ಬೀಚ್ ಸ್ವಚ್ಛತೆಗೆ ಸ್ಮಾರ್ಟ್ ಸಿಟಿ ಆದ್ಯತೆ: ಅರುಣ್ ಪ್ರಭಾ

KannadaprabhaNewsNetwork |  
Published : Dec 03, 2024, 12:35 AM IST
ಚಿತ್ರಾಪುರ ಬೀಚ್‌ ಸ್ವಚ್ಛತಾ ಅಭಿಯಾನ ನಡೆಯಿತು. | Kannada Prabha

ಸಾರಾಂಶ

ಬೀಚ್‌ಗಳು ಪ್ರವಾಸೋದ್ಯಮದ ಪ್ರಮುಖ ಆಕರ್ಷಣೆಯಾಗಿದ್ದು, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಬೀಚ್‌ಗಳ ಸ್ವಚ್ಛತೆಗೂ ಆದ್ಯತೆ ನೀಡಲಾಗುವುದು ಎಂದು ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಜನರಲ್ ಮ್ಯಾನೇಜರ್ ಅರುಣ್ ಪ್ರಭಾ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಬೀಚ್‌ಗಳು ಪ್ರವಾಸೋದ್ಯಮದ ಪ್ರಮುಖ ಆಕರ್ಷಣೆಯಾಗಿದ್ದು, ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಬೀಚ್‌ಗಳ ಸ್ವಚ್ಛತೆಗೂ ಆದ್ಯತೆ ನೀಡಲಾಗುವುದು ಎಂದು ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಜನರಲ್ ಮ್ಯಾನೇಜರ್ ಅರುಣ್ ಪ್ರಭಾ ಹೇಳಿದ್ದಾರೆ.

ದ.ಕ. ಜಿಲ್ಲಾಡಳಿತ, ಮಂಗಳೂರು ನಗರ ಪೊಲೀಸ್ ಕಮಿಷನರೆಟ್, ಕ್ರೆಡೈ ಮಂಗಳೂರು, ಸ್ಮಾರ್ಟ್ ಸಿಟಿ ಮಂಗಳೂರು, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸ್ವಸ್ತಿಕ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್‌ನ ಎನ್ನೆಸ್ಸೆಸ್‌ ಘಟಕ ಹಾಗೂ ಪಣಂಬೂರು ಕುಳಾಯಿ ಮೊಗವೀರ ಸಭಾ ಸಹಯೋಗದಲ್ಲಿ ಭಾನುವಾರ ಚಿತ್ರಾಪುರ ಬೀಚ್‌ನಲ್ಲಿ ನಡೆದ ಸ್ವಚ್ಛತಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.

ಚಿತ್ರಾಪುರ ಬೀಚ್ ಕರಾವಳಿಯ ಸ್ವಚ್ಛ, ಸುಂದರ ಬೀಚ್ ಆಗಿದ್ದು, ಇದಕ್ಕೆ ಸ್ಥಳೀಯರ ಮುತುವರ್ಜಿ ಕಾರಣ ಎಂದು ಅವರು ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆ ಉಪ ಆಯುಕ್ತ ಚಂದ್ರಶೇಖರ್, ಕ್ರೆಡೈ ಮಂಗಳೂರು ಘಟಕ ಅಧ್ಯಕ್ಷ ವಿನೋದ್ ಪಿಂಟೊ, ಪಣಂಬೂರು ಕುಳಾಯಿ ಮೊಗವೀರ ಸಭಾ ಅಧ್ಯಕ್ಷ ಮಾಧವ ಸುವರ್ಣ, ಡಿಸಿಪಿ ಸಿದ್ದಾರ್ಥ ಗೋಯಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಸ್ವಸ್ತಿಕ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ಅಧ್ಯಕ್ಷ ರಾಘವೇಂದ್ರ ಹೊಳ್ಳ, ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ನಿರ್ದೇಶಕ ಯತೀಶ್ ಬೈಕಂಪಾಡಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌