ವಲಸೆ ಕಾರ್ಮಿಕರ ಆರು ಮಕ್ಕಳು ಶಾಲೆಗೆ ದಾಖಲು

KannadaprabhaNewsNetwork |  
Published : Nov 18, 2026, 02:00 AM IST
ಪೋಟೋ,16ಎಚ್‌ಎಸ್‌ಡಿ1: ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಕಲಬುರಗಿ ಜಿಲ್ಲೆಯ ವಲಸೆ ಕಾರ್ಮಿಕರ ಆರು ಮಕ್ಕಳನ್ನು ಬೋಕಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದಾಖಲಿಸಲಾಯಿತು. | Kannada Prabha

ಸಾರಾಂಶ

ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಕಲಬುರಗಿ ಜಿಲ್ಲೆಯ ವಲಸೆ ಕಾರ್ಮಿಕರ ಆರು ಮಕ್ಕಳನ್ನು ಬೋಕಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದಾಖಲಿಸಲಾಯಿತು.

ಕನ್ನಡಪ್ರಭ ವಾರ್ತೆ ಹೊಸದುರ್ಗ

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಿಕ್ಷಣದ ಮುಖ್ಯವಾಹಿನಿಗೆ ತರಲು ವಿಶೇಷ ದಾಖಲಾತಿ ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಇದನ್ನು ಯಶಸ್ವಿಗೊಳಿಸಲು ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೈಯದ್ ಮೋಸೀನ್ ತಿಳಿಸಿದರು.

ತಾಲೂಕಿನ ಬೋಕಿಕೆರೆ ಗ್ರಾಮ ವ್ಯಾಪ್ತಿಯಲ್ಲಿರುವ ಇಟ್ಟಿಗೆ ತಯಾರಿಕಾ ಕಾರ್ಖಾನೆಯಲ್ಲಿ ಹಮ್ಮಿಕೊಂಡಿದ್ದ ವಿಶೇಷ ದಾಖಲಾತಿ ಆಂದೋಲನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನ.30ರವರೆಗೆ ನಡೆಯಲಿರುವ ಆಂದೋಲನದಡಿ ಜನವಸತಿ ಪ್ರದೇಶಗಳಲ್ಲಿ ಜಾಗೃತಿ ಪ್ರಚಾರ, ಪೋಷಕರೊಂದಿಗೆ ಸಮಾಲೋಚನೆ, ಟಾಸ್ಕ್‌ಫೋರ್ಸ್ ರಚನೆ ಹಾಗೂ ಮನೆಮನೆ ಭೇಟಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸರ್ಕಾರಿ ಶಾಲೆಗಳಲ್ಲಿ ದೊರೆಯುವ ಉಚಿತ ಶಿಕ್ಷಣ, ಪಠ್ಯಪುಸ್ತಕ ಸೇರಿದಂತೆ ವಿವಿಧ ಸೌಲಭ್ಯಗಳ ಕುರಿತು ಪೋಷಕರಿಗೆ ಮಾಹಿತಿ ನೀಡಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರಲಾಗುವುದು ಎಂದರು.

ಮಕ್ಕಳಿಗೆ ಶಿಕ್ಷಣ ಒದಗಿಸುವುದು ಎಲ್ಲರ ಜವಾಬ್ದಾರಿಯಾಗಿದ್ದು ಈ ನಿಟ್ಟಿನಲ್ಲಿ ಶಿಕ್ಷಕರು, ಪೋಷಕರು, ಸಮುದಾಯದ ಸಂಘ-ಸಂಸ್ಥೆಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಕಲಬುರಗಿ ಜಿಲ್ಲೆಯ ವಲಸೆ ಕಾರ್ಮಿಕರ ಆರು ಮಕ್ಕಳನ್ನು ಬೋಕಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದಾಖಲಿಸಲಾಯಿತು.

ಕಸಬಾ ಹೋಬಳಿಯ ಶಿಕ್ಷಣ ಸಂಯೋಜಕ ಹಾಗೂ ಹಾಜರಾತಿ ಅಧಿಕಾರಿ ಎಂ.ಶಶಿಧರ್, ಪಿಡಿಒ ಜಯಣ್ಣ, ಎಂ.ಜಿ.ದಿಬ್ಬ ಕ್ಲಸ್ಟರ್‌ನ ಸಿಆರ್‌ಪಿ ಪ್ರಮೀಳಾ, ಬೋಕಿಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಿ
ವಿಶ್ವಮಟ್ಟದ ಶ್ರೇಷ್ಠ ವಾಸ್ತುಶಿಲ್ಪಗಳ ತಾಣ ವಿಜಯಪುರ