ಧರ್ಮಸ್ಥಳದ ಭಕ್ತರು ಮತ್ತು ಅಭಿಮಾನಿಗಳು ಸಮಾವೇಶದಲ್ಲಿ ಭಾಗವಹಿಸಿದರು. ಧರ್ಮಸ್ಥಳದ ಎಲ್ಲ ವ್ಯಾಪಾರಸ್ಥರು, ವಾಹನ ಚಾಲಕರು ಮತ್ತು ಮಾಲಕರು ಸ್ವಯಂಪ್ರೇರಿತ ಬಂದ್ ಆಚರಿಸಿ ಸಮಾವೇಶದಲ್ಲಿ ಪಾಲ್ಗೊಂಡರು.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಧರ್ಮಸ್ಥಳ ಕ್ಷೇತ್ರದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆ ಆಶ್ರಯದಲ್ಲಿ ಗುರುವಾರ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಗ್ರಾಮಸ್ಥರ ಸಮಾವೇಶ ನಡೆಯಿತು.ಧರ್ಮಸ್ಥಳದ ಭಕ್ತರು ಮತ್ತು ಅಭಿಮಾನಿಗಳು ಸಮಾವೇಶದಲ್ಲಿ ಭಾಗವಹಿಸಿದರು. ಧರ್ಮಸ್ಥಳದ ಎಲ್ಲ ವ್ಯಾಪಾರಸ್ಥರು, ವಾಹನ ಚಾಲಕರು ಮತ್ತು ಮಾಲಕರು ಸ್ವಯಂಪ್ರೇರಿತ ಬಂದ್ ಆಚರಿಸಿ ಸಮಾವೇಶದಲ್ಲಿ ಪಾಲ್ಗೊಂಡರು.ಸಮಾವೇಶದ ಪೂರ್ವಭಾವಿಯಾಗಿ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಿ, ಅಣ್ಣಪ್ಪಸ್ವಾಮಿ ಬೆಟ್ಟದ ಎದುರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಎಲ್ಲರೂ ಪಾದಯಾತ್ರೆ ಮೂಲಕ ಅಮೃತವರ್ಷಿಣಿ ಸಭಾಭವನಕ್ಕೆ ಆಗಮಿಸಿದರು.ಸಭಾಭವನದಲ್ಲಿ ಹಿರಿಯರಾದ ಪರಪ್ಪೆ ನಾರಾಯಣ ರಾವ್ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆತು.ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಕೇಶವ ಗೌಡ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಇತರ ಮಾಧ್ಯಮಗಳಲ್ಲಿ ಆಧಾರರಹಿತ ಸುಳ್ಳು ಆರೋಪಗಳನ್ನು ಪಸರಿಸುತ್ತಿದ್ದು, ಕ್ಷೇತ್ರದ ಘನತೆ, ಗೌರವಕ್ಕೂ, ಊರಿನ ನಾಗರಿಕರಿಗೂ ತೀವ್ರ ಬೇಸರವಾಗಿದೆ. ಸುಸಂಸ್ಕೃತರಾದ ಎಲ್ಲ ನಾಗರಿಕರು ಇಷ್ಟರ ತನಕ ಮೌನದಿಂದ ಎಲ್ಲವನ್ನೂ ಸಹಿಸಿಕೊಂಡಿದ್ದು, ಈಗ ತಾಳ್ಮೆಯ ಕಟ್ಟೆ ಒಡೆದಿದೆ. ೧೫ ದಿನಗಳೊಳಗೆ ಅಪಪ್ರಚಾರ ಮಾಡುವವರಿಗೆ ತಕ್ಕ ಶಾಸ್ತಿ ಆಗಬೇಕು. ಅವರ ಅಪಪ್ರಚಾರವನ್ನು ನಿಲ್ಲಿಸಬೇಕು ಎಂದು ಎಲ್ಲರೂ ದೇವರಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದರು.ಶ್ರೀನಿವಾಸ ರಾವ್ ಮಾತನಾಡಿ, ಸಾತ್ವಿಕ ಹೋರಾಟಕ್ಕೆ ಜಯ ಸಿಗಲಿ ಎಂದು ಹಾರೈಸಿ, ಈ ಬಗ್ಗೆ ಕಾನೂನಾತ್ಮಕ ಹೋರಾಟವನ್ನೂ ಮುಂದುವರಿಸಲಾಗುವುದು ಎಂದು ಹೇಳಿದರು.ಶಾಂಭವಿ ರೈ, ಅಖಿಲೇಶ್ ಶೆಟ್ಟಿ, ಸಂದೀಪ್ ರೈ ಅನಿಸಿಕೆ ವ್ಯಕ್ತಪಡಿಸಿದರು.ಧನಕೀರ್ತಿ ಆರಿಗಾ ಪ್ರಾಸ್ತಾವಿಕವಾಗಿ ಮಾತನಾಡಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ, ಸಿ.ಎ. ಬ್ಯಾಂಕ್ ಅಧ್ಯಕ್ಷ ಪ್ರೀತಂ, ಪ್ರಭಾಕರ ಪೂಜಾರಿ, ರಾಜಾರಾಮ್, ಸುಂದರ ಗೌಡ, ಚಂದನ್‌ಪ್ರಸಾದ್ ಕಾಮತ್, ಭುಜಬಲಿ ಧರ್ಮಸ್ಥಳ ಮತ್ತಿತರರಿದ್ದರು.ಸಂದೇಶ್ ಸ್ವಾಗತಿಸಿದರು. ರಾಜಾರಾಮ್ ವಂದಿಸಿದರು. ಪೃಥ್ವೀಶ್ ಕಾರ್ಯಕ್ರಮ ನಿರ್ವಹಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.