ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರ ಜೊತೆಗೆ ಸಂವಾದ
ಜರ್ಮನಿಯು ತನಗೆ 20 ಸಾವಿರ ತಂತ್ರಜ್ಞರನ್ನು ಕಳುಹಿಸಿ ಕೊಡಿ ಎಂದು ಕೇಳಿದೆ. ವಿಶ್ವದ ಅನೇಕ ದೇಶಗಳಲ್ಲಿ ಉದ್ಯೋಗಗಳಿವೆ, ಅವುಗಳನ್ನು ಬಳಸಿಕೊಳ್ಳುವ ಯುವಜನತೆ ಅಲ್ಲಿಲ್ಲ. ಭಾರತ ಅದನ್ನು ಸದುಪಯೋಗ ಪಡಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದವರು ಹೇಳಿದರು.ಜವಾಹರ್‌ಲಾಲ್ ನೆಹರು ಅವರಂತೆ 3 ಅವಧಿಯ ಸುದೀರ್ಘ ಆಡಳಿತ ನಡೆಸುವ ಪ್ರಧಾನಿ ಬೇರೆ ಯಾರೂ ಇಲ್ಲ ಎನ್ನುವ ಕಾಂಗ್ರೆಸ್‌ನ ಮಾತನ್ನು ಮೋದಿ ಸುಳ್ಳು ಮಾಡುತ್ತಿದ್ದಾರೆ. ಅವರ ನೇತೃತ್ವದಲ್ಲಿ ಭಾರತ ವಿಶ್ವದ 3ನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗುವುದಕ್ಕೆ ಸಿದ್ಧವಾಗುತ್ತಿದೆ ಎಂದರು.ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಂತ ಬಲವೇ ಇಲ್ಲದೇ ಪರಾವಲಂಭಿ ಜೀವಿಯಾಗಿಬಿಟ್ಟಿದೆ. ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ ಬಜೆಟನ್ನು ಅಲ್ಪಸಂಖ್ಯಾತರಿಗಾಗಿಯೇ ಮಂಡಿಸಿದಂತಿದೆ. ಚಿನ್ನ ಸ್ಮಗಲ್ ಮಾಡಿದ ರನ್ಯಾ ರಾವ್ ಪ್ರಕರಣದಲ್ಲಿ ರಾಜ್ಯದ ಮಂತ್ರಿಗಳೇ ಶಾಮೀಲಾಗಿರುವ ಸಂಶಯ ಇದೆ. ಗ್ಯಾರಂಟಿ ಯೋಜನೆಗಳಿಗೆ ಅನುಷ್ಠಾನ ಸಮಿತಿ ರಚಿಸಿ ಪಕ್ಷದ ಕಾರ್ಯಕರ್ತರಿಗೆ ರಾಜ್ಯವನ್ನು ಲೂಟಿ ಹೊಡೆಯಲು ಬಿಟ್ಟಿದ್ದಾರೆ. ಕಾಂಗ್ರೆಸ್ ಶಾಸಕರು ಸರ್ಕಾರ ನಿಮ್ಮಪ್ಪಂದಾ ಎಂದು ಕೇಳುವಷ್ಟು ಧೈರ್ಯವನ್ನು ತೋರಿಸುತ್ತಿದ್ದಾರೆ. ಇದಕ್ಕೆಲ್ಲ ಕಡಿವಾಣ ಹಾಕಬೇಕು ಎಂದು ಜೋಶಿ ಕಾರ್ಯಕರ್ತರಿಗೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಜೋಶಿ ಅವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಸುರೇಶ್ ಶೆಟ್ಟಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಬಿಜೆಪಿ ಜಿಲ್ಲಾ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರ.ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿದರು. ರೇಷ್ಮಾ ಉದಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪ್ರಿಯದರ್ಶಿನಿ ವಂದಿಸಿದರು.