ಇಲ್ಲಿಯವರೆಗೆ ವಿಮಾನ ನಿಲ್ದಾಣ ಕಾಮಗಾರಿಗೆ ೨೦೦ ಕೋಟಿ ರೂ. ವೆಚ್ಚ ಭರಿಸಲಾಗಿದೆ ಎಂದ ಅವರು, ದ್ಯಾಪ್ಲಾಪುರದಿಂದ ಬಿ.ಎಂ ರಸ್ತೆಗೆ ಸಂಪರ್ಕ ಕಲ್ಪಿಸಲು ಪ್ರತ್ಯೇಕ ಮಾರ್ಗ ಮಾಡಿಕೊಡಬೇಕೆಂದು ಒತ್ತಾಯಿಸಿ ಸ್ಥಳೀಯರು ಕಾಮಗಾರಿಗೆ ತಡೆ ಒಡ್ಡಿದ್ದಾರೆ. ಸಮಸ್ಯೆ ಇತ್ಯರ್ಥಪಡಿಸಿ ಕಾಮಗಾರಿ ಮುಂದುವರಿಸಲಾಗುವುದು ಎಂದು ಹೇಳಿದರು. ಹಾಸನ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಹೆಚ್ಚುವರಿಯಾಗಿ 92 ಎಕರೆ ಜಮೀನು ಪಡೆಯಬೇಕಾಗಿದೆ ಎಂದು ತಿಳಿಸಿದ ಅವರು, ವಿದ್ಯುತ್ ಲೈನ್ ಸ್ಥಳಾಂತರ, ರನ್‌ವೇ ಉದ್ದ ಹೆಚ್ಚಾಗಿರುವುದು ಹಾಗೂ ಭೂಸ್ವಾಧಿನ ಸೇರಿದಂತೆ 600 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆಯಿದೆ ಎಂದರು.
ಹಾಸನ: ಹಾಸನ ವಿಮಾನ ನಿಲ್ದಾಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಏರ್‌ಪೋರ್ಟ್ ಕಾಮಗಾರಿ ಪೂರ್ಣಗೊಳಿಸಲು ಅಂದಾಜು ೬೦೦ ಕೋಟಿ ರೂ. ಅಗತ್ಯವಿದ್ದು, ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಸಚಿವ ಸಂಪುಟದಲ್ಲಿ ಮಂಡಿಸಿ ಮಂಜೂರಾತಿ ಪಡೆಯಲಾಗುವುದು ಎಂದು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ.
ಶನಿವಾರ ವಿಮಾನ ನಿಲ್ದಾಣದ ಕಾಮಗಾರಿ ವೀಕ್ಷಣೆ ನಡೆಸಿ ಮಾತನಾಡಿದ ಅವರು, ಕಾಮಗಾರಿಯನ್ನು ಪೂರ್ಣಗೊಳಿಸುವ ಕುರಿತು ಬೆಂಗಳೂರು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಎಲ್ಲಾ ಮಾಹಿತಿಗಳನ್ನು ಸ್ಥಳದಲ್ಲೇ ಪರಿಶೀಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪರಿಶೀಲನಾ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಇಲ್ಲಿಯವರೆಗೆ ವಿಮಾನ ನಿಲ್ದಾಣ ಕಾಮಗಾರಿಗೆ ೨೦೦ ಕೋಟಿ ರೂ. ವೆಚ್ಚ ಭರಿಸಲಾಗಿದೆ ಎಂದ ಅವರು, ದ್ಯಾಪ್ಲಾಪುರದಿಂದ ಬಿ.ಎಂ ರಸ್ತೆಗೆ ಸಂಪರ್ಕ ಕಲ್ಪಿಸಲು ಪ್ರತ್ಯೇಕ ಮಾರ್ಗ ಮಾಡಿಕೊಡಬೇಕೆಂದು ಒತ್ತಾಯಿಸಿ ಸ್ಥಳೀಯರು ಕಾಮಗಾರಿಗೆ ತಡೆ ಒಡ್ಡಿದ್ದಾರೆ. ಸಮಸ್ಯೆ ಇತ್ಯರ್ಥಪಡಿಸಿ ಕಾಮಗಾರಿ ಮುಂದುವರಿಸಲಾಗುವುದು ಎಂದು ಹೇಳಿದರು. ಹಾಸನ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಹೆಚ್ಚುವರಿಯಾಗಿ 92 ಎಕರೆ ಜಮೀನು ಪಡೆಯಬೇಕಾಗಿದೆ ಎಂದು ತಿಳಿಸಿದ ಅವರು, ವಿದ್ಯುತ್ ಲೈನ್ ಸ್ಥಳಾಂತರ, ರನ್‌ವೇ ಉದ್ದ ಹೆಚ್ಚಾಗಿರುವುದು ಹಾಗೂ ಭೂಸ್ವಾಧಿನ ಸೇರಿದಂತೆ 600 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆಯಿದೆ ಎಂದರು.
ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು 2-3 ತಿಂಗಳೊಳಗೆ ಸಾರ್ವಜನಿಕರ ಸೇವೆಗೆ ಚಾಲನೆ ನೀಡಲಾಗುವುದು. ಜಿಲ್ಲಾಧಿಕಾರಿ ನೂತನ ಕಚೇರಿ ಕಟ್ಟಡ ಕಾಮಗಾರಿಗೆ 30 ಕೋಟಿ ಹಣ ಬಿಡುಗಡೆ ಮಾಡಲಾಗಿದ್ದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರಾಮಾಣಿಕವಾಗಿ ಕಾಮಗಾರಿ ಮುಗಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.