ಸೌಲಭ್ಯ ಕಲ್ಪಿಸಲು ಕೊಳಗೇರಿ ನಿವಾಸಿಗಳ ಆಗ್ರಹ

KannadaprabhaNewsNetwork |  
Published : Jan 31, 2026, 02:15 AM IST
ಗದುಗಿನಲ್ಲಿ ಜಿಲ್ಲಾ ಸ್ಲಂ ಮಹಿಳಾ ಸಮಿತಿ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಸ್ಲಂ ಮಹಿಳಾ ಸಮಿತಿ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ಗದಗ: ಗದಗ- ಬೆಟಗೇರಿ ನಗರದಲ್ಲಿ 80ಕ್ಕೂ ಅಧಿಕ ಕೊಳಗೇರಿ ಪ್ರದೇಶಗಳು ಇದ್ದು, 40 ಸಾವಿರಕ್ಕೂ ಹೆಚ್ಚು ಸ್ಲಂ ನಿವಾಸಿಗಳು ಕನಿಷ್ಠ ಸೌಲಭ್ಯಗಳು ಇಲ್ಲದೇ ಬದುಕು ನಡೆಸುತ್ತಿದ್ದಾರೆ. ಕೂಡಲೇ ವಂಚಿತ ಸಮುದಾಯದ ಮಹಿಳೆಯರಿಗೆ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಸ್ಲಂ ಮಹಿಳಾ ಸಮಿತಿ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಹಿಳಾ ಸಮಿತಿ ಅಧ್ಯಕ್ಷೆ ಪರವೀನಬಾನು ಹವಾಲ್ದಾರ, ವಿಶಾಲಕ್ಷಿ ಹಿರೇಗೌಡ್ರ, ಮೆಹರುನಿಸಾ ಡಂಬಳ, ಫೈರುಜಾ ಗುಳಗುಂದಿ, ರೂಪಾ ಕಬಾಡಿ, ಮೈಮುನ ಬೈರಕದಾರ, ನಜಮುನಿಸಾ ಮುರಗೋಡ, ಪ್ರೇಮಾ ಮಣ್ಣವಡ್ಡರ, ಸಕ್ರುಬಾಯಿ ಗೋಸಾವಿ, ಗಿರಜವ್ವ ವಡ್ಡಟಿ, ಇಮ್ತಿಯಾಜ ಆರ್. ಮಾನ್ವಿ, ಅಶೋಕ ಕುಸಬಿ, ಶರಣಪ್ಪ ಸೂಡಿ, ಸಲೀಂ ಹರಿಹರ, ಗೌಸಸಾಬ ಅಕ್ಕಿ ಹಾಗೂ ಸ್ಲಂ ಪ್ರದೇಶದ ಮಹಿಳೆಯರು ಇದ್ದರು.ನಿರಾಶ್ರಿತರಿಗೆ ನಿವೇಶನ ಹಂಚಿಕೆಗೆ ಒತ್ತಾಯ

ಮುಂಡರಗಿ: ಫಲಾನುಭವಿಗಳಿಗೆ ಶೀಘ್ರವಾಗಿ ನಿವೇಶನ ವಿತರಣೆಗೆ ಒತ್ತಾಯಿಸಿ ಫೆ. 2ರಂದು ಕಿಸಾನ್ ಜಾಗೃತಿ ವಿಕಾಸ ಸಂಘದ ಕಾರ್ಯಕರ್ತರ ನೇತೃತ್ವದಲ್ಲಿ ಆಶ್ರಯ ನಿವೇಶನಕ್ಕಾಗಿ ಖರೀದಿಸಿದ ಜಮೀನಿನಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ಕಿಸಾನ್ ಜಾಗೃತಿ ವಿಕಾಸ ಸಂಘದ ಅಧ್ಯಕ್ಷ ವೀರಣ್ಣ ಘಟ್ಟಿ ತಿಳಿಸಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪುರಸಭೆ ವ್ಯಾಪ್ತಿಯ ಶಿರೋಳ ಗ್ರಾಮದ ಹೊರವಲಯದಲ್ಲಿ ಸರ್ಕಾರದಿಂದ ಪಟ್ಟಣದ 23 ವಾರ್ಡುಗಳ ನಿರಾಶ್ರಿತರಿಗೆ ನಿವೇಶನ ನೀಡುವುದಕ್ಕಾಗಿ ಜಮೀನು ಖರೀದಿಸಿ 10 ವರ್ಷಗಳಾಗಿದ್ದು, ಇದುವರೆಗೂ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವ ಮೂಲಕ ನಿವೇಶನ ಹಂಚಿಕೆ ಮಾಡದೇ ವಿ‍ಳಂಬ ನೀತಿ ಅನುಸರಿಸುತ್ತಾ ಬರಲಾಗಿದೆ.ಸರ್ಕಾರ ಕೋಟ್ಯಂತರ ರು. ಹಣ ನೀಡಿ ಪಟ್ಟಣದ ನಿರಾಶ್ರಿತರಿಗೆ ನಿವೇಶನ ನೀಡುವುದಕ್ಕಾಗಿ ಸುಮಾರು 25.32 ಎಕರೆ ಜಮೀನು ಖರೀದಿಸಿದೆ. ಇದುವರೆಗೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಅರ್ಹ ಫಲಾನುಭವಿಗಳ ಆಯ್ಕೆ ಮಾಡಿ ನಿವೇಶನ ಹಂಚಿಕೆ ಮಾಡುವ ಕೆಲಸ ಮಾಡಿಲ್ಲ. ಇದರಿಂದ ಬಡ ಹಾಗೂ ನಿರಾಶ್ರಿತರು ಗುಡಿಸಲಿನಲ್ಲಿ ಜೀವನ ಕಳೆಯುವಂತಾಗಿದೆ. ಆದ್ದರಿಂದ ಆಶ್ರಯ ಕಮಿಟಿ ಅಧ್ಯಕ್ಷರು ತಕ್ಷಣ ಸ್ಪಂದಿಸಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಕಾರ್ಯಕ್ಕೆ ಮುಂದಾಗಬೇಕು. ಇಲ್ಲದಿದ್ದರೆ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುವುದು ಅನಿವಾರ್ಯವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಿಸಾನ್ ಜಾಗೃತಿ ವಿಕಾಸ್ ಸಂಘದ ಜಿಲ್ಲಾಧ್ಯಕ್ಷ ನಿಂಗಪ್ಪ ಭಂಡಾರಿ, ಮಂಜುನಾಥ ಉಪ್ಪಾರ, ಅಶೋಕ ಹೊಸಮನಿ, ಮುದಿಯಪ್ಪ ಲಕ್ಕುಂಡಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ