ಕೆಲಸದಲ್ಲಿ ಕೌಶಲ್ಯವೇ ಯೋಗ: ಉತ್ತಮ್ ಕುಮಾರ್

KannadaprabhaNewsNetwork |  
Published : Jul 17, 2026, 01:15 AM IST
31 | Kannada Prabha

ಸಾರಾಂಶ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಶೈಕ್ಷಣಿಕ ಅರ್ಹತೆ ಸಾಕಾಗುವುದಿಲ್ಲ. ಸಂವಹನ ಕೌಶಲ್ಯ, ತಾಂತ್ರಿಕ ಜ್ಞಾನ, ಸಮಸ್ಯೆ ಪರಿಹಾರ ಸಾಮರ್ಥ್ಯ, ನಾಯಕತ್ವ, ಸೃಜನಶೀಲತೆ ಮತ್ತು ಡಿಜಿಟಲ್ ಕೌಶಲ್ಯಗಳು ಯಶಸ್ಸಿಗೆ ಅತ್ಯಂತ ಮುಖ್ಯವಾಗಿವೆ. ಇಂತಹ ಕೌಶಲ್ಯಗಳು ಯುವಕರ ಆತ್ಮವಿಶ್ವಾಸವನ್ನು ಹೆಚ್ಚಿಸಿ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯಲು ನೆರವಾಗುತ್ತವೆ.

ಕನ್ನಡಪ್ರಭ ವಾರ್ತೆ ಮೈಸೂರು

ಕೆಲಸದಲ್ಲಿ ಕೌಶಲ್ಯವೇ ಯೋಗ ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಪ್ರಾದೇಶಿಕ ಕಚೇರಿ ಪ್ರಾದೇಶಿಕ ಪ್ರಬಂಧಕ ಉತ್ತಮ್ ಕುಮಾರ್ ತಿಳಿಸಿದರು.

ನಗರದ ರುಡ್‌ ಸೆಟ್ ಸಂಸ್ಥೆಯಲ್ಲಿ ಬುಧವಾರ ನಡೆದ ವಿಶ್ವ ಯುವ ಕೌಶಲ್ಯ ದಿನಾಚರಣೆ, ರುಡ್‌ ಸೆಟ್ ಸಂಸ್ಥೆ ಆರಂಭವಾಗಿ 44 ವರ್ಷಗಳ ಸಾರ್ಥಕ ಸೇವೆಗಳ ಸಂಭ್ರಮಾಚರಣೆ ಮತ್ತು ಎಂಬ್ರಾಯಿಡರಿ ತರಬೇತಿಯ ಶಿಬಿರಾರ್ಥಿಗಳು ತಯಾರಿಸಿದ ಪ್ರದರ್ಶನ ಮೇಳವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಶೈಕ್ಷಣಿಕ ಅರ್ಹತೆ ಸಾಕಾಗುವುದಿಲ್ಲ. ಸಂವಹನ ಕೌಶಲ್ಯ, ತಾಂತ್ರಿಕ ಜ್ಞಾನ, ಸಮಸ್ಯೆ ಪರಿಹಾರ ಸಾಮರ್ಥ್ಯ, ನಾಯಕತ್ವ, ಸೃಜನಶೀಲತೆ ಮತ್ತು ಡಿಜಿಟಲ್ ಕೌಶಲ್ಯಗಳು ಯಶಸ್ಸಿಗೆ ಅತ್ಯಂತ ಮುಖ್ಯವಾಗಿವೆ. ಇಂತಹ ಕೌಶಲ್ಯಗಳು ಯುವಕರ ಆತ್ಮವಿಶ್ವಾಸವನ್ನು ಹೆಚ್ಚಿಸಿ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯಲು ನೆರವಾಗುತ್ತವೆ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ರುಡ್‌ ಸೆಟ್ ಸಂಸ್ಥೆಯ ನಿರ್ದೇಶಕಿ ಸಿ.ಕೆ. ಭವ್ಯಾ ಮಾತನಾಡಿ, ವಿಶ್ವ ಯುವ ಕೌಶಲ್ಯ ದಿನವು ಯುವಜನರನ್ನು ಸ್ವಾವಲಂಬಿಗಳನ್ನಾಗಿ, ಜವಾಬ್ದಾರಿಯುತ ನಾಗರಿಕರನ್ನಾಗಿ ಹಾಗೂ ದೇಶದ ಅಭಿವೃದ್ದಿಗೆ ಕೊಡುಗೆ ನೀಡುವ ಶಕ್ತಿಯನ್ನಾಗಿ ರೂಪಿಸುವ ಮಹತ್ವದ ದಿನವಾಗಿದೆ ಎಂದರು.

ಜೀವನದಲ್ಲಿ ಏಳಿಗೆ ಸಾಧಿಸಲು ವೃತ್ತಿ ಕೌಶಲ್ಯಗಳ ಅಭಿವೃದ್ಧಿ ಮಾಡಿಕೊಳ್ಳುವುದು ಮುಖ್ಯ. ಇಂದಿನ ಸಂಧರ್ಭದಲ್ಲಿ ಯಾವಾಗಲೂ ನಾವು ಪ್ರಸ್ತುತವಾಗಿರಲು ನಮ್ಮಲ್ಲಿರುವ ಕೌಶಲ್ಯಗಳನ್ನು ಹರಿತಗೊಳಿಸಿ, ಬ್ಯಾಂಕಿನೊಂದಿಗೆ ಉತ್ತಮ ಭಾಂದವ್ಯವನ್ನು ವೃದ್ಧಿಸಿಕೊಳ್ಳಿ, ಇದು ಉದ್ಯಮದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದರು.

ಇದೇ ವೇಳೆ ರುಡ್‌ಸೆಟ್ ಸಂಸ್ಥೆಯಿಂದ ತರಬೇತಿ ಪಡೆದು ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿಯಾದ ಯುವ ಉದ್ಯಮಶೀಲರಾದ ಮಹದೇವಸ್ವಾಮಿ, ಪುಟ್ಟು, ಸುಜೇಂದ್ರ ಮತ್ತು ಭಾರತಿ ಅವರನ್ನು ಸನ್ಮಾನಿಸಲಾಯಿತು.

ತರಬೇತಿದಾರರಾದ ರಶ್ಮಿ ರಾಘವೇಂದ್ರ, ಮಾದವಿ ರೈ, ಸಂದೀಪ್ ಆಚಾರ್ಯ, ಪುರಂದರ್, ಉಪನ್ಯಾಸಕರಾದ ಆರ್. ಪಾಲ್‌ ರಾಜ್, ಲತಾಮಣಿ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇದು ಚೆಕ್ ಪೋಸ್ಟ್? ಅಥವಾ ಬಾರ್‌ ಅಂಡ್ ರೆಸ್ಟೋರೆಂಟ್‌?
ಕಾಂಗ್ರೆಸ್‌ನ ಗಾಯಿತ್ರಿ ಶಾಂತೇಗೌಡ ಬೆಂಬಲಿಗರಿಂದ ಸಂಭ್ರಮಾಚರಣೆ