ಡಾ.ಪುನೀತ್‌ ರಾಜಕುಮಾರ್ ಚಾರಿಟೇಬಲ್ ಟ್ರಸ್ಟ್‌ನಿಂದ ಸಮಾಜಮುಖಿ ಕೆಲಸ: ಶಿಲ್ಪಗೌಡ

KannadaprabhaNewsNetwork | Published : Nov 24, 2024 1:47 AM

ಸಾರಾಂಶ

ಡಾ.ಪುನೀತ್‌ ರಾಜಕುಮಾರ್ ಚಾರಿಟೇಬಲ್ ಟ್ರಸ್ಟ್‌ನಿಂದ ರಾಜ್ಯಾದ್ಯಂತ ಅನಾಥಾಶ್ರಮ, ವೃದ್ಧಾಶ್ರಮ, ಗೋಶಾಲೆ ಹಾಗೂ ಗ್ರಾಮೀಣ ಭಾಗದ ಮಕ್ಕಳಿಗೂ ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಪ್ರತೀ ಹಳ್ಳಿಯಲ್ಲೂ ಸಂಜೆ ಸಮಯದಲ್ಲಿ ಮಕ್ಕಳಿಗೆ ಉಚಿತವಾಗಿ ಟ್ಯೂಷನ್ ಕಲ್ಪಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಕರ್ನಾಟಕ ರತ್ನ ಡಾ.ಪುನೀತ್‌ ರಾಜಕುಮಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನಾದ್ಯಂತ ಸಮಾಜಮುಖಿ ಕೆಲಸ ಮಾಡಲಾಗುವುದು ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷೆ ಶಿಲ್ಪಗೌಡ ತಿಳಿಸಿದರು.

ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಸಂಘದಿಂದ ನಡೆದ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿ, ಟ್ರಸ್ಟ್‌ನಿಂದ ರಾಜ್ಯಾದ್ಯಂತ ಅನಾಥಾಶ್ರಮ, ವೃದ್ಧಾಶ್ರಮ, ಗೋಶಾಲೆ ಹಾಗೂ ಗ್ರಾಮೀಣ ಭಾಗದ ಮಕ್ಕಳಿಗೂ ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಪ್ರತೀ ಹಳ್ಳಿಯಲ್ಲೂ ಸಂಜೆ ಸಮಯದಲ್ಲಿ ಮಕ್ಕಳಿಗೆ ಉಚಿತವಾಗಿ ಟ್ಯೂಷನ್ ಕಲ್ಪಿಸಲಾಗುತ್ತಿದೆ ಎಂದರು.

ಟ್ರಸ್ಟ್‌ನ ಸಂಘಟನಾ ರಾಜ್ಯ ಅಧ್ಯಕ್ಷ ಎಚ್.ಸಿ.ಸಂತೋಷ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಎಚ್.ಆರ್.ರಾಣಿ, ತಾಲೂಕು ಘಟಕದ ಅಧ್ಯಕ್ಷ ಹೇಮಂತ್‌ಕುಮಾರ್, ಉಪಾಧ್ಯಕ್ಷ ಎ.ಬಿ.ಧರ್ಮ, ಗೌರವ ಅಧ್ಯಕ್ಷ ಆಕಾಶ್, ಖಜಾಂಚಿ ಚಂದನ್, ಸಂಘಟನಾ ಕಾರ್ಯದರ್ಶಿ ಹೃತಿಕ್, ರಾಘವೇಂದ್ರ, ಬೂಕನಕೆರೆ ಗ್ರಾಪಂ ಅಧ್ಯಕ್ಷ ಶ್ಯಾಮ್‌ಪ್ರಸಾದ್, ಕಾರ್ಯದರ್ಶಿ ಮಹೇಶ್, ಲೆಕ್ಕ ಸಹಾಯಕ ಲೋಕೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ತಾಲೂಕು ಯೋಜನಾಧಿಕಾರಿ ತಿಲಕ್‌ರಾಜ್, ಮೇಲ್ವಿಚಾರಕ ಪ್ರಕಾಶ್, ಆರೋಗ್ಯ ಸಹಾಯಕಿ. ಫಿಲೋಮಿನಾ, ಶಿಲ್ಪ, ಮಂಜುನಾಥ್ ಸೇರಿದಂತೆ ಹಲವರಿದ್ದರು.

ಎಸ್ಸೆಸ್ಸೆಲ್ಸಿ ನಂತರ ಮುಂದೇನು? ನ.27,28 ರಂದು ಕಾರ್ಯಾಗಾರ

ಮದ್ದೂರು: ತಾಲೂಕಿನ ಕೆ.ಹೊನ್ನಲಗೆರೆಯ ಆರ್.ಕೆ.ಸಮೂಹ ಶಿಕ್ಷಣ ಸಂಸ್ಥೆಯ ಆರ್.ಕೆ. ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನ.27 ಮತ್ತು 28 ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಂತರ ಮುಂದೇನು? ಎಂಬ ವಿಷಯ ಕುರಿತು ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಾಗಾರವು ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವಿನಯ್ ರಾಮಕೃಷ್ಣ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಜಿಲ್ಲಾಧಿಕಾರಿ ಡಾ. ಕುಮಾರ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ಎಂ.ಉದಯ್ ಉಪಸ್ಥಿತಿಯಲ್ಲಿ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಸಾಕ್ಷರತೆ ಮತ್ತು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಶಿವರಾಮೇಗೌಡ, ಡಯಟ್ ಉಪನಿರ್ದೇಶಕ ಸಿ.ಪುರುಷೋತ್ತಮ್, ಬಿಇಒ ಸಿ.ಎಚ್.ಕಾಳೀರಯ್ಯ ಭಾಗವಹಿಸಲಿದ್ದಾರೆ. ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಲಿದ್ದಾರೆ

ನ.28ರಂದು ಕಾರ್ಯಾಗಾರದ ಅಧ್ಯಕ್ಷತೆಯನ್ನು ಆರ್.ಕೆ.ಸಮೂಹ ಶಿಕ್ಷಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವಿನಯ್ ರಾಮಕೃಷ್ಣ ವಹಿಸಲಿದ್ದು, ಸಿಇಒ ಕೀರ್ತನ ಬಿ.ನಿಖಿಲ್, ಶೈಕ್ಷಣಿಕ ಪಾಲುದಾರರಾದ ಕೆ.ಸಿ. ಗೌತಮ್, ವೈ.ಎಸ್. ಅಜಯ್ ಕುಮಾರ್, ಎಲ್.ಎನ್. ಚಂದ್ರಶೇಖರ್ ಭಾಗವಹಿಸಲಿದ್ದಾರೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

Share this article