ಕನ್ನಡಪ್ರಭ ವಾರ್ತೆ ಮೂಡಲಗಿ ಗ್ರಾಮೀಣ ಭಾಗದ ಶಾಲೆಗಳಿಗೆ ದೃಶ್ಯ ಮಾಧ್ಯಮಗಳನ್ನು ಬಳಕೆ ಮಾಡಿ ಅಳವಡಿಸಿದ ಪಾಠಗಳಿಗೆ ಅನುಕೂಲತೆಗಳನ್ನು ಕಲ್ಪಿಸುವಲ್ಲಿ ಸ್ಮಾರ್ಟ್‌ಕ್ಲಾಸ್ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಾಸಕ ಹಾಗೂ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಕನ್ನಡಪ್ರಭ ವಾರ್ತೆ ಮೂಡಲಗಿಗ್ರಾಮೀಣ ಭಾಗದ ಶಾಲೆಗಳಿಗೆ ದೃಶ್ಯ ಮಾಧ್ಯಮಗಳನ್ನು ಬಳಕೆ ಮಾಡಿ ಅಳವಡಿಸಿದ ಪಾಠಗಳಿಗೆ ಅನುಕೂಲತೆಗಳನ್ನು ಕಲ್ಪಿಸುವಲ್ಲಿ ಸ್ಮಾರ್ಟ್‌ಕ್ಲಾಸ್ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಾಸಕ ಹಾಗೂ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ತಾಲೂಕಿನ ಸಂಗನಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಳವಡಿಸಿದ ಸ್ಮಾರ್ಟ್‌ಕ್ಲಾಸ್ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ತಂತ್ರಜ್ಞಾನದ ಯುಗದಲ್ಲಿ ಸ್ಮಾರ್ಟ್‌ಕ್ಲಾಸ್ ವಿದ್ಯಾರ್ಥಿಗಳಿಗೆ ಬಹು ಉಪಯುಕ್ತವಾಗಿದೆ ಎಂದರು.ಶಿಕ್ಷಣದಲ್ಲಿ ಗುಣಮಟ್ಟದ ಮತ್ತು ಪರಿಣಾಮಕಾರಿಯಾದ ಶಿಕ್ಷಣವನ್ನು ನೀಡಲು ಡಿಜಿಟಲ್ ತರಗತಿಗಳು ಮಾಧ್ಯಮಿಕ ಹಂತದ ವಿದ್ಯಾರ್ಥಿಗಳಿಗೆ ಪೂರಕವಾಗಿದೆ. ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ಹೆಚ್ಚಿನ ಸಮಯ ಬೇಕಾಗುತ್ತದೆ. ಡಿಜಿಟಲ್ ತರಗತಿಗಳಿಂದ ಅರಿವಿನ ಕಲಿಕೆಯ ಪ್ರಕ್ರಿಯೆಯನ್ನು ಪಡೆಯುವುದರಿಂದ ಅದನ್ನು ಅರ್ಥ ಮಾಡಿಕೊಳ್ಳಲು ಸುಗಮವಾಗುತ್ತದೆ. ಕಲಿಕೆಗೆ ಉತ್ತಮ ವಾತಾವರಣ ಕಲ್ಪಿಸಿಕೊಡುವಲ್ಲಿಯೂ ಇಂತಹ ಶಿಕ್ಷಣ ಉಪಯುಕ್ತವಾಗಿದೆ ಎಂದರು.ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಮಹತ್ವ ಸಾರಲು ರಮೇಶ ಫೌಂಡೇಶನ್ ವತಿಯಿಂದ ₹3.50 ಲಕ್ಷ ವೆಚ್ಚದಲ್ಲಿ 7ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ಕ್ಲಾಸ್ ಕೊಠಡಿಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮೂಡಲಗಿ ಬಿಇಒ ಎ.ಸಿ.ಮನ್ನಿಕೇರಿ, ಮುಖಂಡರಾದ ಅರ್ಜುನ ಚಿಕ್ಕೋಡಿ, ಬಸವರಾಜ ಮಾಳೇದವರ, ವಿಠ್ಠಲ ಸಿಂಗೋಟಿ, ಕುಮಾರ ಮಾಳೇದವರ, ಮಲಗೌಡ ಮಾಳ್ಯಾಗೋಳ, ಎಸ್.ಡಿ.ಎಂ.ಸಿ ಅಧ್ಯಕ್ಷ ಸಾತಪ್ಪ ಚಿಕ್ಕೋಡಿ, ರಫೀಕ್ ಮುಲ್ಲಾ, ಸುರೇಶ ಕಪರಟ್ಟಿ, ಹಣಮಂತ ಚಿಪ್ಪಲಕಟ್ಟಿ, ಇಬ್ರಾಹಿಂ ಮುಲ್ಲಾ, ಅರಭಾವಿ ಸಿಆರ್‌ಪಿ ಪೌಲ ಕಳ್ಳಿಮನಿ, ಶಾಲೆಯ ಪ್ರಧಾನ ಶಿಕ್ಷಕ ಹಣಮಂತಗೋಳ, ಪ.ಪಂ ಸದಸ್ಯರು, ಎಸ್.ಡಿ.ಎಂ.ಸಿ ಸದಸ್ಯರು, ಪ್ರಮುಖರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಎರಡು ಶಾಲೆಗಳು ಉನ್ನತೀಕರಣಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂಗನಕೇರಿ ಮತ್ತು ಅಡಿಬಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು 7ನೇ ತರಗತಿಯಿಂದ 8ನೇ ತರಗತಿಯವರೆಗೆ ಉನ್ನತೀಕರಣಗೊಳಿಸಲಾಗಿದೆ.-ಬಾಲಚಂದ್ರ ಜಾರಕಿಹೊಳಿ, ಶಾಸಕರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.