ಸೆ.22 ರಿಂದ ಪ್ರತಿ ಕುಟುಂಬದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ

KannadaprabhaNewsNetwork |  
Published : Sep 21, 2025, 02:02 AM IST

ಸಾರಾಂಶ

ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆಯು ಸೆ. 22ರಿಂದ ಆರಂಭವಾಗಲಿದ್ದು, ಎರಡನೇ ಹಂತದ ತರಬೇತಿ ಕಾರ್ಯಾಗಾರ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ವತಿಯಿಂದ ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆಯು ಸೆ. 22 ರಿಂದ ಆರಂಭವಾಗಲಿದ್ದು, ಎರಡನೇ ಹಂತದ ತರಬೇತಿ ಕಾರ್ಯಾಗಾರವು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಶನಿವಾರ ನಡೆಯಿತು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಿದ್ಧತೆ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಮೀಕ್ಷೆದಾರರು ಮತ್ತು ಮೇಲ್ವಿಚಾರಕರ ನಿಯೋಜನೆ, ಕಿಟ್ ವಿತರಣೆ ಮತ್ತಿತರ ಬಗ್ಗೆ ಮಾಹಿತಿ ಪಡೆದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ದೀಪಕ್ ಅವರು ಮಾಹಿತಿ ನೀಡಿ, ಜಿಲ್ಲೆಯಲ್ಲಿ 1132 ಸಮೀಕ್ಷಾದಾರರು ಮತ್ತು 71 ಮಂದಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಸಮೀಕ್ಷಾದಾರರ ಮ್ಯಾಪಿಂಗ್ ಕಾರ್ಯವು ಶೇ.90 ರಷ್ಟು ಪೂರ್ಣಗೊಂಡಿದೆ. ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆ ನಡೆಯಲಿದೆ ಎಂದು ಹೇಳಿದರು.

ಈಗಾಗಲೇ ಪ್ರತೀ ಕುಟುಂಬಗಳಿಗೂ ಸ್ಟಿಕ್ಕರ್‍ಗಳನ್ನು ಅಂಟಿಸಲಾಗಿದೆ. ಆ ನಿಟ್ಟಿನಲ್ಲಿ ಪ್ರತೀ ಕುಟುಂಬದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರರಾದ ಶ್ರೀಧರ, ಕಿರಣ್ ಗೌರಯ್ಯ, ಪ್ರವೀಣ್ ಕುಮಾರ್, ಕೃಷ್ಣಮೂರ್ತಿ ಅವರು ಎರಡನೇ ಹಂತದ ತರಬೇತಿ ನಡೆದಿದೆ ಎಂದು ತಿಳಿಸಿದರು.

ಸಮೀಕ್ಷೆದಾರರ ನಿಯೋಜನೆ ಮತ್ತಿತರ ಸಂಬಂಧ ವಿರಾಜಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೆಚ್ಚಿನ ನಿಗಾವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ಈ ಸಂದರ್ಭ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜ ಅವರು ಸಮೀಕ್ಷೆ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಯಾಯ ತಾಲೂಕು ಮಟ್ಟದಲ್ಲಿ ಸಮೀಕ್ಷೆದಾರರನ್ನು ನಿಯೋಜಿಸಿದ್ದಾರೆ ಎಂದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬಗ್ಗೆ ಕಂದಾಯ, ಶಾಲಾ ಶಿಕ್ಷಣ, ಸೆಸ್ಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಶಾಲಾ ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮೀಕ್ಷೆ ಯಶಸ್ಸುಗೊಳಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಸೆ. 22 ರಿಂದ ಪ್ರತೀ ದಿನ ಸಂಜೆ ವೇಳೆಗೆ ವಿಡಿಯೊ ಸಂವಾದ ಮೂಲಕ ಮಾಹಿತಿ ಪಡೆಯಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದರು.

ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತಿದ್ದು, ತಮ್ಮ ತಮ್ಮ ಹಂತದಲ್ಲಿ ಯಾರೂ ಬಿಟ್ಟು ಹೋಗದಂತೆ ಸಮೀಕ್ಷೆ ನಡೆಸುವಂತೆ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೈಯಕ್ತಿಕ ಕಾರಣದಿಂದ ಬೇಸತ್ತು ಕಿರುತೆರೆ ಯುವ ನಟಿ ಆತ್ಮ*ತ್ಯೆ
ಜ.6 ಇಲ್ಲವೇ 9ಕ್ಕೆ ಡಿಕೆಶಿ ಸಿಎಂ 200% ಕನ್ಫರ್ಮ್: ಇಕ್ಬಾಲ್