ದೀನ, ದಲಿತರ ಕಾಳಜಿ ಹೊಂದಿದ್ದ ಶಿವಕುಮಾರ ಶಿವಾಚಾರ್ಯ ಶ್ರೀ

KannadaprabhaNewsNetwork |  
Published : Sep 24, 2024, 01:58 AM ISTUpdated : Sep 24, 2024, 01:59 AM IST
ತಾಲೂಕಿನ ಬಸವಾಪಟ್ಟಣ ಗ್ರಾಮದಲ್ಲಿ ಸಿರಿಗೆರೆಯ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳ ಸ್ಮರಣೋತ್ಸವವನ್ನ ಸೋಮವಾರ ಗ್ರಾಮದ ಎಲ್.ಸಿದ್ದಪ್ಪ ಪದವಿ ಪೂರ್ವ ಕಾಲೇಜಿನಲ್ಲಿ 32ನೇ ಶ್ರದ್ದಾಂಜಲಿ ಕಾರ್ಯಕ್ರಮವನ್ನು ನಡೆಸಲಾಯಿತು | Kannada Prabha

ಸಾರಾಂಶ

ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಗ್ರಾಮದಲ್ಲಿ ಸಿರಿಗೆರೆಯ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳ ಸ್ಮರಣೋತ್ಸವವನ್ನು ಸೋಮವಾರ ಗ್ರಾಮದ ಎಲ್.ಸಿದ್ದಪ್ಪ ಪದವಿಪೂರ್ವ ಕಾಲೇಜಿನಲ್ಲಿ 32ನೇ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಯಿತು.

- ಶ್ರೀಗಳ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಎಲ್‌.ಜಿ.ಮಧುಕುಮಾರ್‌ - - - ಕನ್ನಡಪ್ರಭ ವಾರ್ತೆ ಚನ್ನಗಿರಿ

ತಾಲೂಕಿನ ಬಸವಾಪಟ್ಟಣ ಗ್ರಾಮದಲ್ಲಿ ಸಿರಿಗೆರೆಯ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳ ಸ್ಮರಣೋತ್ಸವವನ್ನು ಸೋಮವಾರ ಗ್ರಾಮದ ಎಲ್.ಸಿದ್ದಪ್ಪ ಪದವಿಪೂರ್ವ ಕಾಲೇಜಿನಲ್ಲಿ 32ನೇ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಯಿತು.

ಲಿಂ.ಶಿವಕುಮಾರ ಶ್ರೀಗಳ ಭಾವಚಿತ್ರಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಲ್.ಜಿ. ಮಧುಕುಮಾರ್ ಪುಷ್ಪ ನಮನ ಸಲ್ಲಿಸಿ, ದೀನ-ದಲಿತರ ಬಗ್ಗೆ ಶ್ರೀಗಳು ಅನುಕಂಪ ಹೊಂದಿದ್ದರು. ಸರ್ವರಿಗೂ ಸಮಬಾಳು, ಸಮಪಾಲು ಎಂಬ ತತ್ವದ ಚಿಂತಕರಾಗಿ ಸ್ವಾತಂತ್ರ್ಯ ಪೂರ್ವದಲ್ಲಿಯೇ ಸಮಾನ ಶಿಕ್ಷಣ ಸಹ ಪಂಕ್ತಿ ಭೋಜನದ ವ್ಯವಸ್ಥೆ ಮಾಡಿದ್ದರು. ವಿದ್ಯಾಸಂಸ್ಥೆ ಸ್ಥಾಪಿಸಿ, ಕುಗ್ರಾಮಗಳಲ್ಲಿ ಶಾಲಾ, ಕಾಲೇಜುಗಳನ್ನು ಆರಂಭಿಸಿದರು. ಆ ಮೂಲಕ ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರೀಗಳು ಶ್ರಮಿಸಿದ್ದರು ಎಂದರು.

ಸಿರಿಗೆರೆಯ ಮಠದ ಪ್ರಗತಿಗಾಗಿ ತಮ್ಮ ಕಾಯಕ ನಿಷ್ಠೆ, ದೂರದರ್ಶಿತ್ವ ಸಂಘಟನಾ ಶಕ್ತಿ, ನೇರ ನಿಷ್ಟೂರ ನುಡಿ ಹಾಗೂ ದಿಟ್ಟ ಹೆಜ್ಜೆಗಳಿಂದ ದುಡಿಯುವ ಮಠವನ್ನಾಗಿ ಮಾಡಿದವರು ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ಪದ್ಮಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಸಲಹಾ ಸಮಿತಿ ಸದಸ್ಯರಾದ ಬಿ.ಜಿ. ನಾಗರಾಜ್, ಎಂ.ಜಿ. ಜಯದೇವಪ್ಪ, ಜಿ.ಬಿ. ಜಗನ್ನಾಥ್, ಶಿವಮೂರ್ತಿ, ಉಪನ್ಯಾಸಕರಾದ ರಮೇಶ್, ಸವಿತಾ, ಮುಖ್ಯಶಿಕ್ಷಕ ಎಂ.ಶ್ರೀಧರ ರಾವ್ ಉಪಸ್ಥಿತರಿದ್ದರು.

- - - -23ಕೆಸಿಎನ್‌ಜಿ1:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಸಿ ವ್ಯಾಲಿ, ಎಚ್ಎನ್ ವ್ಯಾಲಿ ನೀರು ನೇರ ಬಳಕೆಗಲ್ಲ
ಲಾರಿಗೆ ಕಾರು ಡಿಕ್ಕಿ: ಮೂವರು ಆರ್‌ಎಸ್‌ಐಗಳ ಸಾವು