ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅಗತ್ಯ

KannadaprabhaNewsNetwork |  
Published : Feb 22, 2024, 01:47 AM IST
ಪೋಟೊ21ಕೆಎಸಟಿ3: ಕುಷ್ಟಗಿ ಪಟ್ಟಣದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ವಿಶ್ವ ಸಾಮಾಜಿಕ ನ್ಯಾಯದ ದಿನಾಚರಣೆಯ ಅಂಗವಾಗಿ ನಡೆದ ಕಾನೂನೂ ವಿದ್ಯಾ ಪ್ರಸಾರ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ವಿಶ್ವದಾದ್ಯಂತ ಲಿಂಗ, ವಯಸ್ಸು, ಜನಾಂಗೀಯ, ಧರ್ಮ, ಸಂಸ್ಕೃತಿ, ಬಡತನ, ನಿರುದ್ಯೋಗ, ಶಿಕ್ಷಣ, ವಲಸೆ, ಆರ್ಥಿಕ ಮುಂತಾದ ಸಾಮಾಜಿಕ ಸಮಸ್ಯೆಗಳು ಗಂಭೀರವಾಗಿದೆ.

ಕುಷ್ಟಗಿ: ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯಕವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಸರಸ್ವತಿದೇವಿ ಹೇಳಿದರು.ಪಟ್ಟಣದ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ತಾಲೂಕು ಕಾನೂನೂ ಸೇವಾ ಸಮಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಅಂಗವಾಗಿ ನಡೆದ ಕಾನೂನು ವಿದ್ಯಾ ಪ್ರಸಾರ ಕಾರ್ಯಕ್ರಮಕ್ಕೆ ಸಸಿಗೆ ನೀರು ಹಾಕುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಸಾಮಾಜಿಕ ನ್ಯಾಯವು ರಾಷ್ಟ್ರಗಳ ಒಳಗೆ ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆಗೆ ಆಧಾರವಾಗಿರುವ ತತ್ವಾಗಿದೆ ಎಂದರು.ವಿಶ್ವದಾದ್ಯಂತ ಲಿಂಗ, ವಯಸ್ಸು, ಜನಾಂಗೀಯ, ಧರ್ಮ, ಸಂಸ್ಕೃತಿ, ಬಡತನ, ನಿರುದ್ಯೋಗ, ಶಿಕ್ಷಣ, ವಲಸೆ, ಆರ್ಥಿಕ ಮುಂತಾದ ಸಾಮಾಜಿಕ ಸಮಸ್ಯೆಗಳು ಗಂಭೀರವಾಗಿದೆ. ಇಂಥ ಸಮಸ್ಯೆಗಳನ್ನು ತೊಡೆದು ಹಾಕುವ ಪ್ರಯತ್ನಗಳಿಗೆ ಪ್ರೋತ್ಸಾಹಿಸಲು ಸಾಮಾಜಿಕ ಅಸಮಾನತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅದನ್ನು ಸಂಪೂರ್ಣವಾಗಿ ಕಿತ್ತು ಹಾಕಲು ಪ್ರತಿ ವರ್ಷ ಫೆಬ್ರವರಿ 20ರಂದು ವಿಶ್ವ ಸಾಮಾಜಿಕ ನ್ಯಾಯ ದಿನ ಆಚರಿಸಲಾಗುತ್ತದೆ ಎ೦ದರು.ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶ್ರೀನಿವಾಸ ನಾಯಕ, ವಕೀಲರ ಸಂಘದ ಅಧ್ಯಕ್ಷ ವಿಜಯಮಹಾಂತೇಶ ಕುಷ್ಟಗಿ, ಸಹಾಯಕ ಸರ್ಕಾರಿ ಅಭಿಯೋಜಕ ರಾಯನಗೌಡ, ಅಪರ ಸರ್ಕಾರಿ ವಕೀಲ ಪರಸಪ್ಪ ಗುಜಮಾಗಡಿ, ಸುನೀಲ ಮಠ ಇದ್ದರು. ಕಾರ್ಯಕ್ರಮದ ಉಪನ್ಯಾಸವನ್ನು ಬಿಆರ್‌ಸಿ ಅಧಿಕಾರಿ ದಾವಲಸಾಬ ವಾಲಿಕಾರ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಜಿ.ಎಂ. ಅಡವಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಕ್ರಾಂತಿಯಂದು ಪಂಚಮಸಾಲಿ ಪೀಠದಲ್ಲಿ ಹರ ಜಾತ್ರೆ
ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣ ಮಾಡಿ