ಕನ್ನಡಪ್ರಭ ವಾರ್ತೆ ಮದ್ದೂರು
ಬೆಂಗಳೂರು - ಮೈಸೂರು ಹೆದ್ದಾರಿಯ ಪಕ್ಕದಲ್ಲಿರುವ ಸೋಮನಹಳ್ಳಿ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ಎಸ್.ಎಂ.ಕೃಷ್ಣರ ಅಂತ್ಯಕ್ರಿಯೆ ನೆರವೇರಿಸಲು ನಡೆಯುತ್ತಿರುವ ಸಿದ್ಧತೆಗಳನ್ನು ವೀಕ್ಷಿಸಿದರು.
ಕೃಷ್ಣರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಸಾವಿರಾರು ಮಂದಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಗಣ್ಯರು, ಅತಿಗಣ್ಯರು ಸೇರಿದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ವೀಕ್ಷಿಸಲು ಅನುಕೂಲವಾಗುವಂತೆ ಕೈಗೊಳ್ಳುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಗಣ್ಯರು, ಸಾರ್ವಜನಿಕರ ದರ್ಶನದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು.ಈ ವೇಳೆ ಮಾತನಾಡಿದ ಅವರು, ನಾಳೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟದ ಎಲ್ಲರೂ ಬರಲಿದ್ದಾರೆ. ವಿಶೇಷ ವಾಹನದಲ್ಲಿ ಪಕ್ಷದ ಎಲ್ಲಾ ಶಾಸಕರು ಬರುತ್ತಾರೆ. ಕೇಂದ್ರ ನಾಯಕರು ಬರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರ ಪೋನ್ ಕೂಡ ನಾನು ರಿಸೀವ್ ಮಾಡೋಕೆ ಆಗಿಲ್ಲ ಎಂದರು.