ಹರಪನಹಳ್ಳಿ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಭದ್ರ ಬುನಾದಿ ಹಾಕುವರು ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.
ಕೋವಿಡ್ ಬಂದಾಗ ಅಂಗನವಾಡಿ ಕಾರ್ಯಕರ್ತೆಯರು ಜೀವ ಲೆಕ್ಕಿಸದೇ ಕೆಲಸ ಮಾಡಿದ್ದೀರಿ. ಕೆಲವರು ಅಂಗನವಾಡಿ ಕಾರ್ಯಕರ್ತೆಯರು ಏನು ಬ್ಯಾಗ್ ಹಾಕಿಕೊಂಡು ಹೋಗುತ್ತಾರೆ ಎನ್ನುತ್ತಾರೆ. ಆದರೆ ಅದೇ ಬ್ಯಾಗ್ ಗುರುತಿನಿಂದ ನಾನು ಗೆದ್ದಿದ್ದು ಎಂದು ಸ್ಮರಿಸಿದರು.
ತಳ ಮಟ್ಟದವರು ನನ್ನನ್ನು ಗುರುತಿಸಿದ್ದಾರೆ. ಮುಷ್ಟಿ ಪ್ರೀತಿ ನೀಡಿದ್ದೀರಿ ನಿಮಗೆ ನಾನು ಅಭಿನಂದನೆ ಸಲ್ಲಿಸುವುದು ಹೆಮ್ಮೆಯ ಸಂಗತಿ. ಅಂಗನವಾಡಿ ಕಾರ್ಯಕರ್ತೆಯರು ಸಾಮಾಜಿಕ ಕಳಕಳಿಯುಳ್ಳವರು ಎಂದು ಹೇಳಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಕುಬೇರಗೌಡ, ಮುಖಂಡರಾದ ಗೌತಮ್ ಪ್ರಭು, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ವೆಂಕಟೇಶ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಲಾಟಿ ದಾದಾಪೀರ, ಪುರಸಭಾ ಸದಸ್ಯರಾದ ಅಬ್ದುಲ್ ರಹಿಮಾನ್, ಜಾಕೀರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಂಚಿಕೇರಿ ಜಯಲಕ್ಷ್ಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಉದಯಶಂಕರ, ಯುವ ಮುಖಂಡ ಶಮಿವುಲ್ಲಾ, ವಕೀಲ ಬಸವರಾಜ ಸಂಗಪ್ಪನವರ್, ಇಸ್ಮಾಯಿಲ್ ಎಲಿಗಾರ, ಮತ್ತೂರು ಬಸವರಾಜ ಉಪಸ್ಥಿತರಿದ್ದರು.
ಹರಪನಹಳ್ಳಿ ಪಟ್ಟಣದ ಎಡಿಬಿ ಕಾಲೇಜು ಆವರಣದಲ್ಲಿ ಎಂ.ಪಿ. ರವೀಂದ್ರ ಪ್ರತಿಷ್ಠಾನದಿಂದ ಆಯೋಜಿಸಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ಅಭಿನಂದನಾ ಸಮರ್ಪಣೆ ಕಾರ್ಯಕ್ರಮದಲ್ಲಿ ಶಾಸಕಿ ಎಂ.ಪಿ.ಲತಾ ಸೀರೆ ಉಡುಗೊರೆ ನೀಡಿದರು.