ಬಿಹಾರದಲ್ಲಿ ಕಪಾಳಮೋಕ್ಷ, ರಾಹುಲ್ ಗಾಂಧಿ ಕಾಣೆ: ಬಿ.ವೈ.ವಿಜಯೇಂದ್ರ

KannadaprabhaNewsNetwork |  
Published : Nov 20, 2025, 01:30 AM IST
ವಿಜಯೇಂದ್ರ | Kannada Prabha

ಸಾರಾಂಶ

ವೋಟ್ ಚೋರಿ ಬಗ್ಗೆ ಬಹಳ ಮಾತನಾಡುತ್ತಿದ್ದ ರಾಹುಲ್ ಗಾಂಧಿಗೆ ಬಿಹಾರದ ಜನರು ಕಪಾಳ ಮೋಕ್ಷ ಮಾಡಿದ್ದಾರೆ. ಅವರು ಇಂತಹ ಫಲಿತಾಂಶವನ್ನು ನಿರೀಕ್ಷೆ ಮಾಡಿರಲಿಕ್ಕಿಲ್ಲ, ಅಂದಿನಿಂದ ಅವರು ಕಾಣೆಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿವೋಟ್ ಚೋರಿ ಬಗ್ಗೆ ಬಹಳ ಮಾತನಾಡುತ್ತಿದ್ದ ರಾಹುಲ್ ಗಾಂಧಿಗೆ ಬಿಹಾರದ ಜನರು ಕಪಾಳ ಮೋಕ್ಷ ಮಾಡಿದ್ದಾರೆ. ಅವರು ಇಂತಹ ಫಲಿತಾಂಶವನ್ನು ನಿರೀಕ್ಷೆ ಮಾಡಿರಲಿಕ್ಕಿಲ್ಲ, ಅಂದಿನಿಂದ ಅವರು ಕಾಣೆಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.ಬುಧವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ರಾಹುಲ್ ಗಾಂಧಿ ಇನ್ನಾದರೂ ಎಚ್ಚೆತ್ತುಕೊಂಡು ವಿರೋಧ ಪಕ್ಷದ ಕೆಲಸವನ್ನು ಮಾಡಲಿ ಎಂದು ಸಲಹೆ ನೀಡಿದರು.ಕೆಲಸ ಮಾಡುವವರು ಬೇರೆ, ಅಧಿಕಾರ ನಡೆಸುವವರು ಬೇರೆ ಎಂಬಂತಹ ಡಿ.ಕೆ. ಶಿವಕುಮಾರ್ ಮಾರ್ಮಿಕ ಮಾತುಗಳನ್ನು ಎರಡು ಮೂರು ತಿಂಗಳಿಂದ ಗಮನಿಸುತ್ತಿದ್ದೇನೆ. ಯಾತಕ್ಕಾಗಿ ಹೀಗೆ ಮಾತನಾಡುತ್ತಿದ್ದಾರೆ ಗೊತ್ತಿಲ್ಲ. ಮುಖ್ಯಮಂತ್ರಿ ಕುರ್ಚಿಗೆ ದಿನೇದಿನೆ ಪೈಪೋಟಿ ಹೆಚ್ಚಾಗುತ್ತಿದೆ. ಮುಖ್ಯಮಂತ್ರಿ ಬದಲಾಗಬೇಕು ಎಂದು ನಾವು ಹೇಳುತ್ತಿಲ್ಲ, ಅರ್ಧದಷ್ಟು ಸಚಿವರು ಮುಖ್ಯಮಂತ್ರಿಗಳ ಬದಲಾವಣೆ ಬಯಸುತ್ತಿದ್ದಾರೆ ಎಂದವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ರಾಜ್ಯದಲ್ಲಿ ಬಡವ ರೈತ, ಹಿಂದೂ ವಿರೋಧಿ ಸರ್ಕಾರ ಆಡಳಿತ ನಡೆಸುತ್ತಿದೆ. ಅಭಿವೃದ್ಧಿ ಇಲ್ಲದೆ ರಾಜ್ಯದ ಜನ ಪರದಾಡುತ್ತಿದ್ದಾರೆ, ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿಯ ಬಗ್ಗೆ ಯಾವುದೇ ಚರ್ಚೆ ಆಗುತ್ತಿಲ್ಲ. ಅದನ್ನು ಬಿಟ್ಟು ಆಡಳಿತ ಪಕ್ಷದ ಸಚಿವರೇ ನವಂಬರ್ ಕ್ರಾಂತಿಯ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಚುನಾಯಿತ ಸರ್ಕಾರ ಇದೆ ಅನ್ನೋದೇ ಮರೆತು ಹೋಗಿದೆ. ಎಷ್ಟು ಬೇಗ ಈ ಸರ್ಕಾರ ಕಿತ್ತು ಹಾಕಿದರೆ ಜನರಿಗೆ ಅನುಕೂಲ ಎಂದರು.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬೆಂಗಳೂರಿನಲ್ಲಿ ಹಾಡಹಗಲೇ ಕೋಟ್ಯಾಂತರ ರು. ದರೋಡೆ ನಡೆದಿದೆ, ಬೀದರ್‌ನಲ್ಲೂ ಇದೇ ರೀತಿಯ ದರೋಡೆ ಪ್ರಕರಣ ನಡೆದಿತ್ತು. ಅದಕ್ಕೆ ಉತ್ತರ ಕಂಡುಕೊಳ್ಳಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ, ಗೃಹ ಸಚಿವರಿಗಂತೂ ಯಾವುದೇ ವಿಚಾರದ ಬಗ್ಗೆ ಮಾಹಿತಿ ಇರೋದಿಲ್ಲ. ಅವರು ಅಸಹಾಯಕರಾಗಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

PREV

Recommended Stories

ಡಿ. 4 ರಂದು ಕೊಡಗಿನ ಹುತ್ತರಿ ಹಬ್ಬ
ಮೆಕ್ಕೆಜೋಳಕ್ಕಿಲ್ಲ ಬೆಲೆ: ರಾಶಿ ಮಾಡಲು ಮುಂದಾಗದ ರೈತ