ಸೆ.9ರಿಂದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚರ್ಮ - ಕೇಶ ರೋಗ ತಪಾಸಣಾ ಶಿಬಿರ

KannadaprabhaNewsNetwork |  
Published : Sep 07, 2024, 01:42 AM IST
ಶಿಬಿರ6 | Kannada Prabha

ಸಾರಾಂಶ

ಈ ಚಿಕಿತ್ಸಾ ಶಿಬಿರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820 - 2533301, 2533302, 2533303 ಸಂಪರ್ಕಿಸಬಹುದು.

ಕನ್ನಡಪ್ರಭ ವಾರ್ತೆ ಉಡುಪಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ ಕುತ್ಪಾಡಿ ಉಡುಪಿ, ಇದರ ಆಗದತಂತ್ರ ವಿಭಾಗದ ನೇತೃತ್ವದಲ್ಲಿ ಚರ್ಮ ರೋಗ ಮತ್ತು ಸೌಂದರ್ಯ ಚಿಕಿತ್ಸಾ ಘಟಕಗಳಲ್ಲಿ ಸೆ.9 ರಿಂದ 14 ರವರೆಗೆ ಆರು ದಿನಗಳ ಕಾಲ ಚರ್ಮ ಮತ್ತು ಕೇಶರೋಗಗಳ ಬೃಹತ್ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಶುಕ್ರವಾರ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಮಮತಾ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ದಿನನಿತ್ಯ ಬಾಧಿಸುತ್ತಿರುವ ವಿವಿಧ ರೀತಿಯ ಚರ್ಮವ್ಯಾದಿಗಳಾದ ಸೋರಿಯಾಸಿಸ್, ತೊನ್ನು, ಕಜ್ಜಿ, ಅಲರ್ಜಿ, ಇಸುಬು, ಸರ್ಪಸುತ್ತು, ಗಜಗರ್ಣ, ಮೊಡವೆ, ತಲೆ ಹೊಟ್ಟು, ಹೇಣಿನ ಉಪದ್ರ, ಕೂದಲು ಉದುರುವಿಕೆ, ವಿಷ ಜಂತುಗಳಿಂದ ಬರುವ ಚರ್ಮರೋಗಗಳಿಗೆ ಉಚಿತ ತಪಾಸಣೆ ನಡೆಸಿ, ರಿಯಾಯಿತಿ ದರದಲ್ಲಿ ಪ್ರಯೋಗಾಲಯ ಪರೀಕ್ಷೆಗಳು ಹಾಗು ಔಷಧವನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಚರ್ಮ ಮತ್ತು ಕ್ಲೇಶಕ್ಕೆ ಸಂಬಂಧಿಸಿದ ವ್ಯಾದಿಗಳ ಬಗ್ಗೆ ಸಂಬಂಧಿಸಿದ ಮಾಹಿತಿ ಹಾಗೂ ಪರಿಹಾರೋಪಾಯಗಳನ್ನು ಆಸ್ಪತ್ರೆಯ ತಜ್ಞ ವೈದ್ಯರು ಸಾರ್ವಜನಿಕರಿಗೆ ಒದಗಿಸಲಿದ್ದಾರೆ ಎಂದವರು ತಿಳಿಸಿದರು.

ಈ ಚಿಕಿತ್ಸಾ ಶಿಬಿರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820 - 2533301, 2533302, 2533303 ಸಂಪರ್ಕಿಸಬಹುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆಸ್ಪತ್ರೆಯ ಅಧೀಕ್ಷಕ ಡಾ.ನಾಗರಾಜ್ ಎಸ್, ಡಾ.ಚೈತ್ರಾ, ಡಾ.ಶ್ರೀನಿಧಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!