ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ತಾಪಂ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ ಶ್ರೀಭಗೀರಥ ಮಹರ್ಷಿ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉಪ್ಪಾರ ಜನಾಂಗ ನನಗೆ ಹೆಚ್ಚಿನ ಮತ ನೀಡಿ ಆಶೀರ್ವದಿಸುವ ಮೂಲಕ ಗೆಲುವಿಗೆ ಸಹಕಾರ ನೀಡಿದ್ದಾರೆ. ಈ ಕೃತಜ್ಞತೆಗಾಗಿ ಜನಾಂಗದ ವಿವಾಹ, ಸಭೆ ಸಮಾರಂಭಗಳ ಅನುಕೂಲಕ್ಕಾಗಿ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನ ದೊರಕಿಸುವ ಜೊತೆಗೆ ಭವನ ನಿರ್ಮಾಣಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಆಶ್ವಾಸನೆ ನೀಡಿದರು.ದಿನನಿತ್ಯ ದುಡಿದು ತಿನ್ನುವ ಉಪ್ಪಾರ ಜನಾಂಗ ಸ್ವಾಭಿಮಾನದ ಬದುಕಿನ ಜನಾಂಗವಾಗಿದೆ. ಈ ಜನಾಂಗದ ಏಳಿಗೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರೇಟ್ ಟು ತಹಸೀಲ್ದಾರ್ ಸೋಮಶೇಖರ್, ತಾಪಂ ಇಒ ರಾಮಲಿಂಗಯ್ಯ, ಬಿಇಒ ಧನಂಜಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಚಾಮನಹಳ್ಳಿ ಗ್ರಾಪಂ ಅಧ್ಯಕ್ಷ ಸಿದ್ದರಾಜು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಜಿಲ್ಲಾಧ್ಯಕ್ಷ ಎಲ್.ಸಂದೇಶ ಮತ್ತು ಉಪ್ಪಾರ ಸಮುದಾಯದ ಮುಖಂಡರು ಭಾಗವಹಿಸಿದ್ದರು.