ಎಂ ಶಿವರ ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾಗಿ ಶಿವರಾಜು ಅವಿರೋಧ ಆಯ್ಕೆ

KannadaprabhaNewsNetwork |  
Published : Nov 05, 2024, 12:44 AM ISTUpdated : Nov 05, 2024, 12:45 AM IST
4ಎಚ್ಎಸ್ಎನ್11 : ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿ ಎಂ. ಶಿವರ ಗ್ರಾಮಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಸ್. ಎಸ್. ಶಿವರಾಜು ಅವರನ್ನು ಗ್ರಾಮಸ್ಥರು ಹಾಗೂ ಸದಸ್ಯರು ಅಭಿನಂದಿಸಿದರು. | Kannada Prabha

ಸಾರಾಂಶ

ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿಯ ಎಂ. ಶಿವರ ಗ್ರಾಮಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಎಸ್.ಎಸ್. ಶಿವರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಇದ್ದ ತಿಮ್ಮಪ್ಪಗೌಡರು ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಶಿವರಾಜು ಆಯ್ಕೆಯಾಗಿದ್ದು, ಗ್ರಾಮಪಂಚಾಯಿತಿಯ ೧೪ ಸದಸ್ಯರಲ್ಲಿ ೧೩ ಜನ ಸದಸ್ಯರು ಹಾಜರಿದ್ದರು. ಚುನಾವಣಾಧಿಕಾರಿಯಾಗಿ ಗಿರೀಶ್ ಎ. ಡಿ. ಕರ್ತವ್ಯ ನಿರ್ವಹಿಸಿದರು.

ಚನ್ನರಾಯಪಟ್ಟಣ: ತಾಲೂಕಿನ ಬಾಗೂರು ಹೋಬಳಿಯ ಎಂ. ಶಿವರ ಗ್ರಾಮಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಎಸ್.ಎಸ್. ಶಿವರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಇದ್ದ ತಿಮ್ಮಪ್ಪಗೌಡರು ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಶಿವರಾಜು ಆಯ್ಕೆಯಾಗಿದ್ದು, ಗ್ರಾಮಪಂಚಾಯಿತಿಯ ೧೪ ಸದಸ್ಯರಲ್ಲಿ ೧೩ ಜನ ಸದಸ್ಯರು ಹಾಜರಿದ್ದರು. ಚುನಾವಣಾಧಿಕಾರಿಯಾಗಿ ಗಿರೀಶ್ ಎ. ಡಿ. ಕರ್ತವ್ಯ ನಿರ್ವಹಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಉಪಾಧ್ಯಕ್ಷರಾದ ಎಸ್. ಎಸ್. ಶಿವರಾಜು ಎಂ. ಶಿವರ ಗ್ರಾಮಪಂಚಾಯಿತಿ ವ್ಯಕ್ತಿಗೆ ಬರುವ ಹಳ್ಳಿಗಳ ಅಭಿವೃದ್ಧಿಗೆ ಮೊದಲು ಆದ್ಯತೆ ನೀಡಲಾಗುವುದು. ಕುಡಿಯುವ ನೀರು, ಬೀದಿ ದೀಪ, ಸ್ವಚ್ಛತೆ, ಶಾಲಾ ಕಟ್ಟಡಗಳ ದುರಸ್ತಿ ಸೇರಿದಂತೆ ಜನರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುತ್ತೇನೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ಶಾಲೆ ದುಬೈ ವಾರ್ಷಿಕೋತ್ಸವಕ್ಕೆ ಗೌರ್ನರ್‌ಗೆ ಆಹ್ವಾನ
ಬಾಯಿಮುಚ್ಕೊಂಡಿದ್ರೆ ಒಳ್ಳೇದು : ಮೂವರು ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ವಾರ್ನಿಂಗ್