ನಿಸ್ವಾರ್ಥ ಕಾರ್ಯನಿರ್ವಹಣೆಗೆ ಸಾಮಾಜಿಕ ಗೌರವ: ಶಶಿಧರ್‌

KannadaprabhaNewsNetwork |  
Published : Jun 03, 2026, 02:45 AM IST
ನಾಗರಿಕ ಸನ್ಮಾನ ಸಂದರ್ಭ | Kannada Prabha

ಸಾರಾಂಶ

ತಾಲೂಕು ಕಚೇರಿಗೆ ಸಮಸ್ಯೆಗಳನ್ನು ಹೊತ್ತು ಬರುತ್ತಿದ್ದ ಜನಸಾಮಾನ್ಯರಿಗೆ ಉತ್ತಮ ಸೇವೆ ಸಲ್ಲಿಸುವ ಅವಕಾಶ ದೊರಕಿರುವುದು ತನಗೆ ಸಂಪೂರ್ಣ ತೃಪ್ತಿ ತಂದಿದೆ ಎಂದು ಕುಶಾಲನಗರ ತಹಸೀಲ್ದಾರ್ ಕಿರಣ್ ಜಿ. ಗೌರಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ ತಾಲೂಕು ಕಚೇರಿಗೆ ಸಮಸ್ಯೆಗಳನ್ನು ಹೊತ್ತು ಬರುತ್ತಿದ್ದ ಜನಸಾಮಾನ್ಯರಿಗೆ ಉತ್ತಮ ಸೇವೆ ಸಲ್ಲಿಸುವ ಅವಕಾಶ ದೊರಕಿರುವುದು ತನಗೆ ಸಂಪೂರ್ಣ ತೃಪ್ತಿ ತಂದಿದೆ ಎಂದು ಕುಶಾಲನಗರ ತಹಸೀಲ್ದಾರ್ ಕಿರಣ್ ಜಿ. ಗೌರಯ್ಯ ಹೇಳಿದರು. ಕುಶಾಲನಗರ ಪ್ರಜ್ಞಾವಂತ ನಾಗರಿಕ ವೇದಿಕೆ ಆಶ್ರಯದಲ್ಲಿ ಅವರಿಗೆ ಪಟ್ಟಣದ ಕಲಾಭವನದಲ್ಲಿ ನಡೆದ ಬೀಳ್ಕೊಡುಗೆ ಮತ್ತು ನಾಗರಿಕ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ವೇದಿಕೆಯ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಕುಶಾಲನಗರ ನೂತನ ತಾಲೂಕು ರಚನೆಗೊಂಡ ಬೆನ್ನಲ್ಲೇ ಜನಸಾಮಾನ್ಯರಿಗೆ ಹಲವು ಸಮಸ್ಯೆಗಳು ಕಂಡುಬಂದರೂ ಅದಕ್ಕೆ ಸೂಕ್ತ ಪರಿಹಾರ ಕಲ್ಪಿಸುವಲ್ಲಿ ಕಿರಣ್ ಯಶಸ್ವಿಯಾಗಿದ್ದಾರೆ ಎಂದರು.

ಕುಶಾಲನಗರ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಸ್.ಆರ್. ಮಾದಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಕುಶಾಲನಗರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್. ಶರವಣ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರ ಬಾಬು, ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಜಿಲ್ಲಾ ಅಧ್ಯಕ್ಷ ಬಿ.ಆರ್. ನಾಗೇಂದ್ರಪ್ರಸಾದ್, ರೆಡ್ ಕ್ರಾಸ್ ತಾಲೂಕು ಅಧ್ಯಕ್ಷ ಎಸ್.ಕೆ. ಸತೀಶ್, ಕುಶಾಲನಗರ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಂ.ವಿ. ನಾರಾಯಣ, ನಿವೃತ್ತ ಪ್ರಾಂಶುಪಾಲ ಡಾ. ಜೆ. ಸೋಮಣ್ಣ, ರೋಟರಿ ಅಧ್ಯಕ್ಷ ಮನು ಪೆಮ್ಮಯ್ಯ, ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಪುರಸಭೆ ಮಾಜಿ ಸದಸ್ಯರಾದ ವಿ.ಎಸ್. ಆನಂದ ಕುಮಾರ್ ಶುಭ ಹಾರೈಸಿದರು.

ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ನಾಗರಿಕ ಸನ್ಮಾನ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಗೌರವಿಸಲಾಯಿತು. ಪತ್ರಕರ್ತರಾದ ಕೆ.ಎಸ್. ಮೂರ್ತಿ ಸ್ವಾಗತಿಸಿ, ವಿ.ಎಸ್. ಆನಂದ ಕುಮಾರ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಕರಿಗೆ ಆನ್‌ಲೈನ್‌ ಹಾಜರಾತಿ ಧರ್ಮಸಂಕಟ !
ಕ್ರೆಡಿಟ್‌ಗಾಗಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಪ್ರಚಾರ ಜೋರು!