ಕನ್ನಡಪ್ರಭ ವಾರ್ತೆ ಕಾರ್ಕಳ
ಅವರು ಮಂಗಳವಾರ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜೋಡು ರಸ್ತೆ ಹೋಟೆಲ್ ಸಭಾಂಗಣದಲ್ಲಿ ನಡೆದ ಪ್ರತಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜದ ಅಂಕು ಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರು ಮಹತ್ವದ ಪಾತ್ರವನ್ನು ವಹಿಸುತ್ತಾರೆ ಎಂದರು. ಪ್ರಚಲಿತ ವಿದ್ಯಮಾನಗಳ ಬಗ್ಗೆ ಹಾಗೂ ಇನ್ನಿತರ ಸಮಸ್ಯೆ ಕುರಿತು ಮಾತನಾಡಿದರು.ಸಾಹಿತಿ, ಶಿಕ್ಷಕಿ ಸಾವಿತ್ರಿ ಮನೋಹರ್ ಮಾತನಾಡಿ, ಪತ್ರಕರ್ತರು ಎಂದರೆ ಜನರ ಜೀವನದ ಪ್ರತಿ ಬಿಂಬ ಪತ್ರಕರ್ತ ಬದುಕು ತುಂಬಾ ಕಠಿಣವಾಗಿದೆ ಎಂದರು .
ಪತ್ರಕರ್ತ ಸಂಘದ ಉಡುಪಿ ಜಿಲ್ಲಾ ರಾಜೇಶ್ ಶೆಟ್ಟಿ ಮಾತನಾಡಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ತಾಲೂಕು ಸಂಘದ ಅಧ್ಯಕ್ಷ ಮೊಹಮ್ಮದ್ ಷರೀಫ್ ವಹಿಸಿದರು.
ವೇದಿಕೆಯಲ್ಲಿ ತಾಲೂಕು ಕೋಶಾಧಿಕಾರಿ ಕೆ ಎಂ ಕಲೀಲ್, ಸಂಘದ ಕಾರ್ಯದರ್ಶಿ ಹರೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಸದಸ್ಯ ಉದಯಶೆಟ್ಟಿ ವಂದಿಸಿದರು.