ರಾಯಚೂರಿನಲ್ಲಿ ಒಟ್ಟು 16 ಮಂದಿಗೆ ಪಾಸಿಟಿವ್‌: ಡಿಸಿ ಚಂದ್ರಶೇಖರ ನಾಯಕ

KannadaprabhaNewsNetwork |  
Published : Jan 07, 2024, 01:30 AM IST
6ಕೆಪಿಆರ್‌ಸಿಆರ್02 | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಕೋವಿಡ್ ಹೆಚ್ಚಳವಾಗದಂತೆ ಕ್ರಮ ಕೈಗೊಳ್ಳಿ. ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮುಂಜಾಗೃತಾ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಸೂಚನೆ.

ಕನ್ನಡಪ್ರಭ ವಾರ್ತೆ ರಾಯಚೂರು

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಒಟ್ಟು 1042 ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆ ಮಾಡಲಾಗಿ, ಒಟ್ಟು 16 ಜನರಿಗೆ ಕೋವಿಡ್ ಪಾಸಿಟವ್ ವರದಿಯಾಗಿ ರುತ್ತದೆ. ಇದರಲ್ಲಿ 14 ಜನರು ಹೋಂ ಕ್ವಾರೆಂಟೆನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದ ಇಬ್ಬರು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೋವಿಡ್ ಮುಂಜಾಗೃತಾ ಸಭೆಯ ಅಧ್ಯಕ್ಷತೆ ವಹಿಸಿ ಶನಿವಾರ ಮಾತನಾಡಿ, ಕೋವಿಡ್ ಗೆ ಸಂಬಂಧಪಟ್ಟಂತೆ ರಿಮ್ಸ್ ಆಸ್ಪತ್ರೆ ಮತ್ತು ಎಲ್ಲಾ ತಾಲೂಕು ಮಟ್ಟದ ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ವ್ಯವಸ್ಥೆ ಮಾಡಿಕೊಳ್ಳಬೇಕು. ಕೋವಿಡ್ ಸೋಂಕಿತರು ಆಸ್ಪತ್ರೆಯಲ್ಲಿ ದಾಖಲಾದಾಗ ಯಾವುದೇ ಸಮಸ್ಯೆಗಳಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಸಾರ್ವಜನಿಕರು ಕೋವಿಡ್ ಸೋಂಕಿನ ಬಗ್ಗೆ ಭಯಪಡುವ ಅಗತ್ಯವಿಲ್ಲ, ಮುಂಜಾಗ್ರತೆ ವಹಿಸಬೇಕು. ಕೋವಿಡ್ ಸೋಂಕು ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಅನುಸರಿಸಬೇಕು ಎಂದು ಹೇಳಿದರು.

60 ಮೇಲ್ಪಟ್ಟ ವಯೋ ವೃದ್ಧರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ನೆಗಡಿ, ಕೆಮ್ಮಿನಂತ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಳ್ಳಬೇಕು. ದೀರ್ಘ ಕಾಲದಿಂದ ಚಿಕಿತ್ಸೆ ಪಡೆಯುವವರು ಹೊರಗಡೆ ಹೋಗುವಾಗ ಮಾಸ್ಕ್‌ ಧರಿಸಬೇಕು. ಯಾವುದೇ ಸಮಾರಂಭದಲ್ಲಿ ಮಾಸ್ಕ್‌ ಧರಿಸುವುದು ಸೇರಿದಂತೆ ಇನ್ನಿತರ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರಬಾಬು, ರಿಮ್ಸ್ ಭೋಧಕ ಆಸ್ಪತ್ರೆಯ ನಿರ್ದೇಶಕ ಡಾ.ರಮೇಶ, ರಿಮ್ಸ್ ಬೋಧಕ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯಶಂಕರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ, ಆರ್‌ಸಿಎಚ್‌ ಅಧಿಕಾರಿ ಡಾ.ನಂದಿತಾ, ತಾಲೂಕು ಆರೋಗ್ಯ ಅಧಿಕಾರಿ ಡಾ.ಶಾಖೀರ್ ಮೊಯಿನುದ್ದೀನ್, ನವೋಧಯ ವೈದ್ಯಕೀಯ ಸಂಸ್ಥೆಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ