ರಂಗಭೂಮಿಯಿಂದ ಸಮಾಜ ಸುಧಾರಣೆ ಸಾಧ್ಯ: ಡಾ.ನಿ.ಬೀ.ಬಲ್ಲಾಳ್

KannadaprabhaNewsNetwork |  
Published : Jan 02, 2024, 02:15 AM IST
ಅಂಬಲಪಾಡಿ ನಾಟಕೋತ್ಸವವನ್ನು ಡಾ.ನಿ,.ಬಿ.ವಿ.ಬಲ್ಲಾಳ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಭಾನುವಾರ ಅಂಬಲವಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಳದ ಬಯಲು ರಂಗಮಂದಿರದಲ್ಲಿ ರಂಗಭೂಮಿ ಉಡುಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ 2 ದಿನಗಳ ನೀನಾಸಂ ತಿರುಗಾಟದ ನಾಟಕಗಳ ಪ್ರದರ್ಶನ ‘ಅಂಬಲಪಾಡಿ ನಾಟಕೋತ್ಸವ- 2023’ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ, ಜನರನ್ನು ಉತ್ತಮ ನಾಗರಿಕರನ್ನಾಗಿ ಮಾಡುವಲ್ಲಿ ರಂಗಭೂಮಿಯ ಕೊಡುಗೆ ಅಪಾರ ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ಎನ್.ಬಿ. ವಿಜಯ ಬಲ್ಲಾಳ್ ಹೇಳಿದರು.

ಅವರು ಭಾನುವಾರ ಅಂಬಲವಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಳದ ಬಯಲು ರಂಗಮಂದಿರದಲ್ಲಿ ರಂಗಭೂಮಿ ಉಡುಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ 2 ದಿನಗಳ ನೀನಾಸಂ ತಿರುಗಾಟದ ನಾಟಕಗಳ ಪ್ರದರ್ಶನ ‘ಅಂಬಲಪಾಡಿ ನಾಟಕೋತ್ಸವ- 2023’ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ಪ್ರೊ.ಆರ್.ಎಲ್.ಭಟ್ ಅವರಿಗೆ ರಂಗ ಸನ್ಮಾನ ನಡೆಯಿತು. ಟ್ಯಾಕ್ಸ್ ಕನ್ಸಲ್ಟೆಂಟ್ ಬಿ.ಎಂ.ಭಟ್ ಹಾಗೂ ಆರ್ಕಿಟೆಕ್ ಎಂ.ಗೋಪಾಲ ಭಟ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಉಪಾಧ್ಯಕ್ಷರಾದ ವಾಸುದೇವ ರಾವ್ ಹಾಗೂ ರಾಜಗೋಪಾಲ್ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮೀನಾರಾಯಣ ಕೊಡವೂರು ಸನ್ಮಾನಿತರನ್ನು ಪರಿಚಯಿಸಿದರು.

ಸಭಾ ಕಾರ್ಯಕ್ರಮದ ಬಳಿಕ ನಾಟಕಕಾರ ಚಂದ್ರಶೇಖರ್ ಕಂಬಾರ ರಚನೆಯ ಕೆ.ಜಿ.ಕೃಷ್ಣಮೂರ್ತಿ ನಿರ್ದೇಶನದ ನೀನಾಸಂ ತಿರುಗಾಟದ ನಾಟಕ ‘ಹುಲಿಯ ನೆರಳು’ ಪ್ರದರ್ಶನಗೊಂಡಿತು.ರಂಗಭೂಮಿಯಲ್ಲಿ ಸಂಪೂರ್ಣ ರಾಮಾಯಣ

ವರ್ಷಕ್ಕೆ 22ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯುವ ಜನರಲ್ಲಿ ರಂಗಾಸಕ್ತಿಯನ್ನು ಬೆಳೆಸುತ್ತಿರುವ ರಂಗಭೂಮಿ ಉಡುಪಿ, ಪ್ರಪ್ರಥಮ ಬಾರಿಗೆ ಸಂಪೂರ್ಣ ರಾಮಾಯಣವನ್ನು ರಂಗಭೂಮಿಯಲ್ಲಿ ಆಡಿ ತೋರಿಸುವ ವಿಭಿನ್ನ ಪ್ರಯೋಗವನ್ನು ಕೈಗೆತ್ತಿಕೊಂಡಿದೆ ಎಂದು ರಂಗಭೂಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!