ಕೌಶಲ ಸಹಿತ ಶಿಕ್ಷಣವೇ ನಮ್ಮ ಗುರಿ: ಡಾ. ಬಿ.ಗಣನಾಥ ಶೆಟ್ಟಿ

KannadaprabhaNewsNetwork |  
Published : Dec 24, 2024, 12:48 AM IST

ಸಾರಾಂಶ

ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಕ-ಪಾಲಕರ ಸಭೆಯು ಶನಿವಾರ ಜರುಗಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಕ-ಪಾಲಕರ ಸಭೆಯು ಶನಿವಾರ ಜರುಗಿತು.

ಸಭೆಯನ್ನು ಉದ್ದೇಶಿಸಿ ಸಂಸ್ಥಾಪಕ ಡಾ. ಬಿ.ಗಣನಾಥ ಶೆಟ್ಟಿ ಮಾತನಾಡಿ, ನಿತ್ಯಜೀವನದಲ್ಲಿ ಸಮಸ್ಯೆಗಳನ್ನು ಎದುರಿಸುವ ಕೌಶಲ ಸಹಿತ ಶಿಕ್ಷಣವೇ ನಮ್ಮ ಗುರಿ ಎಂದ ಅವರು, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣದ ಜೊತೆಗೆ ಸಿಎ, ಸಿಎಸ್, ಕಂಪ್ಯೂಟರ್ ಸಂಬಂಧಿತ ವಿವಿಧ ಕಲಿಕೆಗಳ ಜೊತೆಗೆ ಎನ್‌ಎಸ್‌ಎಸ್, ಕೆಸರ್ಡೊಂಜಿ ದಿನ, ಕೈಗಾರಿಕಾ ಪ್ರದೇಶಗಳ ಭೇಟಿಯ ಜೊತೆಗೆ ಹಲವಾರು ಕಾರ್ಯಕ್ರಮಗಳ ಆಯೋಜನೆಯ ಮೂಲಕ ನೈತಿಕ ಮತ್ತು ವ್ಯಾವಹಾರಿಕ ಜ್ಞಾನವನ್ನು ನೀಡುತ್ತಿರುವ ಸಮಗ್ರ ಮಾಹಿತಿಗಳನ್ನು ಒದಗಿಸಿದರು. ಪಠ್ಯದ ಜೊತೆಗೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಪಠ್ಯೇತರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಸಹ ಸಂಸ್ಥಾಪಕ ಹಾಗೂ ಪ್ರಾಂಶುಪಾಲ ವಿದ್ವಾನ್‌ ಗಣಪತಿ ಭಟ್‌ ಮಾತನಾಡಿ, ವೈಯಕ್ತಿಕ ವಿಷಯಗಳಲ್ಲಿ ವಿದ್ಯಾರ್ಥಿಗಳ ಸಾಧನೆ, ತರಗತಿಗಳಲ್ಲಿ ಶಿಸ್ತು ರೂಢಿಸಿಕೊಳ್ಳುವುದು ಮುಖ್ಯವಾಗಿದೆ. ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ, ಸಕಾರಾತ್ಮಕ ಚಿಂತನೆ, ಪ್ರೇರಣೆ, ನಿರ್ದಿಷ್ಟಗುರಿ ತಲುಪುವುದು ನಮ್ಮ ಧ್ಯೇಯವಾಗಬೇಕು ಎಂದರು.

ಸಭೆಯಲ್ಲಿ ಪೋಷಕ ವರ್ಗದವರು, ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ