲಾಗುವುದು. ಸಾಕಷ್ಟು ಜನರಿಗೆ ಪರಿಹಾರ ಮತ್ತು ಇನ್ನಿತರ ಸಮಸ್ಯೆಗಳಿಂದ ವಿಳಂಬವಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಸಕ ಎಂ.ಆರ್. ಮಂಜುನಾಥ್ ಮಾತನಾಡಿ, ತಾಲೂಕಿನಲ್ಲಿ ಪ್ರಜಾಸೌಧ ನಿರ್ಮಾಣದಿಂದ ಸಾರ್ವಜನಿಕರಿಗೆ ಅನುಕೂಲ ಆಗಲಿದೆ. ಜೊತೆಗೆ ಒಂದೇ ಸೂರಿನ ಅಡಿ ನಿರ್ಮಾಣವಾಗುವ ಪ್ರಜಾಸೌಧದಿಂದ ಮುಂದಿನ ದಿನಗಳಲ್ಲಿ ಪಟ್ಟಣ ಬೆಳೆಯುತ್ತಿರುವುದರಿಂದ ಅನುಕೂಲದಾಯಕವಾಗಿದೆ ಎಂದು ಹೇಳಿದರು.

ತಾಲೂಕು ದಂಡಾಧಿಕಾರಿ ಚೈತ್ರ , ಆನಂದ್ ಮೂರ್ತಿ, ರಾಜಸ್ವ ನಿರೀಕ್ಷಕ ಶೇಷಣ್ಣ ಇನ್ನಿತರ ಅಧಿಕಾರಿಗಳು ಮುಖಂಡರು ಉಪಸ್ಥಿತರಿದ್ದರು.

PREV

Recommended Stories

ನೀಲಿ ಮೊಟ್ಟೆ ಇಟ್ಟ ಚನ್ನಗಿರಿಯ ನಾಟಿ ಕೋಳಿ: ಸ್ಥಳೀಯರಲ್ಲಿ ತೀವ್ರ ಕುತೂಹಲ
ಸಿಗಂದೂರಿನಲ್ಲಿ ವಾಟರ್ ಏರೋಡ್ರೋಮ್: ವಿಮಾನ ಟೇಕಾಫ್‌, ಲ್ಯಾಂಡಿಂಗ್‌! ಪ್ರವಾಸೋದ್ಯಮಕ್ಕೆ ಹೊಸ ಹೆಜ್ಜೆ?