ರಿಯಲ್ ಎಸ್ಟೇಟ್ ಉದ್ಯಮದ ಜತೆಯಲ್ಲಿ ಸಮಾಜ ಸೇವೆಯಲ್ಲಿ ಸಕ್ರಿಯರಾಗಿದ್ದ ಶಿವಕುಮಾರ್ ಕಳೆದ ಹಲವು ವರ್ಷಗಳಿಂದ ತಮ್ಮ ಟ್ರಸ್ಟ್ ಮೂಲಕ ಪ್ರತಿ ವರ್ಷ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸುವುದು ಸೇರಿ ಹಲವು ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತ ಬಂದಿದ್ದರು.
ಮಾಲೂರು: ದೇವನಹಳ್ಳಿ ಸಮೀಪ ಕಾರು ಹಾಗೂ ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಾಲೂಕಿನ ಯುವ ಮುಖಂಡ ಮಾದನಹಟ್ಟಿ ಗ್ರಾಮದ ಶಿವಕುಮಾರ್(೩೮) ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮದ ಜತೆಯಲ್ಲಿ ಸಮಾಜ ಸೇವೆಯಲ್ಲಿ ಸಕ್ರಿಯರಾಗಿದ್ದ ಶಿವಕುಮಾರ್ ಕಳೆದ ಹಲವು ವರ್ಷಗಳಿಂದ ತಮ್ಮ ಟ್ರಸ್ಟ್ ಮೂಲಕ ಪ್ರತಿ ವರ್ಷ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸುವುದು ಸೇರಿ ಹಲವು ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತ ಬಂದಿದ್ದರು. ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾದ ಮೊಳಕಾಲ್ಮೂರನ್ನು ಆಯ್ಕೆ ಮಾಡಿಕೊಂಡು ಅಲ್ಲಿನ ರಾಜಕಾರಣದಲ್ಲಿ ಸಕ್ರಿಯರಾಗಿದ್ದರು. ರಾಜಕಾರಣ ಸಂಬಂಧ ಮೊಳಕಾಲ್ಮೂರಿಗೆ ತೆರಳಿ ಕಾರ್ಯಕ್ರಮ ಮುಗಿಸಿಕೊಂಡು ರೇಂಜ್ ರೋವರ್ ಕಾರಿನಲ್ಲಿ ಮಾಲೂರಿಗೆ ವಾಪಸ್ಸು ಬರುವಾಗ ಈ ಘಟನೆ ಸಂಭವಿಸಿದೆ.
ಮೃತರ ಅಂತ್ಯ ಸಂಸ್ಕಾರವು ತಾಲೂಕಿನ ಮಾದನಹಟ್ಟಿ ಗ್ರಾಮದ ಬಳಿ ಸಂಜೆ ನಡೆಯಿತು. ಶಿವಕುಮಾರ್ ಅಕಾಲಿಕ ಮರಣಕ್ಕೆ ಮಾಜಿ ಶಾಸಕ ಕೆ.ಎಸ್.ಮಂಜುನಾಥ್ ಗೌಡ , ತಾಲೂಕು ಬಿಜೆಪಿ ಅಧ್ಯಕ್ಷ ಟಿ.ಬಿ.ಕೃಷ್ಣಪ್ಪ , ಜೆಡಿಎಸ್ ಮುಖಂಡ ಹೂಡಿ ವಿಜಯಕುಮಾರ್ , ಜಿಪಂ ಮಾಜಿ ಸದಸ್ಯ ಚಿನ್ನಸ್ವಾಮಿಗೌಡ, ತಾಪಂ ಮಾಜಿ ಸದಸ್ಯರಾದ ಮಾಲಾ ರಾಜಪ್ಪ ಇನ್ನಿತರರು ಸಂತಾಪ ಸೂಚಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.