ಸಾಮಾಜಿಕ ಹರಿಕಾರ ಹಡಪದ ಅಪ್ಪಣ್ಣ ಜಯಂತ್ಯುತ್ಸವ

KannadaprabhaNewsNetwork | Published : Jul 25, 2024 1:22 AM

ಸಾರಾಂಶ

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ವಿಶ್ವಕ್ಕೆ ವಿಶೇಷ ಸ್ಥಾನಮಾನ ನೀಡಿದಂತಹ ಯುಗ ಹನ್ನೆರಡನೇ ಶತಮಾನ ಕಾಲಘಟ್ಟದಲ್ಲಿ ಮೂಢನಂಬಿಕೆ, ಮೌಢ್ಯತೆಯ ವಿರುದ್ಧ ಸಂದೇಶ ಸಾರಿದ ಶರಣರ ಯುಗವನ್ನು ಬಸವಯುಗ ಎಂದೇ ಹೇಳಲಾಗುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ನಡೆದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು. 12ನೇ ಶತಮಾನ ಸುವರ್ಣ ಯುಗ, ಸೌಹಾರ್ಧ ಯುಗ, ಭಕ್ತಿಯುಗದಲ್ಲಿ ಅನೇಕ ಶರಣರು ತಮ್ಮ ವಚನಗಳ ಮೂಲಕ ಸಾಮಾಜಿಕ ಸಮಾನತೆ ಸಾರಿದ್ದಾರೆ ಎಂದರು. ವಿದ್ಯಾರ್ಥಿಗಳು ದಾರ್ಶನಿಕರ ಪುಣ್ಯ ಪುರುಷರ, ದಾರ್ಶನಿಕರ ಆದರ್ಶಗಳನ್ನು ತಿಳಿದುಕೊಳ್ಳುವುದರೊಂದಿಗೆ ಅವರ ಚಿಂತನೆಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಎಂ.ಟಿ.ಮಧು ಹಡಪದ ಅಪ್ಪಣ್ಣ 12ನೆ ಶತಮಾನದ ವಚನ ಚಳವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು ಎಂದರು. ಅಧ್ಯಕ್ಷತೆ ವಹಿಸಿದ ನವೋದಯ ವಿದ್ಯಾಲಯದ ಪ್ರಾಂಶುಪಾಲ ಒ.ಎಂ.ಪಂಕಜಾಕ್ಷನ್ ಮಾತನಾಡಿ ಬಸವಣ್ಣನವರ ಹಾಗೂ ಹಡಪದ ಅಪ್ಪಣ್ಣ, ಸಮಾಜಕ್ಕೆ ಮಾದರಿಯಾಗಿದ್ದರು. ಇವರ ಸಿದ್ಧಾಂತಗಳ ಇವತ್ತಿಗೂ ಆದರ್ಶ ಎಂದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಮಾತನಾಡಿ, ಸಮಾಜಕ್ಕೆ ದುಡಿದ ಪುಣ್ಯ ಪುರುಷರ ಆದರ್ಶಗಳು ಜಯಂತಿಗಳ ಮೂಲಕ ಇಂದಿನ ಪೀಳಿಗೆಗೆ ಪರಿಚಯಿಸಲು ಸರ್ಕಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಇದನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕೆಂದರು. ಜಿಲ್ಲಾ ಸವಿತಾ ಸಮಾಜದ ಉಪದ್ಯಾಕ್ಷ ಚರಣ್ ಇದ್ದರು. ಇದೇ ಸಂದರ್ಭ ಮಾರುತಿ ದಾಸಣ್ಣನವರ್ ತಂಡದವರಿಂದ ವಚನ ಗಾಯನ ಏರ್ಪಡಿಸಲಾಗಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್ ನಿರೂಪಿದರು.

Share this article