ತಾಂತ್ರಿಕ ಕೌಶಲ್ಯ ಜೊತೆಗೆ ಸ್ಮಾರ್ಟ್ ಸ್ಕಿಲ್ ಅಗತ್ಯ: ಮಂಜುನಾಥ್ ಭಂಡಾರಿ

KannadaprabhaNewsNetwork |  
Published : Sep 07, 2025, 01:01 AM IST
ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌  | Kannada Prabha

ಸಾರಾಂಶ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 10ನೇ ತರಗತಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆ ಮಾಡಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ಹಾಗೂ ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ನೃತ್ಯ ವಿದುಷಿ ದಿಕ್ಷಾ ವಿ. ಅವರನ್ನು ಪುರಸ್ಕಾರ ನೀಡಿ ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಇಂದಿನ ಉದ್ಯೋಗ ಕ್ಷೇತ್ರದಲ್ಲಿ ತಾಂತ್ರಿಕ ಕೌಶಲ್ಯದೊಂದಿಗೆ ಸ್ಮಾರ್ಟ್ ಸ್ಕಿಲ್ ಬಹಳ ಅಗತ್ಯವಿದ್ದು, ಇದರಿಂದ ನಾವು ಇನ್ನಷ್ಟು ಪರಿಪಕ್ವತೆ ಪಡೆಯಬಹುದು ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದರು.ಅವರು ಶನಿವಾರ ನಗರದ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ದಿ. ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ೨೦೨೪-೨೫ನೇ ಸಾಲಿನ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 10ನೇ ತರಗತಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆ ಮಾಡಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ಹಾಗೂ ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ನೃತ್ಯ ವಿದುಷಿ ದಿಕ್ಷಾ ವಿ. ಅವರನ್ನು ಪುರಸ್ಕಾರ ನೀಡಿ ಗೌರವಿಸಲಾಯಿತು.

ಎಸ್‌ಸಿಡಿಸಿಸಿ ಬ್ಯಾಂಕ್ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ಓದುವ ಕೌಶಲ್ಯ, ಅನಲಿಟಿಕಲ್ ಕೌಶಲ್ಯ ಹಾಗೂ ತಾಂತ್ರಿಕ ಕೌಶಲ್ಯಗಳನ್ನು ರೂಪಿಸಿಕೊಳ್ಳಬೇಕು. ಇವುಗಳು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಜೀವನಕ್ಕೆ ಕಷ್ಟವಾಗುತ್ತದೆ. ನಾವು ಯಾವಾಗಲೂ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರನ್ನು ಪ್ರೇರಣೆಯಾಗಿ ಇಟ್ಟುಕೊಳ್ಳಬೇಕು ಎಂದರು.ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಮಾಜದಲ್ಲಿ ತನ್ನದೇ ಆದ ಸೇವೆ ಮಾಡಿ ಛಾಪು ಮೂಡಿಸಿದ್ದಾರೆ. ಅವರು ಮಾಡಿದ ಸಾಧನೆಯನ್ನು ಮಕ್ಕಳು ಅರಿಯಬೇಕು. ಪ್ರತಿಯೊಬ್ಬರ ಸಾಧನೆಯ ಹಿಂದೆ ಪರಿಶ್ರಮ ಇರುತ್ತದೆ. ಆ ಪರಿಶ್ರಮವನ್ನು ನಾವು ಅರಿತುಕೊಳ್ಳಬೇಕು ಎಂದರು. ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಗೋಪಾಲಕೃಷ್ಣ ಭಟ್, ಬ್ಯಾಂಕಿನ ನಿರ್ದೇಶಕರು ಇದ್ದರು. ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಶಶಿಕುಮಾರ್ ರೈ ಬ್ಯಾಲೊಟ್ಟು ನಿರೂಪಿಸಿದರು. ಅಂತಾರಾಷ್ಟ್ರೀಯ ಖ್ಯಾತಿಯ ಯೋಗ ಸಾಧಕಿ ತನುಶ್ರೀ ಪಿತ್ರೋಡಿ ಅವರ ಯೋಗ ಪ್ರದರ್ಶನ ಏರ್ಪಟ್ಟಿತು.---------

ಕಷ್ಟದಲ್ಲಿರುವವರಿಗೆ ನೆರವಾಗಿ: ಡಾ.ಎಂ.ಎನ್‌.ಆರ್‌.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಕಳೆದ ೧೭ ವರ್ಷದಿಂದ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದೇವೆ. ಇಲ್ಲಿ ವಿದ್ಯಾರ್ಥಿವೇತನ ಪಡೆದ ಹಾಗೂ ಗೌರವಿಸಲ್ಪಟ್ಟ ವಿದ್ಯಾರ್ಥಿಗಳು ಮುಂದೆ ತಾವು ಶಿಕ್ಷಣ ಮುಗಿಸಿ, ಕೆಲಸಕ್ಕೆ ಹೋದ ನಂತರ ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿ ಎಂದು ಹೇಳಿದರು.

--------------

PREV

Recommended Stories

ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್‌ ₹3500, ಗೋಲ್ಡ್‌ಕಾರ್ಡ್ ₹6500