ಶಿಕ್ಷಣ, ಸಂಸ್ಕಾರದಿಂದ ಮಾತ್ರ ಸಮಾಜದ ಉದ್ಧಾರ: ಮಾಜಿ ಸಚಿವ ಶ್ರೀರಾಮುಲು

KannadaprabhaNewsNetwork |  
Published : Nov 04, 2025, 03:00 AM IST
ಲಕ್ಷೆö್ಮÃಶ್ವರದ ತೇರಿನ ಮನೆ ಆವರಣದಲ್ಲಿ ಸೋಮವಾರ ಮಹರ್ಷಿ ವಾಲ್ಮೀಕಿ ಹಾಗೂ ವೀರಮದಕರಿ ನಾಯಕರ ಜಯಂತ್ಯೋತ್ಸವವನ್ನು ಮಾಜಿ ಸಚಿವ ಬಿ.ಶ್ರೀರಾಮುಲು ಉದ್ಘಾಟಿಸಿದರು*ಲಕ್ಷೆö್ಮÃಶ್ವರ: ‘ಶಿಕ್ಷಣ ಮತ್ತು ಉತ್ತಮ ಸಂಸ್ಕಾರದಿAದ ಮಾತ್ರ ಸಮಾಜ ಉದ್ಧಾರ ಆಗಬಲ್ಲದು. ಕಾರಣ ವಾಲ್ಮೀಕಿ ನಾಯಕ ಜನಾಂಗದವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.ಲಕ್ಷೆö್ಮÃಶ್ವರ ತಾಲ್ಲೂಕು ಮಹರ್ಷಿ ವಾಲ್ಮೀಕಿ ನಾಯಕ ವಿವಿದೋದ್ಧೇಶಗಳ ಸಂಘದ ವತಿಯಿಂದ ಸೋಮವಾರ ಪಟ್ಟಣದ ತೇರಿನ ಮನೆ ಆವರಣದಲ್ಲಿ ಜರುಗಿದ ಮಹರ್ಷಿ ವಾಲ್ಮೀಕಿ ಹಾಗೂ ವೀರ ಮದಕರಿ ನಾಯಕ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.‘ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಎಂದೆಂದಿಗೂ ಪೂಜ್ಯನೀಯ. ಅವರು ರಚಿಸಿದ ರಾಮಾಯಣ ಮಹಾಕಾವ್ಯ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ಭಾರತೀಯರ ಬದುಕಿನಲ್ಲಿ ದೊಡ್ಡ ಕ್ರಾಂತಿಯನ್ನೇ ಮಾಡಿವೆ. ಇವರೆಡೂ ಎಂದೆAದಿಗೂ ಅಜರಾಮರವಾಗಿ ಉಳಿಯುತ್ತವೆ. ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ಚಾಲನೆ ನೀಡಿದ್ದರು. ನಾನು ಸಚಿವನಾಗಿದ್ದಾಗ ಎಸ್‌ಟಿ ಜನಾಂಗಕ್ಕೆ ಶೇ.೩ರಷ್ಟಿದ್ದ ಮೀಸಲಾತಿಯನ್ನು ಶೇ.೭ಕ್ಕೆ ಹೆಚ್ಚಿಸಿದ್ದೇನೆ. ಇದಕ್ಕೆ ನಮ್ಮ ರಾಜನಹಳ್ಳಿ ವಾಲ್ಮೀಕಿ ಪೀಠದ ಜ.ಡಾ.ಪ್ರಸನ್ನಾನಂದಪುರಿ ಸ್ವಾಮೀಜಿಯವರ ಬೆಂಬಲ ಹಾಗೂ ಆಶೀರ್ವಾದ ಇತ್ತು’ ಎಂದು ತಿಳಿಸಿದ ಅವರು ‘ಸಧ್ಯ ರಾಜ್ಯ ಸರ್ಕಾರ ಸಮುದಾಯ ಉಳಿಸುವ ಕೆಲಸ ಮಾಡುತ್ತಿಲ್ಲ. ಸಿದ್ಧರಾಮಯ್ಯನವರ ಸರ್ಕಾರ ೧೮೭ ಕೋಟಿ ರೂಪಾಯಿ ವಾಲ್ಮೀಕಿ ನಿಗಮದ ಹಣವನ್ನು ನುಂಗಿ ನೀರು ಕುಡಿದಿದೆ. ಕೇವಲ ನೆಪಕ್ಕೆ ಮಾತ್ರ ಹಿಂದುಳಿದ ಮುಖ್ಯಮಂತ್ರಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ. ಅವರಿಗೆ ಹಿಂದುಳಿದ ನಾಯಕರನ್ನೇ ಮುಖ್ಯಮಂತ್ರಿ ಮಾಡುವ ಉದ್ಧೇಶ ಇದ್ದರೆ ಸತೀಶ ಜಾರಕಿಹೊಳಿ ಅವರನ್ನು ಆಯ್ಕೆ ಮಾಡಲಿ’ ಎಂದು ಸವಾಲು ಹಾಕಿದರು.ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ ‘ನಮ್ಮ ಸಮಾಜದಲ್ಲಿ ಇನ್ನೂ ಬಾಲ್ಯ ವಿವಾಹ ನಡೆಯುತ್ತಿವೆ. ಇದಕ್ಕೆ ಶಿಕ್ಷಣದ ಕೊರತೆಯೇ ಪ್ರಮುಖ ಕಾರಣ. ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಉಪಯೋಗ ಆಗುತ್ತಿಲ್ಲ. ರಾಜ್ಯ ಸರ್ಕಾರ ಸತೀಶ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಮಾಡಿದರೆ ನಮ್ಮ ಸಮಾಜಕ್ಕೆ ಖುಷಿ ಆಗುತ್ತದೆ’ ಎಂದು ತಿಳಿಸಿದರು. ಸಾನ್ನಿಧ್ಯ ವಹಿಸಿದ್ದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ ‘ವಾಲ್ಮೀಕಿ ಸಮಾಜ ಧೈರ್ಯ, ಸಾಹಸ, ಶೌರ್ಯಕ್ಕೆ ಹೆಸರಾಗಿದೆ. ನಾಡಿಗಾಗಿ ಹೋರಾಡಿದ ಧೀಮಂತ ನಾಯಕರು ನಮಗೆಲ್ಲ ಚಿರಪರಿಚಿತರು. ದೊಡ್ಡ ಸಮಾಜ ಆಗಿರುವ ವಾಲ್ಮೀಕಿ ಜನಾಂಗ ತಮ್ಮಲ್ಲಿನ ವೈಮನಸ್ಸುಗಳನ್ನು ಮರೆತು ಸಮಾಜ ಕಟ್ಟಲು ಮುಂದಾಗಬೇಕು. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಮೂಲಕ ಉತ್ತಮ ನಾಗರಿಕರನ್ನಾಗಿ ತಯಾರು ಮಾಡುವ ಜವಾಬ್ದಾರಿ ಪಾಲಕರ ಮೇಲಿದೆ. ರಾಜಕೀಯವಾಗಿ ಸಾಕಷ್ಟು ಪ್ರಬುದ್ಧತೆ ಪಡೆದಿರುವ ನಾಯಕರು ವಾಲ್ಮೀಕಿ ಸಮಾಜದಲ್ಲಿದ್ದಾರೆ. ಆದರೆ ಅವರಿಗೆ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ. ಕಾರಣ ಸಮಾಜ ಬಾಂಧವರು ಒಗ್ಗಟ್ಟಾಗಿ ಹಕ್ಕುಗಳ ಪ್ರತಿಪಾದನೆಗೆ ಪ್ರಯತ್ನಿಸಬೇಕು’ ಎಂದು ಹೇಳಿದರು.ತಾಲ್ಲೂಕು ಮಹರ್ಷಿ ವಾಲ್ಮೀಕಿ ನಾಯಕ ವಿವಿದೋದ್ಧೇಶಗಳ ಸಂಘದ ಅಧ್ಯಕ್ಷ ಭೀಮಣ್ಣ ಯಂಗಾಡಿ ಅಧ್ಯಕ್ಷತೆ ವಹಿಸಿದ್ದರು.ಶಾಸಕ ಡಾ.ಚಂದ್ರು ಲಮಾಣಿ, ಮಾಜಿ ಶಾಸಕರಾದ ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿರು. ಈ ಸಂದರ್ಭದಲ್ಲಿ ಸಣ್ಣವೀರಪ್ಪ ಹಳ್ಳೆಪ್ಪನವರ, ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರ್ಗಣ್ಣವರ, ಸುನಿಲ ಮಹಾಂತಶೆಟ್ಟರ, ಪಂಚ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅಧ್ಯಕ್ಷ ನಾಗರಾಜ ಮಡಿವಾಳರ, ಸಂಘದ ಕಾರ್ಯದರ್ಶಿ ಹನಮಂತ ಜಾಲಿಮರದ, ನಾಗರಾಜ ಕುಲಕರ್ಣಿ, ಫಕ್ಕೀರೇಶ ಮ್ಯಾಟಣ್ಣವರ, ರಾಜು ಓಲೇಕಾರ, ಮಂಜುನಾಥ ಮಾಗಡಿ ಮತ್ತಿತರರು ಇದ್ದರು. ಕೆ.ಎನ್. ಪ್ರಭುರಾಜ ಉಪನ್ಯಾಸ ನೀಡಿದರು. ಬಸವರಾಜ ಗಳಗನಾಥ, ದೊಡ್ಡಪ್ಪ ವಾಲ್ಮೀಕಿ ನಿರೂಪಿಸಿದರು. **ಪೊಟೋ-ಲಕ್ಷ್ಮೇಶ್ವರ ತೇರಿನ ಮನೆ ಆವರಣದಲ್ಲಿ ಸೋಮವಾರ ಮಹರ್ಷಿ ವಾಲ್ಮೀಕಿ ಹಾಗೂ ವೀರಮದಕರಿ ನಾಯಕರ ಜಯಂತ್ಯೋತ್ಸವವನ್ನು ಮಾಜಿ ಸಚಿವ ಬಿ.ಶ್ರೀರಾಮುಲು ಉದ್ಘಾಟಿಸಿದರು | Kannada Prabha

ಸಾರಾಂಶ

ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಎಂದೆಂದಿಗೂ ಪೂಜ್ಯನೀಯ. ಅವರು ರಚಿಸಿದ ರಾಮಾಯಣ ಮಹಾಕಾವ್ಯ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ಭಾರತೀಯರ ಬದುಕಿನಲ್ಲಿ ದೊಡ್ಡ ಕ್ರಾಂತಿಯನ್ನೇ ಮಾಡಿವೆ.

ಲಕ್ಷ್ಮೇಶ್ವರ: ಶಿಕ್ಷಣ ಮತ್ತು ಉತ್ತಮ ಸಂಸ್ಕಾರದಿಂದ ಮಾತ್ರ ಸಮಾಜ ಉದ್ಧಾರ ಆಗಬಲ್ಲದು. ಕಾರಣ ವಾಲ್ಮೀಕಿ ನಾಯಕ ಜನಾಂಗದವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದರು.ತಾಲೂಕು ಮಹರ್ಷಿ ವಾಲ್ಮೀಕಿ ನಾಯಕ ವಿವಿಧೋದ್ದೇಶಗಳ ಸಂಘದ ವತಿಯಿಂದ ಸೋಮವಾರ ಪಟ್ಟಣದ ತೇರಿನ ಮನೆ ಆವರಣದಲ್ಲಿ ಜರುಗಿದ ಮಹರ್ಷಿ ವಾಲ್ಮೀಕಿ ಹಾಗೂ ವೀರ ಮದಕರಿ ನಾಯಕ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಎಂದೆಂದಿಗೂ ಪೂಜ್ಯನೀಯ. ಅವರು ರಚಿಸಿದ ರಾಮಾಯಣ ಮಹಾಕಾವ್ಯ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ಭಾರತೀಯರ ಬದುಕಿನಲ್ಲಿ ದೊಡ್ಡ ಕ್ರಾಂತಿಯನ್ನೇ ಮಾಡಿವೆ. ಇವರೆಡೂ ಎಂದೆಂದಿಗೂ ಅಜರಾಮರವಾಗಿ ಉಳಿಯುತ್ತವೆ. ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ಚಾಲನೆ ನೀಡಿದ್ದರು. ನಾನು ಸಚಿವನಾಗಿದ್ದಾಗ ಎಸ್‌ಟಿ ಜನಾಂಗಕ್ಕೆ ಶೇ. ೩ರಷ್ಟಿದ್ದ ಮೀಸಲಾತಿಯನ್ನು ಶೇ. ೭ಕ್ಕೆ ಹೆಚ್ಚಿಸಿದ್ದೇನೆ. ಇದಕ್ಕೆ ನಮ್ಮ ರಾಜನಹಳ್ಳಿ ವಾಲ್ಮೀಕಿ ಪೀಠದ ಡಾ. ಪ್ರಸನ್ನಾನಂದಪುರಿ ಸ್ವಾಮೀಜಿಯವರ ಬೆಂಬಲ ಹಾಗೂ ಆಶೀರ್ವಾದ ಇತ್ತು ಎಂದರು.

ಸಧ್ಯ ರಾಜ್ಯ ಸರ್ಕಾರ ಸಮುದಾಯ ಉಳಿಸುವ ಕೆಲಸ ಮಾಡುತ್ತಿಲ್ಲ. ಸಿದ್ದರಾಮಯ್ಯನವರ ಸರ್ಕಾರ ₹೧೮೭ ಕೋಟಿಯನ್ನು ವಾಲ್ಮೀಕಿ ನಿಗಮದ ಹಣವನ್ನು ನುಂಗಿ ನೀರು ಕುಡಿದಿದೆ. ಕೇವಲ ನೆಪಕ್ಕೆ ಮಾತ್ರ ಹಿಂದುಳಿದ ಮುಖ್ಯಮಂತ್ರಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ. ಅವರಿಗೆ ಹಿಂದುಳಿದ ನಾಯಕರನ್ನೇ ಮುಖ್ಯಮಂತ್ರಿ ಮಾಡುವ ಉದ್ದೇಶ ಇದ್ದರೆ ಸತೀಶ ಜಾರಕಿಹೊಳಿ ಅವರನ್ನು ಆಯ್ಕೆ ಮಾಡಲಿ ಎಂದು ಸವಾಲು ಹಾಕಿದರು.ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ, ನಮ್ಮ ಸಮಾಜದಲ್ಲಿ ಇನ್ನೂ ಬಾಲ್ಯವಿವಾಹ ನಡೆಯುತ್ತಿವೆ. ಇದಕ್ಕೆ ಶಿಕ್ಷಣದ ಕೊರತೆಯೇ ಪ್ರಮುಖ ಕಾರಣ. ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಉಪಯೋಗ ಆಗುತ್ತಿಲ್ಲ. ರಾಜ್ಯ ಸರ್ಕಾರ ಸತೀಶ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಮಾಡಿದರೆ ನಮ್ಮ ಸಮಾಜಕ್ಕೆ ಖುಷಿ ಆಗುತ್ತದೆ ಎಂದರು. ಸಾನ್ನಿಧ್ಯ ವಹಿಸಿದ್ದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಡಾ. ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ, ವಾಲ್ಮೀಕಿ ಸಮಾಜ ಧೈರ್ಯ, ಸಾಹಸ, ಶೌರ್ಯಕ್ಕೆ ಹೆಸರಾಗಿದೆ. ನಾಡಿಗಾಗಿ ಹೋರಾಡಿದ ಧೀಮಂತ ನಾಯಕರು ನಮಗೆಲ್ಲ ಚಿರಪರಿಚಿತರು. ದೊಡ್ಡ ಸಮಾಜ ಆಗಿರುವ ವಾಲ್ಮೀಕಿ ಜನಾಂಗ ತಮ್ಮಲ್ಲಿನ ವೈಮನಸ್ಸು ಮರೆತು ಸಮಾಜ ಕಟ್ಟಲು ಮುಂದಾಗಬೇಕು. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಮೂಲಕ ಉತ್ತಮ ನಾಗರಿಕರನ್ನಾಗಿ ತಯಾರು ಮಾಡುವ ಜವಾಬ್ದಾರಿ ಪಾಲಕರ ಮೇಲಿದೆ. ರಾಜಕೀಯವಾಗಿ ಸಾಕಷ್ಟು ಪ್ರಬುದ್ಧತೆ ಪಡೆದಿರುವ ನಾಯಕರು ವಾಲ್ಮೀಕಿ ಸಮಾಜದಲ್ಲಿದ್ದಾರೆ. ಆದರೆ ಅವರಿಗೆ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ. ಕಾರಣ ಸಮಾಜದವರು ಒಗ್ಗಟ್ಟಾಗಿ ಹಕ್ಕುಗಳ ಪ್ರತಿಪಾದನೆಗೆ ಪ್ರಯತ್ನಿಸಬೇಕು ಎಂದರು.ತಾಲೂಕು ಮಹರ್ಷಿ ವಾಲ್ಮೀಕಿ ನಾಯಕ ವಿವಿಧೋದ್ದೇಶಗಳ ಸಂಘದ ಅಧ್ಯಕ್ಷ ಭೀಮಣ್ಣ ಯಂಗಾಡಿ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕರಾದ ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿದರು. ಈ ಸಂದರ್ಭದಲ್ಲಿ ಸಣ್ಣವೀರಪ್ಪ ಹಳ್ಳೆಪ್ಪನವರ, ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರ್ಗಣ್ಣವರ, ಸುನಿಲ ಮಹಾಂತಶೆಟ್ಟರ, ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ನಾಗರಾಜ ಮಡಿವಾಳರ, ಸಂಘದ ಕಾರ್ಯದರ್ಶಿ ಹನಮಂತ ಜಾಲಿಮರದ, ನಾಗರಾಜ ಕುಲಕರ್ಣಿ, ಫಕ್ಕೀರೇಶ ಮ್ಯಾಟಣ್ಣವರ, ರಾಜು ಓಲೇಕಾರ, ಮಂಜುನಾಥ ಮಾಗಡಿ ಮತ್ತಿತರರು ಇದ್ದರು. ಕೆ.ಎನ್. ಪ್ರಭುರಾಜ ಉಪನ್ಯಾಸ ನೀಡಿದರು. ಬಸವರಾಜ ಗಳಗನಾಥ, ದೊಡ್ಡಪ್ಪ ವಾಲ್ಮೀಕಿ ನಿರೂಪಿಸಿದರು.

PREV

Recommended Stories

ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ