ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಂಯುಕ್ತಾಶ್ರಯದಲ್ಲಿ, ನಗರದ ಶುಭಂ ಪೆಟ್ರೋಲ್ ಪಂಪ್ ಹಿಂಭಾಗದ ಪಾಟೀಲ್ ಕನ್ವೆನ್ಷನ್ ಹಾಲ್‌ನಲ್ಲಿ ಬುಧವಾರ ಆಯೋಜಿಸಲಾಗಿದ್ದ ಯಾದಗಿರಿ ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನೂರಾರು ಸಮಸ್ಯೆಗಳನ್ನು ಎದುರಿಸುತ್ತಿರುವ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸುಮಾರು 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರಿಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ತಕ್ಷಣ ಉಚಿತವಾಗಿ ನೋಂದಾಯಿಸಿಕೊಂಡು, ಸ್ಮಾರ್ಟ್ ಕಾರ್ಡ್ ಪಡೆದು ಸವಲತ್ತುಗಳ ಲಾಭ ಪಡೆಯುವಂತೆ ಸಲಹೆ ನೀಡಿದರು.ರಾಜ್ಯದ ದುಡಿಯುವ ಜನರಲ್ಲಿ ಅಸಂಘಟಿತ ವಲಯದ ಪ್ರತಿಶತ 85 ರಷ್ಟು ಕಾರ್ಮಿಕರಿದ್ದಾರೆ. ವಿವಿಧ ವಲಯದಲ್ಲಿ ಕಾರ್ಯ ನಿರ್ವಹಿಸುವುದರ ಮೂಲಕ ರಾಜ್ಯಕ್ಕೆ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ "ಡಾ. ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ " ಯನ್ನುಅನುಷ್ಠಾನಗೊಳಿಸಲಾಗಿದೆ ಎಂದರು. ಈ ಯೋಜನೆಯಡಿ 101 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದ್ದು, ಸುಮಾರು 35 ಲಕ್ಷ ಕಾರ್ಮಿಕರು ಒಳಗೊಂಡಿದ್ದಾರೆ. ಅವರಿಗೆ ಉಚಿತವಾಗಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗಿದೆ ಎಂದರು.
ಇಂತಹ ಅಸಂಘಟಿತ ಕಾರ್ಮಿಕರ ಅಪಘಾತ ಸಂಭವಿಸಿದಲ್ಲಿ 1 ಲಕ್ಷ ಪರಿಹಾರ ನೀಡಲಾಗುವುದು. ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ 4 ಲಕ್ಷದವರೆಗೆ ವಿಮಾ ಸೌಲಭ್ಯ ನೀಡಲಾಗುವುದು. ಆಶಾದೀಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರಿಗೆ ಉದ್ಯೋಗದಾತರು, ಉದ್ದಿಮೆದಾರರು ಉದ್ಯೋಗ ನೀಡಿದಲ್ಲಿ ಶೇ.50 ರಷ್ಟು ವೇತನ ಕಾರ್ಮಿಕ ಇಲಾಖೆಯಿಂದಲೇ ಭರಿಸಲಾಗುವುದೆಂದರು.
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್, ಶಾಸಕ ರಾಜಾ ವೇಣುಗೋಪಾಲ್ ನಾಯಕ, ನಗರಸಭೆ ಅಧ್ಯಕ್ಷ ಲಲಿತಾ ಅನಪುರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ್,
ಇದೇ ಸಂದರ್ಭದಲ್ಲಿ ಆಶಾದೀಪ ಯೋಜನೆಯಡಿ ವೇತನ ಮರುಪಾವತಿ ಚೆಕ್ ವಿತರಣೆ, ಖಾಸಗಿ ವಾಹನ ಚಾಲಕರ ಅಪಘಾತ ಮರಣ ಪರಿಹಾರ ಧನ ಸಹಾಯ ಹಾಗೂ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು. ಕಾರ್ಮಿಕ ಇಲಾಖೆ ಆಯುಕ್ತ ಗೋಪಾಲಕೃಷ್ಣ ಸಂವಿಧಾನದ ಪೀಠಿಕೆ ಬೋಧಿಸಿದರು. ಜಂಟಿ ಆಯುಕ್ತ ರವಿಕುಮಾರ್ ಹಾಗೂ ಇತರೆ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕರು ಉಪಸ್ಥಿತರಿದ್ದರು.