ಸಮೀಕ್ಷೆ ಸಮಬಾಳು ತತ್ವ ಒಳಗೊಂಡಿರುವ ಸಾಮಾಜಿಕ ಕ್ರಾಂತಿ: ಶಾಸಕ

KannadaprabhaNewsNetwork |  
Published : Sep 23, 2025, 01:05 AM IST
22ಎಚ್.ಎಲ್.ವೈ-:1: ಪಟ್ಟಣದ ತಮ್ಮ ನಿವಾಸದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಅವರು ಹಳಿಯಾಳ ವಿಧಾನಸಭಾ ಕ್ಷೇತ್ರ ಮಟ್ಟದ ಜಾತಿ ಗಣತಿಗೆ ಚಾಲನೆ ನೀಡಿದರು. | Kannada Prabha

ಸಾರಾಂಶ

ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಎಲ್ಲಾ ಧರ್ಮದವರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಅಧ್ಯಯನವಾಗಿರದೇ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ತತ್ವವನ್ನು ಒಳಗೊಂಡಿರುವ ಸಾಮಾಜಿಕ ಕ್ರಾಂತಿಯಾಗಿದೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಆರ್.ವಿ. ದೇಶಪಾಂಡೆ ಚಾಲನೆ

ಕನ್ನಡಪ್ರಭ ವಾರ್ತೆ ಹಳಿಯಾಳ

ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಎಲ್ಲಾ ಧರ್ಮದವರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಅಧ್ಯಯನವಾಗಿರದೇ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ತತ್ವವನ್ನು ಒಳಗೊಂಡಿರುವ ಸಾಮಾಜಿಕ ಕ್ರಾಂತಿಯಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.

ಸೋಮವಾರ ತಮ್ಮ ನಿವಾಸದಲ್ಲಿ ನಡೆದ ಸಮಾರಂಭದಲ್ಲಿ ಹಳಿಯಾಳ ವಿಧಾನಸಭಾ ಕ್ಷೇತ್ರ ಮಟ್ಟದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಗಣತಿಯು ಸೆ.22ರಿಂದ ಆರಂಭಗೊಂಡು ಅ. 7ರವರೆಗೆ ನಡೆಯಲಿದೆ. ಈ ಗಣತಿ ಮಾಡಲು ಶಿಕ್ಷಕ ವೃಂದವನ್ನು ನೇಮಿಸಲಾಗಿದ್ದು, ನಿಮ್ಮ ಮನೆಗಳಿಗೆ ಮಾಹಿತಿಯನ್ನು ಪಡೆಯಲು ಗಣತಿದಾರರು ಬಂದಾಗ ಅವರು ಕೇಳುವ ಸಮೀಕ್ಷಾ ಸಮೂನೆಯಲ್ಲಿದ್ದ 60 ಪ್ರಶ್ನೆಗಳ ಕಾಲಂಗಳಿಗೆ ಮನೆಯ ಮುಖ್ಯಸ್ಥರು ಸಂಪೂರ್ಣ ಹಾಗೂ ನಿಖರವಾದ ಮಾಹಿತಿ ನೀಡಬೇಕು, ಹೀಗೆ ಸಮೀಕ್ಷಾ ಕಾರ್ಯದಲ್ಲಿ ಸರ್ವರೂ ಭಾಗವಹಿಸಿ ಗಣತಿದಾರರಿಗೆ ಸ್ಪಷ್ಟವಾದ ಮಾಹಿತಿಯನ್ನು ನೀಡಿ ಸಮೀಕ್ಷಾ ಕಾರ್ಯವನ್ನು ಯುಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.ತಹಸೀಲ್ದಾರ ಫಿರೋಜಷಾ ಸೋಮನಕಟ್ಟಿ, ಬಿಇಒ ಪ್ರಮೋದ ಮಹಾಲೆ, ಬಿಸಿಎಂ ಅಧಿಕಾರಿ ಸುಜಾತಾ ಕಡತಾರೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಷ್ ನಾಯ್ಕ ಬಾವಿಕೇರಿ, ಪ್ರಶಾಂತ ನಾಯ್ಕ್, ವಿ.ಆರ್.ಡಿ.ಎಂ ಟ್ರಸ್ಟ್ ಆಡಳಿತಾಧಿಕಾರಿ ಪ್ರಕಾಶ ಪ್ರಭು ಹಾಗೂ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ