ಕನ್ನಡಪ್ರಭ ವಾರ್ತೆ ಹೊಳಲ್ಕೆರೆ
ಚಿತ್ರಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ಪಠ್ಯಪೂರಕ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
650ಕ್ಕೂ ಹೆಚ್ಚು ಮಕ್ಕಳು ಪ್ರಥಮ ದರ್ಜೆ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಪ್ರತಿ ಪೋಷಕರಿಗೂ ಮಕ್ಕಳು ಶಿಕ್ಷಣವಂತರಾಗಲಿ ಎನ್ನುವ ಆಸೆ ಇರುತ್ತದೆ. 3 ಕೋಟಿ ರು. ಕಾಲೇಜು ನಿರ್ಮಾಣಕ್ಕೆ ಅನುದಾನ ಕೊಟ್ಟಿದ್ದೇನೆ. ಒಂದು ತಿಂಗಳಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಲಿದೆ. 10.5 ಕೋಟಿ ರು.ಗಳನ್ನು ಹೆಣ್ಣುಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕೆ ಮಂಜೂರು ಮಾಡಿದ್ದೇನೆ.ಪ್ರತ್ಯೇಕ ಕೊಠಡಿಗಳು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಇಲ್ಲಿ ಒದಗಿಸಲಾಗುವುದು. ಕಂಪ್ಯೂಟರ್ ಲ್ಯಾಬ್‍ಗೆ 10 ಲಕ್ಷ ರು. ಕೊಟ್ಟಿದ್ದೇನೆ. ತಾಳ್ಯದಲ್ಲಿ ರೈತರ ಕಷ್ಟಗಳನ್ನು ನೋಡಿ ಮತ್ತೊಂದು ಲಿಫ್ಟ್ ಕೊಡಲಾಗುತ್ತೆ. ಭದ್ರಾ ಪ್ರಾಜೆಕ್ಟ್‍ನಿಂದ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶನಿವಾರ ಪೂಜೆ ಮಾಡುತ್ತೇನೆಂದು ತಿಳಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಮೋಹನ್, ದೇವರಾಜ್, ಮಂಜುನಾಥ ನಾಯ್ಕ, ಲಾವಣ್ಯ ಎಸ್. ಶ್ರೀನಿವಾಸ್ ಜೆ. ರಮ್ಯ ಪಿ. ಭೋದಕ ಭೋದಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು.