ಕನ್ನಡಪ್ರಭ ವಾರ್ತೆ ಪಾವಗಡ
ಮಾಧವ ವಿದ್ಯಾಸಂಸ್ಥೆ ವತಿಯಿಂದ ಬುಧವಾರ ತಾಲೂಕಿನ ವೈ.ಎನ್. ಹೊಸಕೋಟೆ ಗ್ರಾಮದ ಬೆಸ್ಕಾಂ ಕಚೇರಿಯ ಅವರಣದಲ್ಲಿ ಹಮ್ಮಿಕೊಂಡಿದ್ದ ಎಸ್‌ಎಂ ಆಂಗ್ಲ ಮಾಧ್ಯಮ ಶಾಲೆಯ 25ನೇ ಶಾಲಾ ವಾರ್ಷಿಕೋತ್ಸವ ಹಾಗೂ ಬೆಳ್ಳಿ ಉತ್ಸವ ಸಮಾರಂಭದ ಉದ್ಘಾಟನೆ ನೆರೆವೇರಿಸಿ ಮಾತನಾಡಿದ್ದರು.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಎಸ್‌ಎಂ ಆಂಗ್ಲ ಕಾನ್ವೆಂಟ್ ಹೆಚ್ಚು ಸಹಕಾರಿಯಾಗಿದೆ. ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ನಿಯಮನುಸಾರ ಎಸ್‌ಎಂ ಆಂಗ್ಲ ಶಾಲೆ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಿದ್ದು ಎಸ್‌ಟಿ ಮೆನೇಜ್‌ಮೆಂಟ್‌ಗೆ ಒಳಪಟ್ಟ ಹಿನ್ನೆಲೆಯಲ್ಲಿ ಈ ಭಾಗದ ಆನೇಕ ಮಂದಿ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಿದೆ ಎಂದರು.ತಾಲೂಕು ಕಸಾಪ ಅಧ್ಯಕ್ಷ ಕಟ್ಟಾ ನರಸಿಂಹಮೂರ್ತಿ ಮಾತನಾಡಿದರು.
ಇದೇ ವೇಳೆ ತಾಪಂ ಮಾಜಿ ಅಧ್ಯಕ್ಷ ಸೊಗಡು ವೆಂಕಟೇಶ್ ಮಾತನಾಡಿದರು. ಎಸ್ಎಂ ವಿದ್ಯಾಸಂಸ್ಥೆಯ ಅಧ್ಯಕ್ಷ ಜೆ. ಮಧುಸೂದನ್ ಹಾಗೂ ಗ್ರಾಪಂ ಅಧ್ಯಕ್ಷ ಸೈಯದ್ ಶಾನವಾಜ್, ರಾಷ್ಟ್ರೀಯ ವಿದ್ಯಾಪೀಠ ಸಂಸ್ಥೆಯ ಕಾರ್ಯದರ್ಶಿ ಎನ್.ಆರ್. ಅಶ್ವತ್ ಕುಮಾರ್, ಶಾಲಾ ಶಿಕ್ಷಕ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.