ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್: ಶಾಸಕ ಪಿ.ಎಂ.ನರೇಂದ್ರಸ್ವಾಮಿ

KannadaprabhaNewsNetwork |  
Published : Jan 18, 2026, 02:00 AM IST
17ಕೆಎಂಎನ್ ಡಿ19 | Kannada Prabha

ಸಾರಾಂಶ

ಗ್ರಾಮೀಣ ವಿದ್ಯಾರ್ಥಿಗಳಿಗೆ ಡಿಜಿಟಲ್ ಪರದೆಗಳ ಮೂಲಕ ವಿಡಿಯೋ ತೋರಿಸಿ ಪಾಠ ಮಾಡುವುದರಿಂದ ಅಕರ್ಷಕ ಕಲಿಕೆಗೆ ಸಹಕಾರಿಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ತರಬೇತಿ ಪಡೆದ ಪ್ರತಿಭಾವಂತ ಶಿಕ್ಷಕರೊಂದಿಗೆ ಉಚಿತವಾಗಿ ಪುಸ್ತಕ, ಸಮವಸ್ತ್ರ, ಬಿಸಿಯೂಟ ಸೇರಿದಂತೆ ಹಲವು ಸೌಲಭ್ಯ ನೀಡಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ರಾಜ್ಯದಲ್ಲಿಯೇ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಅತ್ಯಾಧುನಿಕ ಸ್ಮಾರ್ಟ್ ಕ್ಲಾಸ್ ಹಾಗೂ ಮಲ್ಟಿಮೀಡಿಯಾ ಸೌಲಭ್ಯ ಅಳವಡಿಸುವ ಜೊತೆಗೆ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡುತ್ತಿರುವುದು ಶಿಕ್ಷಣ ಕ್ಷೇತ್ರದ ಹೊಸತನಕ್ಕೆ ಸಾಕ್ಷಿ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಪಟ್ಟಣದ ಹೊರವಲಯದ ಅದರ್ಶ ವಿದ್ಯಾಲಯ(ಆರ್.ಎಂ.ಎಸ್.ಎ) ತಾಲೂಕಿನ 38 ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅನುಷ್ಠಾನಗೊಳಿಸುತ್ತಿರುವ ಮಲ್ಟಿಮೀಡಿಯಾ ಪ್ರಸಾರ ಕೇಂದ್ರಗಳ ಸ್ಥಾಪನೆಗೆ ಚಾಲನೆ ಹಾಗೂ ಪಟ್ಟಣದ ಸರ್ಕಾರಿ ಪ್ರೌಢಶಾಲೆ(ಹಲೆಯದು)ಯಲ್ಲಿ ಮಲ್ಟಿಮೀಡಿಯಾ ಸ್ವೀಕೃತಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ವಿದ್ಯಾರ್ಥಿಗಳಿಗೆ ಡಿಜಿಟಲ್ ಪರದೆಗಳ ಮೂಲಕ ವಿಡಿಯೋ ತೋರಿಸಿ ಪಾಠ ಮಾಡುವುದರಿಂದ ಅಕರ್ಷಕ ಕಲಿಕೆಗೆ ಸಹಕಾರಿಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ತರಬೇತಿ ಪಡೆದ ಪ್ರತಿಭಾವಂತ ಶಿಕ್ಷಕರೊಂದಿಗೆ ಉಚಿತವಾಗಿ ಪುಸ್ತಕ, ಸಮವಸ್ತ್ರ, ಬಿಸಿಯೂಟ ಸೇರಿದಂತೆ ಹಲವು ಸೌಲಭ್ಯ ನೀಡಲಾಗುತ್ತಿದೆ ಎಂದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ ಬಳಸಿಕೊಂಡು ಸಿಎಸ್‌ಆರ್ ಅನುದಾನದಡಿಯಲ್ಲಿ ತಾಲೂಕಿನ ಎಲ್ಲಾ ಸರ್ಕಾರಿಗಳನ್ನು ಅಭಿವೃದ್ಧಿಗೊಳಿಸುವುದರೊಂದಿಗೆ ಮೂಲ ಸೌಲಭ್ಯ ಕಲ್ಪಿಸಿ ಖಾಸಗಿ ಶಾಲೆಗಳಿಗೆ ಪೈಪೊಟಿ ನೀಡುವ ರೀತಿಯಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದರು.

ಟೊಯೋಟ ಕಿರ್ಲೋಸ್ಕರ್ ಮೋಟರ್ ಸಂಸ್ಥೆಯಿಂದ ತಾಲೂಕಿನ 38 ಸರ್ಕಾರಿ ಪ್ರೌಢಶಾಲೆಗಳಿಗೆ ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ಮಲ್ಟಿಮೀಡಿಯಾ ಹಾಗೂ ಎಲ್ಲಾ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸ್ಥಾಪನೆಗೆ ಮುಂದಾಗಿದೆ. ಶಿಕ್ಷಣದಿಂದ ಮಾತ್ರ ಬದುಕನ್ನು ಬದಲಾಯಿಸಲು ಸಾಧ್ಯ ಎನ್ನುವುದನ್ನು ಅರ್ಥೈಸಿಕೊಂಡು ಸರ್ಕಾರಿ ಶಾಲೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಕೊಡಿಸಲು ಶ್ರಮ ವಹಿಸಿ ಸುಮಾರು 25 ಕೋಟಿ ಹೆಚ್ಚು ಅನುದಾನವನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತಿದೆ ಎಂದು ವಿವರಿಸಿದರು.

ನಾವೆಲ್ಲರೂ ಸಮಾನರು ಎನ್ನುವುದನ್ನು ತೋರಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ತಾಲೂಕಿನಲ್ಲಿ ಖಾಸಗಿ ಶಾಲೆಗಳ ಸಮಾನಾಗಿ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡುತ್ತಿರುವುದರಿಂದ ಪೋಷರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು, ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕೆಂದು ಕೋರಿದರು.

ಇದೇ ವೇಳೆ ತಹಸೀಲ್ದಾರ್ ಲೊಕೇಶ್, ತಾಪಂ ಇಒ ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ ಉಮಾ, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್, ಟೊಯೋಟ ಕಿರ್ಲೋಸ್ಕರ್ ಮೋಟರ್ ಸಂಸ್ಥೆಯ ರಮೇಶ್‌ರಾವ್, ಕಿರಣ್, ಈಶ್ವರ್, ಮಾಗೇಶ್ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮದ್ದೂರು ನಗರಸಭೆ ವ್ಯಾಪ್ತಿ ಬಡಾವಣೆ ಅಭಿವೃದ್ಧಿಗೆ ಒತ್ತು: ಡೀಸಿ ಡಾ.ಕುಮಾರ
ರೇಷ್ಮೆ ಇಲಾಖೆಗೆ ಸೇರಿದ 4.35 ಎಕರೆ ಜಾಗ ನ್ಯಾಯಾಲಯ ಸಂಕೀರ್ಣಕ್ಕೆ ಗುರುತು