ಕಾಪು: ಇಲ್ಲಿನ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 13 ನೇ ವರ್ಷದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು.
ಕಾಪು: ಇಲ್ಲಿನ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 13 ನೇ ವರ್ಷದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು.
ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್. ಐತಾಳ್ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಹಾಗೂ ಉಪನ್ಯಾಸಕರ ಬಗ್ಗೆ ವ್ಯಕ್ತಪಡಿಸಿದ ಸಕಾರಾತ್ಮಕ ಅಭಿಪ್ರಾಯದ ಬಗ್ಗೆ ಸಂತಸ ವ್ಯಕ್ತಪಡಿಸಿದರು ಮತ್ತು ವಿದ್ಯಾರ್ಥಿಗಳ ವಿನಯ ಶೀಲತೆಯು ಅವರ ವ್ಯಕ್ತಿತ್ವ ಮತ್ತು ಪದವಿಯ ಮೌಲ್ಯವನ್ನು ಹೆಚ್ಚಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸದಾ ವಿನಯ ಮತ್ತು ಸರಳತೆ ಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿದರು. ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ರತ್ನಕುಮಾರ್ ಇವರು ತಮ್ಮ ಉದ್ಯೋಗ ಜೀವನದ ಅನುಭವವನ್ನು ಹಂಚಿಕೊಂಡರು, ವಿದ್ಯಾರ್ಥಿಗಳು ಉದ್ಯಮಿಗಳಾಗಿ ಇತರರಿಗೆ ಉದ್ಯೋಗಾವಕಾಶಗಳನ್ನು ನೀಡಬೇಕು. ಜೊತೆಗೆ ಸಂಸ್ಥೆಗೆ ಬಲಿಷ್ಠ ಹಳೆ ವಿದ್ಯಾರ್ಥಿಗಳ ಸಂಘವನ್ನು ನಿರ್ಮಿಸುವ ಅಗತ್ಯತೆ ಇದ್ದು, ಸಂಸ್ಥೆಯೊಂದಿಗೆ ಕೈ ಜೋಡಿಸಬೇಕು ಎಂದರು.
ಪ್ರಾಂಶುಪಾಲ ಡಾ. ನಾಗರಾಜ್ ಭಟ್ ಮಾತನಾಡಿ, ಅಂತಿಮ ವರ್ಷದ ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ಹರ್ಷ ವ್ಯಕ್ತಪಡಿಸಿದರು ಮತ್ತು ವಿದ್ಯಾರ್ಥಿಗಳು ತಮ್ಮ ಭವಿಷ್ಯದಲ್ಲಿ ಯಶಸ್ಸನ್ನು ಕಾಣಲು ಹೆಚ್ಚು ಶ್ರಮಿಸಬೇಕೆಂದರು.ಅಂತಿಮ ವರ್ಷದ ವಿದ್ಯಾರ್ಥಿಗಳ ಅತ್ಯುತ್ತಮ ಪ್ರಾಜೆಕ್ಟ್‌ಗಳಿಗೆ ಬಹುಮಾನ ನೀಡಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.