ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಕೇಂದ್ರ ಸಂಘ ನೀಡುವ 2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ತಾಲೂಕಿನ ದೊದ್ದನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕಿ ಎಸ್.ಎನ್ ಉಷಾ ಆಯ್ಕೆಯಾಗಿದ್ದಾರೆ.ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿರುವ ಎಸ್.ಎನ್.ಉಷಾ ಅವರಿಗೆ ಜುಲೈ 23ರಂದು ಬೆಂಗಳೂರಿನ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಕಚೇರಿ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಸಸ್ತಿ ನೀಡಿ ಅಭಿನಂದಿಸಲಾಗುವುದು ಎಂದು ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಕೇಂದ್ರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.
ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಶಿಕ್ಷಕಿ ಎಸ್.ಎನ್.ಉಷಾ ಅವರನ್ನು ಶಾಸಕ ಎಚ್.ಟಿ. ಮಂಜು, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ಸಮಾಜ ಸೇವಕರಾದ ವಿಜಯ ರಾಮೇಗೌಡ, ಆರ್.ಟಿ.ಓ ಮಲ್ಲಿಕಾರ್ಜುನ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಂ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇನಹಳ್ಳಿ ಪದ್ಮೇಶ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಅಂಚಿ.ಸಣ್ಣ ಸ್ವಾಮೀಗೌಡ, ತಾಲೂಕು ಕಸಾಪ ಅಧ್ಯಕ್ಷ ಎಚ್.ಆರ್.ಪೂರ್ಣಚಂದ್ರ ತೇಜಸ್ವಿ ಅಭಿನಂದಿಸಿದ್ದಾರೆ.ಬಿ.ಎನ್.ವೀಣಾ ಮುಡಾ ನೂತನ ಆಯುಕ್ತೆಮಂಡ್ಯ: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಬಿ.ಎನ್.ವೀಣಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವೀಣಾ ಅವರು ಕೊಡಗು ಜಿಲ್ಲೆ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮುಡಾ ಆಯುಕ್ತರಾಗಿದ್ದ ಆರ್.ಐಶ್ವರ್ಯ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಇನ್ನೂ ಸ್ಥಳ ನಿಯುಕ್ತಿಗೊಳಿಸಿಲ್ಲ.ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ರೈತರಿಂದ ಅರ್ಜಿ ಆಹ್ವಾನ
ನಾಗಮಂಗಲ:ರಾಜ್ಯ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ಆತ್ಮ ಯೋಜನೆಯಡಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ರೈತರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಆರ್. ಹರೀಶ್ ತಿಳಿಸಿದ್ದಾರೆ.ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯುವ ಕೃಷಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇ ಬೇಸಾಯ, ಹೈಟೆಕ್ ಹಸಿರು ಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು ಕುರಿ ಮೊಲ ಇತ್ಯಾದಿ ಸಾಕಾಣಿಕೆ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ ಮಾಡಿರುವ ರೈತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬದು.ಜಿಲ್ಲೆಯ 10 ಮಂದಿ ರೈತರಿಗೆ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ತಲಾ 25 ಸಾವಿರ ರು. ನಗದು. ತಾಲೂಕಿನ 5 ಮಂದಿ ರೈತರಿಗೆ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ತಲಾ 10 ಸಾವಿರ ರು. ನಗದು ಬಹುಮಾನ ನೀಡಲಾಗುವುದು. ಆಸಕ್ತ ರೈತರು ಜು.31ರ ಸಂಜೆ 5 ಗಂಟೆಯೊಳಗೆ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.