ಶಿಕ್ಷಣದಿಂದ ಮಾತ್ರ ಸಮಾಜ ಬದಲಾವಣೆ ಸಾಧ್ಯ: ಬಾಲಚಂದ್ರ ಜಾರಕಿಹೊಳಿ

KannadaprabhaNewsNetwork |  
Published : Sep 06, 2024, 01:12 AM IST
ಮೂಡಲಗಿ ಹೊಸಟ್ಟಿಯಲ್ಲಿ ಜರುಗಿದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ವೃತ್ತರನ್ನು ಸತ್ಕರಿ ನಿವೃತ್ತ ನೌಕರರನ್ನು ಸತ್ಕರಿಸಲಾಯಿತು. ಶಾಸಕ ಬಾಲಚಂದ್ರ ಜಅರಕಿಹೊಳಿ, ಇತರರು ಇದ್ದರು. | Kannada Prabha

ಸಾರಾಂಶ

ಶಿಕ್ಷಣದಿಂದ ಮಾತ್ರ ಸಮಾಜವನ್ನು ಬದಲಾಯಿಸಲು ಸಾಧ್ಯವೆಂದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಮೂಡಲಗಿ

ನಾನು ಶಾಸಕನಾದಗಿನಿಂದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತಂದಿದ್ದರ ಪರಿಣಾಮ ಇಂದು ಮೂಡಲಗಿ ಶೈಕ್ಷಣಿಕ ವಲಯ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಗುರುತಿಸಲು ಕಾರಣವಾಗಿದೆ. ಶಿಕ್ಷಣದಿಂದ ಮಾತ್ರ ಸಮಾಜವನ್ನು ಬದಲಾಯಿಸಲು ಸಾಧ್ಯವೆಂದು ಎಂದು ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಗುರುವಾರ ತಾಲೂಕಿನ ಹೊಸಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜರುಗಿದ ಡಾ.ಎಸ್. ರಾಧಾಕೃಷ್ಣನ್ ಜನ್ಮ ದಿನಾಚರಣೆ ಮತ್ತು ಮೂಡಲಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭವ್ಯ ಭಾರತದ ನಿರ್ಮಾಣದಲ್ಲಿ ಶಿಕ್ಷಕರು ಅಮೂಲ್ಯ ಪಾತ್ರ ವಹಿಸುವರು ಎಂದು ತಿಳಿಸಿದರು.

ಕ್ಷೇತ್ರದಲ್ಲಿ ಖಾಸಗಿ ಶಾಲೆಗಳ ಪೈಪೋಟಿಗಳ ಮಧ್ಯೆಯೂ ಸರ್ಕಾರಿ ಶಾಲೆಗಳಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಇದು ರಾಜ್ಯದಲ್ಲಿಯೇ ದಾಖಲೆಯಾಗಿದೆ. 9 ಮೊರಾರ್ಜಿ ದೇಸಾಯಿ ವಸತಿ ಶಾಲೆ, 37 ಸರ್ಕಾರಿ ಪ್ರೌಢಶಾಲೆ, 438 ಪ್ರಾಥಮಿಕ ಶಾಲೆ ಹೊಂದಿ ಶೈಕ್ಷಣಿಕವಾಗಿ ಪ್ರಗತಿ ಸಾಧಿಸುತ್ತಿದೆ ಎಂದು ಹೇಳಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ನಿವೃತ್ತ ಶಿಕ್ಷಕರನ್ನು ಸತ್ಕರಿಸಿದರು. ವಿವಿಧ ಪ್ರತಿಷ್ಠಾನಗಳಿಂದ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಾನ್ನಿಧ್ಯ ವಹಿಸಿದ್ದ ಸುಣಧೋಳಿಯ ಶಿವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.

ಹುಣಶ್ಯಾಳ ಪಿವೈ ಗ್ರಾಪಂಅಧ್ಯಕ್ಷ ಜಗದೀಶ ಡೊಳ್ಳಿ, ಗ್ರಾಪಂ. ಉಪಾಧ್ಯಕ್ಷೆ ಕಾಳವ್ವ ಗೌಡನ್ನವರ, ಮೂಡಲಗಿ ತಹಸೀಲ್ದಾರ ಮಹಾದೇವ ಸನಮೂರಿ, ಗೋಕಾಕ ತಹಸೀಲ್ದಾರ ಡಾ.ಮೋಹನ ಭಸ್ಮೆ, ತಾ.ಪಂ. ಇಒ ಎಫ್.ಜಿ. ಚಿನ್ನನವರ, ಜಿಪಂ ಮಾಜಿ ಸದಸ್ಯರಾದ ಗೋವಿಂದ ಕೊಪ್ಪದ, ಪರಮೇಶ್ವರ ಹೊಸಮನಿ, ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ, ಎಂ.ಎಂ. ಪಾಟೀಲ, ರವಿ ಪರುಶೆಟ್ಟಿ, ಹಣಮಂತ ತೇರದಾಳ, ಕರ್ನಲ್ ಪರುಶರಾಮ ನಾಯಿಕ, ಸಿಪಿಐ ಶ್ರೀಶೈಲ ಬ್ಯಾಕೂಡ, ಸಿಡಿಪಿಒ ವೈ.ಕೆ. ಗದಾಡಿ, ಮಂಜುನಾಥ ಸಣ್ಣಕ್ಕಿ, ಎ.ಬಿ. ಮಲಬನ್ನವರ, ಎಸ್ಡಿಎಎಂಸಿ ಅಧ್ಯಕ್ಷ ಜಿ.ಎಸ್. ಕಂಬಳಿ. ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಸಂಘದ ಪದಾಧಿಕಾರಿಗಳು ಸೇರಿದಂತೆ ಹಲವರು ಇದ್ದರು.ಮೂಡಲಗಿ ವಲಯ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

PREV

Recommended Stories

ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಎಮ್ಮೆ ಕೊಡಿಸುವುದಾಗಿ ಪ್ರೇಮ್‌ಗೆ ವಂಚನೆ : ₹4.75 ಲಕ್ಷ ಮೋಸ