ಕನ್ನಡಪ್ರಭ ವಾರ್ತೆ ಉಡುಪಿ
ಹಿಜಾಬ್ ವಿಚಾರದಲ್ಲಿ ರಾಜ್ಯ ಸರ್ಕಾರದ ಕ್ರಮವನ್ನು ಸ್ವಾಗತಿಸುವುದಾಗಿ ಅವರು ಹೇಳಿದ್ದಾರೆ. ಹಿಜಾಬ್ ಎನ್ನುವುದು ಕೇವಲ ಉಡುಪು ಅಲ್ಲ. ಅದು ಮುಸ್ಲಿಂ ಮಹಿಳೆಯರ ಧಾರ್ಮಿಕ ನಂಬಿಕೆ, ವೈಯಕ್ತಿಕ ಗೌರವ ಹಾಗೂ ಸಂವಿಧಾನಬದ್ಧ ಹಕ್ಕಿನ ಪ್ರತೀಕವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಹಿಜಾಬ್ ಗೆ ಅವಕಾಶ ನೀಡಿದ್ದು ಶಿಕ್ಷಣ ವ್ಯವಸ್ಥೆಯ ಇಸ್ಲಾಮೀಕರಣ ಎಂದು ಶಾಸಕರು ಬಣ್ಣಿಸಿದ್ದು ಅತ್ಯಂತ ದುರುದ್ದೇಶಪೂರಿತ ಹಾಗೂ ಸಮಾಜದಲ್ಲಿ ದ್ವೇಷ ಬಿತ್ತುವ ಪ್ರಯತ್ನವಾಗಿದ್ದು, ಬಿಜೆಪಿಯ ನಾಯಕರಿಗೆ ಜನರ ನೈಜ ಸಮಸ್ಯೆಗಳಿಗಿಂತ ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ರಾಜಕೀಯವೇ ಮುಖ್ಯವಾಗಿದೆ. ಅಭಿವೃದ್ಧಿಯ ವಿಚಾರದಲ್ಲಿ ಸಂಪೂರ್ಣ ವಿಫಲರಾದ ಉಡುಪಿಯ ಶಾಸಕರು ಇದೀಗ ಮತ್ತೆ ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಸಮಾಜದ ಸಾಮರಸ್ಯ ಹಾಳು ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ. ಜಿಲ್ಲೆಯ ಸಾಮರಸ್ಯವನ್ನು ಹಾಳು ಮಾಡಲು ನಿರಂತರ ಪ್ರಯತ್ನಗಳು ನಡೆಯುತ್ತಿದ್ದು, ಜನರು ಈ ರೀತಿಯ ಷಡ್ಯಂತ್ರ ರಾಜಕಾರಣವನ್ನು ಅರ್ಥ ಮಾಡಿಕೊಂಡಿದ್ದಾರೆ. ಮುಂದೆಯೂ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ, ಸಾಮಾಜಿಕ ನ್ಯಾಯ ಹಾಗೂ ಅಲ್ಪಸಂಖ್ಯಾತರ ಹಕ್ಕುಗಳ ಪರವಾಗಿ ಎಸ್‌ಡಿಪಿಐ ತನ್ನ ಹೋರಾಟವನ್ನು ಮತ್ತಷ್ಟು ಬಲವಾಗಿ ಮುಂದುವರಿಸಲಿದೆ ಎಂದು ಆಸಿಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.