ಸಾಮಾಜಿಕ ಬಹಿಷ್ಕಾರ: 9 ಜನರ ವಿರುದ್ಧ ಕೇಸ್‌

KannadaprabhaNewsNetwork |  
Published : May 03, 2026, 02:45 AM IST
ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾದ ಕುಟುಂಬ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಕೊಂಡುಸಕೊಪ್ಪ ಗ್ರಾಮದಲ್ಲಿ ವೈಯಕ್ತಿಕ ವೈಷಮ್ಯ ಹಾಗೂ ದೇವಸ್ಥಾನದ ಪೂಜೆ ವಿಚಾರಕ್ಕೆ ಸಂಬಂಧಿಸಿದಂತೆ ಕುರುಬ ಸಮುದಾಯದ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದಿದ್ದು, 9 ಜನರ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕೊಂಡುಸಕೊಪ್ಪ ಗ್ರಾಮದಲ್ಲಿ ವೈಯಕ್ತಿಕ ವೈಷಮ್ಯ ಹಾಗೂ ದೇವಸ್ಥಾನದ ಪೂಜೆ ವಿಚಾರಕ್ಕೆ ಸಂಬಂಧಿಸಿದಂತೆ ಕುರುಬ ಸಮುದಾಯದ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ಇದೀಗ ಗಂಭೀರ ಸ್ವರೂಪ ಪಡೆದಿದ್ದು, 9 ಜನರ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಮಲ್ಲಪ್ಪ ಸಾಂಬ್ರೇಕರ, ವಿಠ್ಠಲ ಸಾಂಬ್ರೇಕರ, ಬಾಗಣ್ಣ ಸಾಂಬ್ರೇಕರ, ರಮೇಶ್ ಸಾಂಬ್ರೇಕರ, ಮಾಳಿಂಗ ಸಾಂಬ್ರೇಕರ, ಗಂಗಪ್ಪ ಸಾಂಬ್ರೇಕರ, ವೈಜು ಸಾಂಬ್ರೇಕರ, ಪಿರಾಜಿ ಸಾಂಬ್ರೇಕರ ಹಾಗೂ ಯಲ್ಲಪ್ಪ ಸಾಂಬ್ರೇಕರ ವಿರುದ್ಧ ಪ್ರಕರಣ ದಾಖಲಾಗಿದೆ. ರೇಣುಕಾ ಸಾಂಬ್ರೇಕರ ಅವರು ಏಪ್ರಿಲ್ 6ರಂದು ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ, ಆರಂಭದಲ್ಲಿ ಪ್ರಕರಣ ದಾಖಲಿಸಿರಲಿಲ್ಲ. ಇದು ಆಕ್ಷೇಪಕ್ಕೆ ಕಾರಣವಾಗಿತ್ತು.

ಆದರೆ, ನಂತರ ಪ್ರಕರಣ ಗಂಭೀರವಾದ ನಂತರ ಪೊಲೀಸರು ಎಚ್ಚೆತ್ತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಹಿರೇಬಾಗೇವಾಡಿ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳ ಪಾತ್ರ, ಪಂಚಾಯಿತಿ ಮಟ್ಟದ ತೀರ್ಮಾನಗಳ ಹಿನ್ನೆಲೆ ಹಾಗೂ ಸಾಮಾಜಿಕ ಬಹಿಷ್ಕಾರದ ಪರಿಣಾಮಗಳ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

ನರಸೋಬಾ ಕರೆಪ್ಪ ಸಾಂಬ್ರೇಕರ ಅವರ ಕುಟುಂಬವನ್ನು ಗುರಿಯಾಗಿಸಿ ಸಮಾಜದ ಪಂಚರು ಸಾಮಾಜಿಕ ಬಹಿಷ್ಕಾರ ವಿಧಿಸಿದ್ದಾರೆಯೆಂಬ ಆರೋಪ ಕೇಳಿ ಬಂದಿದೆ. ಕುಟುಂಬದವರೊಂದಿಗೆ ಯಾರೂ ಮಾತನಾಡಬಾರದು, ಯಾವುದೇ ರೀತಿಯ ಸಂಪರ್ಕ ಹೊಂದಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದರಿಂದಾಗಿ ಕುಟುಂಬ ಸಂಪೂರ್ಣವಾಗಿ ಸಾಮಾಜಿಕವಾಗಿ ಒಂಟಿಯಾಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ದಿನನಿತ್ಯದ ಜೀವನಕ್ಕೂ ಅಡಚಣೆ ಉಂಟಾಗಿತ್ತು.

ಇನ್ನು, ಈ ಕುಟುಂಬದೊಂದಿಗೆ ಯಾರಾದರೂ ಮಾತನಾಡಿದರೆ ಅವರಿಗೆ ₹5 ಸಾವಿರ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದ್ದು, ಈ ಬಗ್ಗೆ ಮಾಹಿತಿ ನೀಡಿದವರಿಗೆ ₹1 ಸಾವಿರ ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಈ ರೀತಿಯ ನಿಯಮಗಳಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಹಲವರು ಕುಟುಂಬದೊಂದಿಗೆ ಮಾತನಾಡಲು ಹಿಂದೇಟು ಹಾಕುತ್ತಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ
ರಾಯಲ್‌ ಸ್ಕೂಲ್‌ ಸೌಲಭ್ಯಗಳು ರಾಜ್ಯಕ್ಕೆ ಮಾದರಿ