ಕನ್ನಡಪ್ರಭ ವಾರ್ತೆ ಕೊರಟಗೆರೆ
ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥ್ ನಾರಾಯಣ್ ಮಾತನಾಡಿ, ಗೃಹ ಸಚಿವರ ಆದೇಶದ ಮೆರೆಗೆ ಇಂದು ನಡೆದ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಿವಾನಂದ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ರೈತರಿಗೆ ಅನುಕೂಲ ರೀತಿಯಲ್ಲಿ ತಮ್ಮ ಜವಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಸಹಕಾರ ಸಂಘವನ್ನು ಆರ್ಥಿಕತೆಯಲ್ಲಿ ಅಭಿವೃದ್ಧಿ ಪಡಿಸುವಂತೆ ಸಲಹೆ ನೀಡಿ ಶುಭಹಾರೈಸಿದರು.ಜಿ.ಪಂ ಮಾಜಿ ಸದಸ್ಯ ಮಹಾಲಿಂಗಯ್ಯ ಮಾತನಾಡಿ, ಟಿಎಪಿಸಿಎಂಸ್ ಅಧ್ಯಕ್ಷರಾಗಿ ಶಿವಾನಂದ್ ಅವಿರೋಧ ಆಯ್ಕೆಯಾಗಿರುವುದು ಖುಷಿ ತಂದಿದೆ. ಅವರಿಗೆ ಇದೇ ತರಹ ಇನ್ನಷ್ಟು ಜವಬ್ದಾರಿ ಉನ್ನತ ಸ್ಥಾನಗಳು ಒದಗಿ ಬರಲಿ ಎಂದು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಹನುಮಾನ್, ಪ.ಪಂ ಮಾಜಿ ಉಪಾಧ್ಯಕ್ಷ ಮಂಜುನಾಥ್, ರುದ್ರಪ್ರಸಾದ್, ರಾಘವೇಂದ್ರ, ನರಸೇಗೌಡ, ತ್ರಿಯಂಬಕರಾಜು, ಶಶಿಕಲಾ, ಉಮಾದೇವಿ, ಸುನಿತಾ, ವಿನಯ್, ಮಹೇಶ್ ಸೇರಿದಂತೆ ಟಿಎಪಿಸಿಎಂಎಸ್‌ನ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.